500 ಕೋಟಿ ರೂ. ವಂಚನೆ: ಇಬ್ಬರು ಬಾಲಿವುಡ್‌ ನಟಿಯರಿಗೆ ನೋಟಿಸ್

Date:

ಆ್ಯಪ್ ಆಧಾರಿತ 500 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ಬಾಲಿವುಡ್ ನಟಿ ರಿಯಾ ಚಕ್ರವರ್ತಿ, ಹಾಸ್ಯನಟಿ ಭಾರತಿ ಸಿಂಗ್ ಮತ್ತು ಅವರ ಪತಿ ಹರ್ಷ್‌ ಲಿಂಬಾಚಿಯಾಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೈಬಾಕ್ಸ್ ಎಂಬ ಮೊಬೈಲ್ ಅಪ್ಲಿಕೇಶನ್ ಹೆಚ್ಚಿನ ಆದಾಯ ನೀಡುವ ಭರವಸೆಯೊಂದಿಗೆ ಹಣವನ್ನು ಹೂಡಿಕೆ ಮಾಡುವಂತೆ ಜನರನ್ನು ಆಕರ್ಷಿಸುತ್ತಿದ್ದು, ಹಗರಣವನ್ನು ಭೇದಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

‘ದೂರುಗಳ ಅನ್ವಯ, ಒಂಬತ್ತು ಸಾಮಾಜಿಕ ಜಾಲತಾಣ ಪ್ರಭಾವಿಗಳು ಮತ್ತು ಯೂಟ್ಯೂಬರ್‌ಗಳಾದ ಭಾರತಿ ಸಿಂಗ್, ಅವರ ಪತಿ ಹರ್ಷ್‌ ಲಿಂಬಾಚಿಯಾ, ಲಕ್ಷ್ಯ ಚೌಧರಿ, ಆದರ್ಶ್‌ ಸಿಂಗ್, ಸೌರವ್ ಜೋಶಿ, ಅಭಿಷೇಕ್
ಮಲ್ಹಾನ್, ಪುರವ್‌ ಝಾ , ಎಲ್ವಿಶ್‌ ಯಾದವ್ ಮತ್ತು ಅಮಿತ್ ಮತ್ತು ದಿಲ್ರಾಜ್ ಸಿಂಗ್ ರಾವತ್, ಎಂಬುವವರು ಆ್ಯಪ್‌ ಮೂಲಕ ಹಣ ಹೂಡಿಕೆ ಹೂಡುವಂತೆ ಜನರನ್ನು ಆಕರ್ಷಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರೋಪ-ಪ್ರತ್ಯಾರೋಪಗಳೆಷ್ಟು ಕಾಲ? ಆಡಳಿತ, ಅಭಿವೃದ್ಧಿ, ಕಲ್ಯಾಣಕ್ಕೆಷ್ಟು ಸಮಯ?

ಆ್ಯಪ್ಅನ್ನು ಪ್ರಚಾರ ಮಾಡಿದವರಲ್ಲಿ ರಿಯಾ ಚಕ್ರವರ್ತಿ ಕೂಡ ಸೇರಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ರಿಯಾ, ಭಾರತಿ ಮತ್ತು ಅವರ ಪತಿಗೆ ಇಂಟೆಲಿಜೆನ್ಸ್ ಫ್ಯೂಶನ್‌ ಅಂಡ್ ಸ್ಟ್ರಾಟೆಜಿಕ್ ಆಪರೇಶನ್ ಘಟಕವು ನೋಟಿಸ್ ನೀಡಿದೆ. ಮುಂದಿನ ವಾರ ತನಿಖೆಗೆ ಹಾಜರಾಗುವಂತೆ ಸೂಚಿಸಿದೆ.

ಅಭಿಷೇಕ್ ಮಲ್ಹಾನ್, ಎಲ್ವಿಶ್ ಯಾದವ್, ಲಕ್ಷ್ಯ ಚೌಧರಿ ಮತ್ತು ಪುರನ್ ಝಾಗೆ ಶುಕ್ರವಾರವೇ ದೆಹಲಿ ಪೊಲೀಸರು ಸಮನ್ಸ್ ನೀಡಿದ್ದು, ಯಾರೂ ಕೂಡ ತನಿಖೆಗೆ ಹಾಜರಾಗಿಲ್ಲ‘ ಎಂದು ಅಧಿಕಾರಿ ತಿಳಿಸಿದ್ದಾರೆ.

ಅನೇಕ ಸಾಮಾಜಿಕ ಮಾಧ್ಯಮದ ಪ್ರಭಾವಿಗಳು ಮತ್ತು ಯೂಟ್ಯೂಬರ್‌ಗಳ ಹೈಬಾಕ್ಸ್ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಚಾರ ಮಾಡಿದ್ದು, ಅಪ್ಲಿಕೇಶನ್‌ ಮೂಲಕ ಹಣ ಹೂಡಿಕೆ ಮಾಡಲು ಜನರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ಸುಮಾರು 500ಕ್ಕೂ ಹೆಚ್ಚು ದೂರುಗಳು ಬಂದಿವೆ.

ಇದೇ ಫೆಬ್ರುವರಿ ತಿಂಗಳಿನಲ್ಲಿ ಆ್ಯಪ್ ಅನ್ನು ಪ್ರಾರಂಭಸಲಾಗಿದ್ದು, 30,000ಕ್ಕೂ ಹೆಚ್ಚು ಜನರು ಆ್ಯಪ್‌ನಲ್ಲಿ ಹಣವನ್ನು ಹೂಡಿಕೆಮಾಡಿದ್ದಾರೆ. ಹಗರಣದ ಪ್ರಮುಖ ಆರೋಪಿ ಚೆನ್ನೈ ನಿವಾಸಿ ಶಿವರಾಮ್ ಎಂಬಾತನನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...