ದರ್ಶನ್‌ ಫೋಟೊವನ್ನು ಬಹಿರಂಗಪಡಿಸಿದ್ದು ಜೈಲಿನಲ್ಲಿದ್ದ ಮತ್ತೊಬ್ಬ ಪಾತಕಿ

Date:

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ತನ್ನ 16 ಮಂದಿ ಸಹಚರರ ಜೊತೆ ಬಂಧಿತನಾಗಿ ಕಳೆದ 65 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಮತ್ತು ಆತನ ತಂಡಕ್ಕೆ ವಿಐಪಿ ಸೌಲಭ್ಯ ಸಿಗುತ್ತಿರುವುದು ಫೋಟೋ ಹಾಗೂ ವಿಡಿಯೋ ಮೂಲಕ ವೈರಲ್‌ ಆಗಿದೆ.

ಫೋಟೊದಲ್ಲಿ ಜೈಲಿನ ಬ್ಯಾರಕ್‌ ಹೊರಗೆ ಕುರ್ಚಿಯಲ್ಲಿ ಕುಳಿತಿರುವ ದರ್ಶನ್‌, ಒಂದು ಕೈಯಲ್ಲಿ ಕಾಫಿ ಮಗ್‌ ಮತ್ತು ಇನ್ನೊಂದು ಕೈಯಲ್ಲಿ ಸಿಗರೇಟ್‌ ಹಿಡಿದಿರುವುದು ಬಹಿರಂಗ ಗೊಂಡಿರುವ ಫೋಟೊದಲ್ಲಿ ಕಾಣಿಸುತ್ತಿದೆ. ರೌಡಿ ಶೀಟರ್‌ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ್‌ ನಾಗರಾಜ್‌, ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ದರ್ಶನ್ ಮ್ಯಾನೇಜರ್‌ ನಾಗರಾಜ್‌ ಹಾಗೂ ಮತ್ತೊಬ್ಬ ಆರೋಪಿ ಕುಳ್ಳ ಸೀನಾ ಜೊತೆಯಲ್ಲಿ ನಗುತ್ತಾ ಮಾತುಕತೆ ನಡೆಸಲಾಗುತ್ತಿದೆ.

ರೌಡಿ ಶೀಟರ್‌ ವೇಲು ಎಂಬ ಕೈದಿ ದರ್ಶನ್‌ ಮತ್ತು ಸಹಚರರು ವಿಶೇಷ ಬ್ಯಾರಕ್‌ ಎದುರಿನ ನಡಿಗೆ ಪಥದ ಬಳಿ ಕುಳಿತು ಹರಟುತ್ತಿದ್ದ ಫೋಟೊವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು, ತನ್ನ ಪತ್ನಿಗೆ ಕಳುಹಿಸಿದ್ದ. ಆತನ ಪತ್ನಿ ತನ್ನ ಸ್ನೇಹಿತರಿಗೆ ಕಳುಹಿಸಿದ್ದರು. ಹೀಗೆ ಆ ಫೋಟೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದರ್ಶನ್‌ಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ; ಏಳು ಅಧಿಕಾರಿಗಳ ಅಮಾನತಿಗೆ ಸೂಚನೆ

ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ 7 ಸಿಬ್ಬಂದಿಯನ್ನು ಗೃಹ ಸಚಿವ ಜಿ ಪರಮೇಶ್ವರ್‌ ಆದೇಶದ ಮೇಲೆ ಅಮಾನತುಮಾಡಲಾಗಿದೆ.

ದರ್ಶನ್ ವಿಡಿಯೊ ಕರೆ ವೈರಲ್

ಜೈಲಿನಲ್ಲಿ ಸಹಚರರ ಜತೆ ಕುಳಿತು ಹರಟೆ ಹೊಡೆಯುತ್ತಿರುವ ಫೋಟೊ ಹರಿದಾಡಿದ ಬೆನ್ನಲ್ಲೇ ದರ್ಶನ್ ಅವರು ಸಹ ಕೈದಿಯೊಬ್ಬರ ಮೊಬೈಲ್‌ನಿಂದ ಆಪ್ತರಿಗೆ ವಿಡಿಯೊ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾದ ದೃಶ್ಯಾವಳಿಯ ತುಣುಕು ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿದೆ. ‘ಊಟ ಆಯಿತಾ, ಆರಾಮವಾಗಿದ್ದೀನಿ’ ಎಂದು ಆಪ್ತನಿಗೆ ಹೇಳಿರುವ ವಿಡಿಯೋ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ದಾಳಿ ನಡೆಸಿದಾಗ ದೊರೆಯದ ಅನಧಿಕೃತ ವಸ್ತುಗಳು

ಅಕ್ರಮ ಚಟುವಟಿಕೆ ನಡೆಯುತ್ತಿರುವ ಶಂಕೆಯಲ್ಲಿ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಶನಿವಾರ ದಿಢೀರ್‌ ದಾಳಿ ನಡೆಸಿ, ಕೈದಿಗಳ ಬ್ಯಾರಕ್‌ಗಳಲ್ಲಿ ತಪಾಸಣೆ ನಡೆಸಿದ್ದರು. ದರ್ಶನ್‌, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಇರುವ ಬ್ಯಾರಕ್‌ಗಳು ಸೇರಿದಂತೆ ಜೈಲಿನ ಎಲ್ಲಾ ಬ್ಯಾರಕ್‌ಗಳನ್ನು ಹಲವು ಗಂಟೆ ಶೋಧಿಸಿದ್ದರು.

‘ಜೈಲಿನಲ್ಲಿ ಮೊಬೈಲ್‌ ಸೇರಿ ಯಾವುದೇ ಅನಧಿಕೃತ ವಸ್ತುಗಳು ದೊರೆತಿಲ್ಲ’ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದರು. ಇದರ ಬೆನ್ನಲ್ಲೇ ದರ್ಶನ್ ಸಹಚರರ ಜತೆ ಕುಳಿತು ಚರ್ಚಿಸುತ್ತಿರುವ ಫೋಟೊ ಈಗ ಬಹಿರಂಗವಾಗಿದೆ.

ವಿಲ್ಸನ್‌ ಗಾರ್ಡನ್‌ ನಾಗನ ವಿರುದ್ಧ ದರೋಡೆ, ಕೊಲೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಜೈಲಿನಲ್ಲಿಯೇ ಕುಳಿತು ಅಕ್ರಮ ಚಟುವಟಿಕೆಗೆ ಸಂಚು ರೂಪಿಸುತ್ತಿದ್ದರು ಎಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿತ್ತು. ಹೀಗಾಗಿ, ವಿಲ್ಸನ್ ಗಾರ್ಡನ್‌ ನಾಗ ಸೇರಿದಂತೆ ಹಲವು ರೌಡಿಗಳನ್ನು ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸುವಂತೆ ಕಾರಾಗೃಹ ಇಲಾಖೆ ಅಧಿಕಾರಿಗಳಿಗೆ ಸಿಸಿಬಿ ಪೊಲೀಸರು ಪತ್ರವನ್ನೂ ಬರೆದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...