ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

Date:

ನಿವೃತ್ತ ಐಎಎಸ್‌ ಅಧಿಕಾರಿ, ಸ್ಯಾಂಡಲ್‌ವುಡ್‌ ನಟ ಕೆ ಶಿವರಾಮ್ ಅವರು ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗಂಟಲು ಕ್ಯಾನ್ಸರ್‌ನಿಂದ ಬಳಲುತ್ತಿರುವ 71 ವರ್ಷದ ನಟ ಕೆ ಶಿವರಾಮ್ ನಗರದ ಎಚ್.ಸಿ.ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವೃತ್ತಿಯಲ್ಲಿ ಐಎಎಸ್ ಅಧಿಕಾರಿಯಾಗಿದ್ದ ಕೆ ಶಿವರಾಮ್ ಅವರು, ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗರಾಗಿ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದರು. ಐಎಎಸ್ ಅಧಿಕಾರಿಯಾಗಿ, ವಿಜಯಪುರ, ಬೆಂಗಳೂರು,ಮೈಸೂರು,ಕೊಪ್ಪಳ, ದಾವಣಗೆರೆ ಸೇರಿದಂತೆ ಹಲವು ಕಡೆ ಸೇವೆ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗೆ ʼವಿವಾದದ ಸರಕುʼ ಪೂರೈಕೆಯ ಗುತ್ತಿಗೆ ಪಡೆದಿವೆಯೇ ಕನ್ನಡದ ಮಾಧ್ಯಮಗಳು?

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಮೂಲಕ ನಾಯಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. ನಂತರ ಸಾಂಗ್ಲಿಯಾನ 3ʼ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದರು.

ಸಿನಿಮಾರಂಗ ಮಾತ್ರವಲ್ಲದೆ ಅವರು ರಾಜಕೀಯದಲ್ಲಿಯೂ ಸಕ್ರಿಯರಾಗಿದ್ದರು. 2013 ರಲ್ಲಿ ನಿವೃತ್ತಿಯ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದರು. 2014 ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ನಂತರ ಬಿಜೆಪಿಗೆ ಸೇರಿದ್ದರು. ಇತ್ತೀಚಿನ ಕೆಲವು ವರ್ಷಗಳಿಂದ ಛಲವಾದಿ ಮಹಸಭಾ ಅಧ್ಯಕ್ಷರಾಗಿದ್ದರು. ದಲಿತ ಪರ ಹೋರಾಟದಲ್ಲಿ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...