ಆದಿಪುರುಷ್‌ ಚಿತ್ರತಂಡದ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ʼಹಿಂದೂ ಸೇನಾʼ ಮುಖಂಡ

Date:

ಆಕ್ಷೇಪಾರ್ಹ ಸಂಭಾಷಣೆ ತೆಗೆಯಲು ಆಗ್ರಹ

ಚಿತ್ರತಂಡದ ವಿರುದ್ಧ ವ್ಯಾಪಕ ಆಕ್ರೋಶ

ತೆಲುಗಿನ ಸ್ಟಾರ್‌ ನಟ ಪ್ರಭಾಸ್‌ ಮುಖ್ಯಭೂಮಿಕೆಯ, ಓಂ ರಾವತ್‌ ನಿರ್ದೇಶನದ ʼಆದಿಪುರುಷ್‌ʼ ಸಿನಿಮಾ ಜಗತ್ತಿನಾದ್ಯಂತ ಪ್ರದರ್ಶನ ಕಾಣುತ್ತಿದೆ. ರಾಮಾಯಣದ ಕಥೆಯನ್ನು ಆಧರಿಸಿ ತೆರೆಗೆ ಬಂದಿರುವ ಈ ಚಿತ್ರದಲ್ಲಿ ಹಿಂದೂ ದೇವತೆಗಳಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿರುವ ʼಹಿಂದೂ ಸೇನಾʼ ಸಂಘಟನೆಯ ಅಧ್ಯಕ್ಷ ವಿಷ್ಣು ಗುಪ್ತಾ, ಚಿತ್ರತಂಡದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೆಹಲಿ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದೂ ಸೇನಾ ಅಧಕ್ಷ ವಿಷ್ಣು ಗುಪ್ತಾ ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ, ” ʼಆದಿಪುರುಷ್‌ʼ ಚಿತ್ರದಲ್ಲಿ ಹಿಂದೂ ದೇವತೆಗಳಾದ ರಾಮ, ಸೀತೆ, ಹನುಮಂತನ ಪಾತ್ರಗಳನ್ನು ಅಸಂಬದ್ಧವಾಗಿ ಚಿತ್ರಿಸಲಾಗಿದೆ. ಹಿಂದೂ ದೇವತೆಗಳ ಕುರಿತ ಆಕ್ಷೇಪಾರ್ಹ ಸಂಭಾಷಣೆಗಳು ಕೂಡ ಚಿತ್ರದಲ್ಲಿವೆ. ʼಆದಿಪುರುಷ್‌ʼ ಚಿತ್ರತಂಡ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದೆ. ವಾಲ್ಮಿಕಿ ಮಹರ್ಷಗಳು ರಚಿಸಿದ ʼರಾಮಾಯಣʼ ಮತ್ತು ಸಂತ ತುಳಸಿದಾಸರ ʼರಾಮಚರಿತ ಮಾನಸʼ ಮಹಾಕಾವ್ಯಗಳಲ್ಲಿ ಇರುವ ಕಥೆಗೂ ʼಆದಿಪುರುಷ್‌ʼ ಚಿತ್ರದಲ್ಲಿನ ನಿರೂಪಣೆಗೆ ಸಂಬಂಧವೇ ಇಲ್ಲ” ಎಂದು ಆರೋಪಿಸಿದ್ದಾರೆ. ಚಿತ್ರದಲ್ಲಿನ ಆಕ್ಷೇಪಾರ್ಹ ಸನ್ನಿವೇಶಗಳು ಮತ್ತು ಸಂಭಾಷಣೆಗಳನ್ನು ಕೂಡಲೇ ತೆಗೆದು ಹಾಕಲು ಚಿತ್ರತಂಡಕ್ಕೆ ಸೂಚಿಸುವಂತೆ ಮನವಿ ಮಾಡಿದ್ದಾರೆ.

ಶಿವಸೇನಾದ ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಕೂಡ ʼಆದಿಪುರುಷ್‌ʼ ಚಿತ್ರತಂಡದ ವಿರುದ್ಧ ಸರಣಿ ಟ್ವೀಟ್‌ಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, “ಆದಿಪುರುಷ್‌ ಸಿನಿಮಾಗೆ ಸಂಭಾಷಣೆ ಬರೆದಿರುವ ಮನೋಜ್‌ ಮುಂತಾಶಿರ್‌ ಮತ್ತು ನಿರ್ದೇಶಕ ಓಂ ರಾವತ್‌ ಇಬ್ಬರೂ ಭಾರತೀಯರ ಕ್ಷಮೆ ಕೇಳಬೇಕು. ಚಿತ್ರದಲ್ಲಿ ನಮ್ಮ ದೇವತೆಗಳ ಬಗ್ಗೆ ವಿಶೇಷವಾಗಿ ಹನುಮಂತನ ಕುರಿತ ಸಂಭಾಷಣೆಗಳು ಕೀಳುಮಟ್ಟದ್ದಾಗಿವೆ. ಮನರಂಜನೆಯ ಹೆಸರಿನಲ್ಲಿ ಭಾರತೀಯರ ಭಾವನೆಗಳಿಗೆ ನೋವುಂಟು ಮಾಡಲಾಗುತ್ತಿದೆ. ಹಣ ಗಳಿಕೆಯ ಉದ್ದೇಶಕ್ಕೆ ಮರ್ಯಾದಾ ಪುರುಷೋತ್ತಮ ರಾಮನ ಕುರಿತು ಬೇಕಾಬಿಟ್ಟಿ ಸಿನಿಮಾ ಮಾಡಿ ಅಗೌರವ ಸಲ್ಲಿಸುವುದು ಸ್ವೀಕಾರಾರ್ಹವಲ್ಲ” ಎಂದಿದ್ದಾರೆ.

ʼಆದಿಪುರುಷ್‌ʼ ಸಿನಿಮಾದ ಮೊದಲ ಟೀಸರ್‌ ಕಳಪೆಯಾಗಿದೆ ಎಂಬ ಟೀಕೆಗಳು ಕೇಳಿಬಂದ ಬೆನ್ನಲ್ಲೇ ನಿರ್ದೇಶಕ ಓಂ ರಾವತ್‌, ಧಾರ್ಮಿಕ ಭಾವನೆಗಳನ್ನು ಮುಂದಿರಿಸಿಕೊಂಡು ಭರ್ಜರಿಯಾಗಿ ಸಿನಿಮಾ ಪ್ರಚಾರ ಮಾಡಿದ್ದರು. ಸದ್ಯ ಅದೇ ಪ್ರಚಾರ ತಂತ್ರ ಇಡೀ ಚಿತ್ರತಂಡಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಈ ಸುದ್ದಿ ಓದಿದ್ದೀರಾ? ನೇಪಾಳದಲ್ಲಿ ಆದಿಪುರುಷ್‌ ಸಿನಿಮಾ ಪ್ರದರ್ಶನ ರದ್ದು

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಮಹಾರಾಷ್ಟ್ರ ಮುಖ್ಯಮಂತ್ರಿ ಏಕ್‌ನಾಥ್‌ ಶಿಂಧೆ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚವ್ಹಾಣ್‌, ಹರ್ಯಾಣದ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ ಸೇರಿದಂತೆ ಈ ಚಿತ್ರವನ್ನು ಬೆಂಬಲಿಸಿದ್ದ ಬಿಜೆಪಿ ನಾಯಕರು ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಪ್ರಿಯಾಂಕಾ ಚತುರ್ವೇದಿ ಆಗ್ರಹಿಸಿದ್ದಾರೆ. ವ್ಯಾಪಾಕ ಟೀಕೆ ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ ಮೊದಲ ದಿನ ಚಿತ್ರ 140 ಕೋಟಿ ಗಳಿಸಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...