ರಮ್ಯಾಗೆ ಕನ್ನಡದಲ್ಲಿ ಪತ್ರ ಬರೆದ ಪೂಜಾ ಗಾಂಧಿ

Date:

ಪೂಜಾ ಗಾಂಧಿ ಚುನಾವಣೆಯಲ್ಲಿ ಸೋತಾಗ ಸಮಾಧಾನ ಹೇಳಿದ್ದ ರಮ್ಯಾ

ಸಹನಟಿಯರ ಬೆಂಬಲಕ್ಕೆ ನಿಲ್ಲುವ ರಮ್ಯಾ ಅವರ ಗುಣ ಇಷ್ಟ ಎಂದ ಪೂಜಾ ಗಾಂಧಿ

ಹಲವು ವರ್ಷಗಳ ಕಾಲ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದ ಖ್ಯಾತ ನಟಿ ರಮ್ಯಾ ನಿರ್ಮಾಪಕಿಯಾಗಿ ಮತ್ತೆ ಸ್ಯಾಂಡಲ್‌ವುಡ್‌ಗೆ ಮರಳಿದ್ದಾರೆ. ಡಾಲಿ ಧನಂಜಯ ಮುಖ್ಯಭೂಮಿಕೆಯ ʼಉತ್ತರಖಾಂಡʼ ಚಿತ್ರದಲ್ಲಿ ನಾಯಕಿಯ ಪಾತ್ರದಲ್ಲೂ ನಟಿಸುತ್ತಿದ್ದಾರೆ. ಈ ಮೂಲಕ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್‌ ಆರಂಭಿಸಿರುವ ರಮ್ಯಾ, ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ʼವೀಕೆಂಡ್‌ ವಿಥ್‌ ರಮೇಶ್‌ʼ 5ನೇ ಆವೃತ್ತಿಯಲ್ಲಿ ಅತಿಥಿಯಾಗಿ ಭಾಗವಹಿಸಿದ್ದಾರೆ. ಸಾಧಕರ ಬದುಕಿನ ಕಥೆಯನ್ನು ಮೆಲುಕು ಹಾಕುವ ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ರಮ್ಯಾ ಅವರಿಗೆ ಕನ್ನಡದ ಮತ್ತೊಬ್ಬ ನಟಿ ಪೂಜಾ ಗಾಂಧಿ ಶುಭ ಹಾರೈಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಮ್ಯಾ ಅತಿಥಿಯಾಗಿ ಭಾಗವಹಿಸಿರುವ ʼವೀಕೆಂಡ್‌ ವಿಥ್‌ ರಮೇಶ್‌ʼ ರಿಯಾಲಿಟಿ ಶೋನ 5ನೇ ಆವೃತ್ತಿಯ ಮೊದಲ ಸಂಚಿಕೆ ಶನಿವಾರ ರಾತ್ರಿ ʼಝೀ ಕನ್ನಡʼ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಪ್ರಚಾರದ ಭಾಗವಾಗಿ ವಾಹಿನಿ, ಕಾರ್ಯಕ್ರಮದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದೆ. ವಿಡಿಯೋಗಳನ್ನು ನೋಡಿ ಕಾತುರರಾಗಿರುವ ಪೂಜಾ ಗಾಂಧಿ, ರಮ್ಯಾ ಅವರಿಗಾಗಿ ವಿಶೇಷ ಪತ್ರವನ್ನು ಬರೆದು ಶುಭ ಹಾರೈಸಿದ್ದಾರೆ. ಪೂಜಾ ಗಾಂಧಿ ತಮ್ಮ ಕೈಯಾರೆ ಕನ್ನಡದಲ್ಲಿ ಈ ಪತ್ರ ಬರೆದಿರುವುದು ಗಮನಾರ್ಹ.

“ರಮ್ಯಾ ಅದ್ಭುತ ವ್ಯಕ್ತಿತ್ವವುಳ್ಳ ದಿಟ್ಟ ಮಹಿಳೆ. ಚಿತ್ರರಂಗದಲ್ಲಿನ ಸಹನಟಿಯರ ಪರವಾಗಿ ನಿಲ್ಲುವ ಅವರ ಗುಣ ನನಗೆ ಬಹಳ ಇಷ್ಟವಾಗುತ್ತದೆ. ಈಗಲೂ ಚೆನ್ನಾಗಿ ನೆನಪಿದೆ. ನಾನು ರಾಯಚೂರಿನ ಚುನಾವಣೆಯಲ್ಲಿ ಸೋತಾಗ ʼಒಳ್ಳೆಯ ಪ್ರಯತ್ನ ಮಾಡಿದ್ದೀರಿʼ ಎಂದು ಸಮಾಧಾನ ಹೇಳಿದ್ದರು. ನಿಮ್ಮ ಪ್ರೊಡಕ್ಷನ್‌ ಕಂಪನಿಗೆ ಶುಭವಾಗಲಿ. ನಿಮ್ಮ ಸಂಸ್ಥೆಯಿಂದ ರಾಷ್ಟ್ರಮಟ್ಟದ ಕನ್ನಡ ಸಿನಿಮಾಗಳು ಬರಲಿ” ಎಂದು ಮೋಹಕ ತಾರೆಗೆ ಶುಭ ಕೋರಿದ್ದಾರೆ.

ಸದ್ಯ ನಟನೆಯಿಂದ ಅಂತರ ಕಾಯ್ದುಕೊಂಡಿರುವ ಪೂಜಾ ಗಾಂಧಿ, ಕನ್ನಡ ಭಾಷೆಯ ಬರವಣಿಗೆಯನ್ನು ಕಲಿತು ಸಹ ನಟಿಗೆ ಕನ್ನಡದಲ್ಲೇ ಬರೆದಿರುವ ಪತ್ರ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಪೂಜಾ ಗಾಂಧಿಯವರ ಪತ್ರಕ್ಕೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ರಮ್ಯಾ ಧನ್ಯವಾದ ತಿಳಿಸಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...