ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ 10 ಕೋಟಿ ರೂ.ನೀಡುವಂತೆ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ.
ಅಮೆರಿಕದಲ್ಲಿ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಧ್ವನಿ ಸಂದೇಶದ ಮೂಲಕ ಬೆದರಿಕೆ ಸಂದೇಶವನ್ನು ಕಳಹಿಸಲಾಗಿದೆ ಎಂದು ವರದಿಯು ತಿಳಿಸಿದೆ.
ಇದನ್ನು ಓದಿದ್ದೀರಾ? ’ಭಾರತ ಬದಲಾಗಿಲ್ಲ, ಪುರುಷರಿಗೆ ಇಂದಿಗೂ ವರ್ಜಿನ್ ಪತ್ನಿಯೇ ಬೇಕು’: ನಟಿ ನೀನಾ ಗುಪ್ತಾ ಕಟು ನುಡಿ
ಮುಂಬೈ ಪೊಲೀಸರು ಈ ಬಗ್ಗೆ ತನಿಖೆಯನ್ನು ಆರಂಭಿಸಿದ್ದು, ಮೊಬೈಲ್ ಸಂಖ್ಯೆಯ ಮೂಲವನ್ನು ಪತ್ತೆಹಚ್ಚಲು ಮತ್ತು ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಪತ್ತೆ ಹಚ್ಚಲು ಅಮೆರಿಕದ ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸಂಪರ್ಕ ಸಾಧಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಲಾರೆನ್ಸ್ ಬಿಷ್ಣೋಯಿ ಈ ಹಿಂದೆ ಸುಲಿಗೆ ಮತ್ತು ಬೆದರಿಕೆ ಪ್ರಕರಣಗಳಲ್ಲಿ ಭಾಗಿಯಾಗಿತ್ತು.





