ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ಭೇಟಿ ಮಾಡಿದ ಪ್ರೇಮ್, ರಕ್ಷಿತಾ

Date:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್‌ ಅವರನ್ನು ನಿರ್ದೇಶಕ ಜೋಗಿ ಪ್ರೇಮ್‌ ಮತ್ತು ನಟಿ ರಕ್ಷಿತಾ ಭೇಟಿಯಾಗಿದ್ದಾರೆ.

ನಟ ದರ್ಶನ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ರಕ್ಷಿತಾ, ಪ್ರೇಮ್ ಇಬ್ಬರೂ ಕೂಡಾ ಜೈಲಿನಲ್ಲಿ ದರ್ಶನ್ ಜೊತೆ ನಡೆದ ಮಾತುಕತೆ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಆದರೆ “ಕಾನೂನಿಗಿಂತ ಯಾರೂ ದೊಡ್ಡವರಲ್ಲ” ಎಂದು ಹೇಳಿದ್ದಾರೆ.

ನಟಿ ರಕ್ಷಿತಾ ಪ್ರೇಮ್ ಮಾತನಾಡಿ, “ಕಳೆದ ಹದಿನೈದು ಇಪ್ಪತ್ತು ದಿನಗಳಿಂದ ಏನೆಲ್ಲ ನಡೆದಿದೆಯೊ, ಮಾಧ್ಯಮಗಳು ಏನೆಲ್ಲ ತೋರಿಸಿದೆಯೊ ಅದು ಅತ್ಯಂತ ದುರಾದೃಷ್ಟಕರ. ನಾನು ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಹೇಳಲು ಇಷ್ಟಪಡುತ್ತೇನೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ದರ್ಶನ್ ಪ್ರಕರಣ | ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ಅಭಿಮಾನಿ ಬಂಧನ

ಇನ್ನು ಜೋಗಿ ಪ್ರೇಮ್ ಮಾತನಾಡಿ, “ದರ್ಶನ್ ನಮಗೆ ಮತ್ತು ಎಲ್ಲರಿಗೂ ಸ್ನೇಹಿತರು. ಸದ್ಯ ಈ ಪ್ರಕರಣ ಕೋರ್ಟ್‌ನಲ್ಲಿದೆ. ಹಾಗಾಗಿ ನಾವು ಏನೂ ಮಾತನಾಡಲು ಹೋಗಬಾರದು” ಎಂದು ಹೇಳಿದರು.

ಜೊತೆಗೆ, “ರೇಣುಕಾಸ್ವಾಮಿಯವರ ಆತ್ಮಕ್ಕೆ ಶಾಂತಿ ಸಿಗಲಿ. ಕಾನೂನು ಪ್ರಕಾರವಾಗಿ ಏನೆಲ್ಲ ನಡೆಯಬೇಕೊ ಅದೆಲ್ಲವೂ ಕೂಡಾ ಆಗುತ್ತಿದೆ. ಕಾನೂನು ಪ್ರಕಾರ ಯಾರೂ ಕೂಡಾ ದೊಡ್ಡವರಲ್ಲ” ಎಂದು ತಿಳಿಸಿದ್ದಾರೆ.

ಇನ್ನು ಜೈಲಿನಲ್ಲಿ ದರ್ಶನ್ ಹೇಗಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಕ್ಷಿತಾ ಪ್ರೇಮ್, “ದರ್ಶನ್ ಹೇಗಿದ್ದಾರೆ ಎಂದು ಕೇಳಲು ನಾವು ಬಂದಿದ್ದೆವು. ಇಂತಹ ಸಮಯದಲ್ಲಿ ಯಾರಾದರೂ ಆರಾಮಾಗಿ ಇರಲು ಆಗುತ್ತಾ” ಎಂದರು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...

ಕನ್ನಡಿಗರು ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ಹೀಗಂದಿದ್ಯಾಕೆ ಸಿಎಂ?

ಮೈಸೂರು, ಬೆಂಗಳೂರು ಹಾಗೂ ಹುಬ್ಬಳಿಯಲ್ಲಿ ನಡೆಯಬೇಕಿದ್ದ ರೈಲ್ವೆ ಇಲಾಖೆ ಮುಂಬಡ್ತಿ ಪರೀಕ್ಷೆಗಳನ್ನು...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...