ಚುನಾವಣಾ ಪ್ರಚಾರ | ಸುದೀಪ್‌ ನೋಡಲು ಮುಗಿಬಿದ್ದ ಅಭಿಮಾನಿಗಳಿಗೆ ಲಾಠಿ ಏಟು

Date:

ನೆಚ್ಚಿನ ನಟನ ನೋಡಲು ಕಾದು ಕುಳಿತ ಸಂಡೂರಿನ ಅಭಿಮಾನಿಗಳಿಗೆ ನಿರಾಸೆ

ಕೂಡ್ಲಿಗಿಯಲ್ಲಿ ಕಿಚ್ಚನ ಅಭಿಮಾನಿಗಳ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ

ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ನಟ ಕಿಚ್ಚ ಸುದೀಪ್‌ ಅವರನ್ನು ನೋಡಲು ಮುಗಿಬಿದ್ದ ಜನರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಕೂಡ್ಲಿಗಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಲೋಕೇಶ್‌ ನಾಯಕ್‌ ಪರ ಸುದೀಪ್‌ ರೋಡ್‌ ಶೋ ನಡೆಸಿದ್ದಾರೆ. ಈ ವೇಳೆ ಸುದೀಪ್‌ ಅವರನ್ನು ಕಣ್ತುಂಬಿಕೊಳ್ಳುವ ಸಲುವಾಗಿ ಸಾವಿರಾರು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. ಜನ ದಟ್ಟಣೆ ಹೆಚ್ಚುತ್ತಲೇ ಅವಸರವಾಗಿ ರೋಡ್‌ ಶೋ ಮುಗಿಸಿದ ಕಿಚ್ಚ ಕಾರು ಏರಿ ಸ್ಥಳದಿಂದ ತೆರಳಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ನೂರಾರು ಅಭಿಮಾನಿಗಳು ಅವರಿದ್ದ ಕಾರನ್ನು ಸುತ್ತುವರಿದಿದ್ದಾರೆ. ಇದರಿಂದ ಕೆಲ ಕಾಲ ಸ್ಥಳದಲ್ಲಿ ನೂಕು ನುಗ್ಗಲು ಕೂಡ ಉಂಟಾಗಿದೆ. ಈ ಹಿನ್ನೆಲೆ ಜನರನ್ನು ಚದುರಿಸುವ ಸಲುವಾಗಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಬುಧವಾರ ಮೊಳಕಾಲ್ಮೂರು, ಜಗಳೂರು ಮತ್ತು ಸಂಡೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಸುದೀಪ್‌ ಪ್ರಚಾರ ನಡೆಸಿದ್ದರು. ಬುಧವಾರ ತಡರಾತ್ರಿ ಸಂಡೂರಿನಲ್ಲಿ ಬಿಜೆಪಿಯ ಅಭ್ಯರ್ಥಿ ಶಿಲ್ಪಾ ಅವರ ಪರ ರೋಡ್‌ ಶೋ ನಡೆಸಿದ್ದ ಸುದೀಪ್‌ ಗುರುವಾರ ಬೆಳಗ್ಗೆ ಕೂಡ ಸಂಡೂರಿನಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಅಭಿಮಾನಿಗಳು ನೀರಿಕ್ಷಿಸಿದ್ದರು. ಆದರೆ, ಅವರು ಬೆಳಗ್ಗೆ ನೇರವಾಗಿ ಕೂಡ್ಲಿಗಿಯತ್ತ ಪ್ರಯಾಣ ಬೆಳೆಸಿದ್ದು, ತಮಗಾಗಿ ಕಾದು ಕುಳಿತಿದ್ದ ಸಂಡೂರಿನ ಅಭಿಮಾನಿಗಳನ್ನು ನಿರಾಸೆಗೊಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವೈಯಕ್ತಿಕ ಕೆಲಸಕ್ಕೆ ಸರ್ಕಾರಿ ವಾಹನ ಬಳಕೆ: ತಾರಾ ವಿರುದ್ಧ ಪ್ರಕರಣ ದಾಖಲು

ಕೂಡ್ಲಿಗಿ ಬಳಿಕ ರಾಣೆಬೆನ್ನೂರು ತಲುಪಿದ ಸುದೀಪ್‌ ಅಲ್ಲಿನ ಬಿಜೆಪಿ ಅಭ್ಯರ್ಥಿ ಅರುಣ್‌ ಕುಮಾರ್‌ ಪರ ಪ್ರಚಾರ ಮಾಡಿದ್ದಾರೆ. ನಂತರ ಹಿರೇಕೆರೂರಿಗೆ ಭೇಟಿ ನೀಡಿರುವ ಕಿಚ್ಚ, ಸಚಿವ ಬಿ.ಸಿ ಪಾಟೀಲ್‌ ಜೊತೆಗೂಡಿ ರೋಡ್‌ ಶೋ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...