ಮನೆ ಊಟದಿಂದ ತೊಂದರೆಯಾದರೆ ಯಾರು ಹೊಣೆ?: ದರ್ಶನ್ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪ್ರಶ್ನೆ

Date:

‘ನಟ ದರ್ಶನ್‌ ಗೆ ಮನೆ ಊಟ ಪಡೆಯಲು ಅನುಮತಿ ನೀಡಿದರೆ ಮತ್ತು ಅದನ್ನು ಉಂಡು ನಾಳೆ ಅವರಿಗೆ ಏನಾದರೂ ಹೆಚ್ಚುಕಡಿಮೆ ಆದರೆ ಅದಕ್ಕೆ ಜೈಲು ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ. ಹಾಗಾಗಿ, ದರ್ಶನ್‌ ಕೋರಿರುವ ಮನೆ ಊಟ ಮತ್ತು ಇತರೆ ಸವಲತ್ತುಗಳ ಬೇಡಿಕೆಯನ್ನು ಯಾವ ಕಾರಣಕ್ಕೂ ಮನ್ನಿಸಬಾರದು’ ಎಂದು ಪ್ರಾಸಿಕ್ಯೂಷನ್‌ ಹೈಕೋರ್ಟ್‌ಗೆ ಮನವಿ ಮಾಡಿದೆ.‌

‘ನನಗೆ ಮನೆಯಿಂದ ಊಟ, ಬಟ್ಟೆ, ಚಾಕು, ಕತ್ತರಿ, ಫೋರ್ಕ್‌ ಮತ್ತು ಪುಸ್ತಕಗಳನ್ನು ತರಿಸಿಕೊಳ್ಳಲು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಜೈಲು ಅಧೀಕ್ಷಕರಿಗೆ ನಿರ್ದೇಶಿಸಬೇಕು’ ಎಂದು ಕೋರಿ ದರ್ಶನ್‌ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿ.ಜಿ.ಭಾನುಪ್ರಕಾಶ್ ಅವರು ದರ್ಶನ್ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಪೀಠಕ್ಕೆ ಲಿಖಿತ ಆಕ್ಷೇಪಣೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸಿದೆ. ಈ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ ಆರೋಗ್ಯ ಚೆನ್ನಾಗಿಯೇ ಇದೆ. ಒಂದು ವೇಳೆ ಏನಾದರೂ ವ್ಯತ್ಯಯ ಉಂಟಾದರೆ ಜೈಲಿನಲ್ಲೇ ಉತ್ತಮ ಚಿಕಿತ್ಸಾ ಸೌಲಭ್ಯವಿದೆ. ಅಂತೆಯೇ, ಪ್ರತಿಯೊಬ್ಬ ಕೈದಿಯ ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕಾಂಶಯುಕ್ತ ಆಹಾರವನ್ನೇ ನೀಡಲಾಗುತ್ತಿದೆ’ ಎಂದು ವಿವರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಕಾರಕ್ಕೆ ಇಕ್ಕಟ್ಟು ತಂದ ಖಾಸಗಿ ಮೀಸಲು ಸಮಸ್ಯೆ

‘ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಕೈಪಿಡಿ–2021ರ ನಿಯಮ 720 ಹಾಗೂ 728ರ ಅನುಸಾರ ಕೊಲೆ ಪ್ರಕರಣದ ವಿಚಾರಣಾಧೀನ ಕೈದಿಗಳನ್ನು ಜೈಲಿನಲ್ಲಿ ವಿಶೇಷ ನಿಗಾದಲ್ಲಿಯೇ ಇರಿಸಬೇಕಾಗುತ್ತದೆ. ಅವರು ಪರಾರಿಯಾಗುವ ಅಥವಾ ಆತ್ಮಹತ್ಯೆಗೆ ಪ್ರಯತ್ನಿಸುವಂತಹ ಸಾಧ್ಯತೆಗಳಿರುತ್ತವೆ. ಇಂತಹವರಿಗೆ ಖಾಸಗಿಯಾಗಿ ಮನೆಯಿಂದ ಊಟ, ಬಟ್ಟೆ, ಹಾಸಿಗೆ, ಕುಡಿಯುವ ನೀರಿನ ಲೋಟ, ತಟ್ಟೆ, ಚಪ್ಪಲಿ, ಚಮಚ, ಫೋರ್ಕ್‌ ಹಾಗೂ ಇತರೆ ಅಗತ್ಯ ವಸ್ತುಗಳನ್ನು ತರಿಸಿಕೊಳ್ಳಲು ಅವಕಾಶವಿಲ್ಲ’ ಎಂದು ಸ್ಪಷ್ಟಪಡಿಸಿದೆ.

ಆಕ್ಷೇಪಣೆ ಸ್ವೀಕರಿಸಿದ ನ್ಯಾಯಪೀಠ ಶುಕ್ರವಾರ (ಜುಲೈ 19) ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿತು. ದರ್ಶನ್‌ ಪರ ಹಿರಿಯ ವಕೀಲ ಕೆ.ಎನ್‌.ಫಣೀಂದ್ರ ಹಾಜರಿದ್ದರು.

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌ ಸೇರಿ 17 ಮಂದಿಯ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಗುರುವಾರ ಆದೇಶಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...