ನಟಿ ರಶ್ಮಿಕಾಗೆ ಆಪ್ತ ಸಹಾಯಕನಿಂದಲೇ ₹80 ಲಕ್ಷ ವಂಚನೆ

Date:

  • ಹಣಕಾಸಿನ ವ್ಯವಹಾರ ನೋಡಿಕೊಳ್ಳುತ್ತಿದ್ದ ವ್ಯಕ್ತಿಯಿಂದಲೇ ವಂಚನೆ
  • ವಿಚಾರ ತಿಳಿಯುತ್ತಲೇ ಆಪ್ತ ಸಹಾಯಕನನ್ನು ಕೆಲಸದಿಂದ ವಜಾಗೊಳಿಸಿದ ನಟಿ

ಖ್ಯಾತ ನಟಿ ರಶ್ಮಿಕಾ ಮಂದಣ್ಣ ತಮ್ಮ ಆಪ್ತ ಸಹಾಯಕನಿಂದಲೇ ವಂಚನೆಗೊಳಗಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕಳೆದ ಕೆಲ ವರ್ಷಗಳಿಂದ ನಟಿಗೆ ಆಪ್ತ ಸಹಯಾಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬರೋಬ್ಬರಿ 80 ಲಕ್ಷ ರೂಪಾಯಿ ಹಣವನ್ನು ವಂಚಿಸಿದ್ದಾನೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

2016ರಲ್ಲಿ ತೆರೆಕಂಡಿದ್ದ ಕನ್ನಡದ ʼಕಿರಿಕ್‌ ಪಾರ್ಟಿʼ ಸಿನಿಮಾ ಮೂಲಕ ಬೆಳ್ಳಿ ತೆರೆ ಪ್ರವೇಶಿಸಿದ್ದ ರಶ್ಮಿಕಾ ಮಂದಣ್ಣ, ಆರೇಳು ವರ್ಷಗಳ ಅವಧಿಯಲ್ಲಿ ತೆಲುಗು, ತಮಿಳು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿ ಬಹುಭಾಷಾ ನಟಿಯಾಗಿ ಜನಪ್ರಿಯತೆ ಗಳಿಸಿದ್ದಾರೆ. ಮೊದಲ ಚಿತ್ರದ ಯಶಸ್ಸಿನ ನಂತರ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದ ರಶ್ಮಿಕಾ, ತಮ್ಮ ಹಣಕಾಸಿನ ವ್ಯವಹಾರಗಳನ್ನು ನೋಡಿಕೊಳ್ಳುವ ಸಲುವಾಗಿ ಆಪ್ತ ಸಹಾಯಕನನ್ನು ನೇಮಿಸಿಕೊಂಡಿದ್ದರು. ಇದೇ ವ್ಯಕ್ತಿ ಸದ್ಯ 80 ಲಕ್ಷ ರೂಪಾಯಿ ಹಣವನ್ನು ವಂಚಿಸಿದ್ದಾನೆ. ಈ ವಿಚಾರ ತಿಳಿಯುತ್ತಲೇ ರಶ್ಮಿಕಾ ಆತನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ರಶ್ಮಿಕಾ ಆಗಲಿ ಅಥವಾ ಅವರ ಕುಟುಂಬಸ್ಥರಾಗಲಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿಲ್ಲ. ರಾಷ್ಟ್ರೀಯ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವಂಚನೆಯ ಸುದ್ದಿ ಹರಿದಾಡಿದ ಬಳಿಕವೂ ರಶ್ಮಿಕಾ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಆದಿಪುರುಷ್‌ ಚಿತ್ರತಂಡದ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ʼಹಿಂದೂ ಸೇನಾʼ ಮುಖಂಡ

ಅಮಿತಾಭ್‌ ಬಚ್ಚನ್‌ ಮುಖ್ಯಭೂಮಿಕೆಯ ʼಗುಡ್‌ ಬೈʼ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುವ ಮೂಲಕ ಇತ್ತೀಚೆಗೆ ಬಾಲಿವುಡ್‌ ಪ್ರವೇಶಿಸಿದ್ದ ರಶ್ಮಿಕಾ, ʼಮಿಶನ್‌ ಮಜನುʼ ಚಿತ್ರದಲ್ಲೂ ಮಿಂಚಿದ್ದರು. ಸದ್ಯ ರಣಭೀರ್‌ ಕಪೂರ್‌ ಅಭಿನಯದ ʼಅನಿಮಲ್‌ʼ‌ ಚಿತ್ರದಲ್ಲಿ ನಾಯಕಿಯ ಪಾತ್ರದಲ್ಲಿ ನಟಿಸುತ್ತಿದ್ದು, ಅಲ್ಲು ಅರ್ಜುನ್‌ ನಟನೆಯ ʼಪುಷ್ಪ-2ʼ ಚಿತ್ರದಲ್ಲೂ ತೊಡಗಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...