ಮಂತ್ರಿಗಿರಿಗೆ ಮಧು ಬಂಗಾರಪ್ಪ ಪಟ್ಟು : ಶಿವಣ್ಣನ ಭೇಟಿಯಾದ ಸುರ್ಜೇವಾಲಾ

Date:

ಸಚಿವ ಸ್ಥಾನಕ್ಕೆ ಪ್ರಭಾವಿ ಶಾಸಕರ ಕಸರತ್ತು

ಮಧು ಬಂಗಾರಪ್ಪ ಮನವೊಲಿಸಲು ಶಿವಣ್ಣನ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯುವ ಸಲುವಾಗಿ ಕಾಂಗ್ರೆಸ್‌ನ ಹಲವು ಪ್ರಭಾವಿ ಶಾಸಕರು ಕಸರತ್ತು ನಡೆಸುತ್ತಿದ್ದಾರೆ. ಇದೇ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌ ಕುಮಾರ್‌ ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಶಿವರಾಜ್‌ ಕುಮಾರ್‌ ಅವರ ಸಂಬಂಧಿ ಮಧು ಬಂಗಾರಪ್ಪ ಕೂಡ ಪ್ರಮುಖರು. ಸದ್ಯ ಮಧು ಬಂಗಾರಪ್ಪ ಅವರಿಗೆ ಮಂತ್ರಿಗಿರಿ ಕೈತಪ್ಪುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಹಿನ್ನೆಲೆ ಮಧು ಬಂಗಾರಪ್ಪ ಅವರ ಅಭಿಮಾನಿಗಳು ತಮ್ಮ ನಾಯಕನಿಗೆ ಸಚಿವ ಸ್ಥಾನ ನೀಡುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕರನ್ನು ಬೆಂಬಲಿಸಿದ್ದ ಶಿವಣ್ಣ ಕೂಡ ತಮ್ಮ ಸಂಬಂಧಿಗೆ ಸಚಿವ ಸ್ಥಾನ ಕೊಡಬೇಕು ಎಂದು ಒತ್ತಾಯಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ರಣದೀಪ್‌ ಸುರ್ಜೇವಾಲಾ ಶಿವಣ್ಣನ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಚುನಾವಣೆಯ ಸಂದರ್ಭದಲ್ಲಿ ಶಿವರಾಜ್‌ ಕುಮಾರ್‌ ಅವರ ಪತ್ನಿ ಗೀತಾ ಕಾಂಗ್ರೆಸ್‌ ಪಕ್ಷ ಸೇರಿದ್ದರು. ಇದಾದ ಬಳಿಕ ಸಿದ್ದರಾಮಯ್ಯ, ಜಗದೀಶ್‌ ಶೆಟ್ಟರ್‌, ಭಿಮ್ಮಣ್ಣ ನಾಯಕ್‌ ಸೇರಿದಂತೆ ಕಾಂಗ್ರೆಸ್‌ನ ಹಲವು ನಾಯಕರ ಪರ ಶಿವಣ್ಣ ಪ್ರಚಾರ ನಡೆಸಿದ್ದರು. ಸದ್ಯ ಈ ಸ್ಟಾರ್‌ ದಂಪತಿಯನ್ನು ಭೇಟಿಯಾಗಿರುವ ರಣದೀಪ್‌ ಸುರ್ಜೇವಾಲಾ, ಪಕ್ಷವನ್ನು ಬೆಂಬಲಿಸಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ಮೇಲ್ನೋಟಕ್ಕೆ ಇದು ಸ್ನೇಹಪೂರ್ವಕ ಭೇಟಿ ಎನ್ನಿಸಿದರೂ ಮಧು ಬಂಗಾರಪ್ಪನವರ ಮಂತ್ರಿಸ್ಥಾನದ ಚರ್ಚೆ ಕೂಡ ನಡೆದಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...