ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ಗೆ ಚಾಕು ಇರಿತ: ರಾತ್ರಿ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು

Date:

ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಮೇಲೆ ಚಾಕು ಇರಿದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಈ ಸಂಬಂಧ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮುಂಬೈನ ಬಾಂದ್ರಾದಲ್ಲಿ ಸೈಫ್‌ ಅಲಿ ಖಾನ್‌ ಮೇಲೆ ತಡರಾತ್ರಿ 2 ಗಂಟೆಗೆ ದಾಳಿ ನಡೆದಿದೆ. ದರೋಡೆಗೆ ಬಂದಿದ್ದ ಕಿಡಿಗೇಡಿಗಳಿಂದ ಈ ಕೃತ್ಯ ಜರುಗಿದೆ. ಸೈಫ್‌ ಅಲಿ ಖಾನ್‌ಗೆ ಚಾಕುವಿನಿಂದ ಇರಿದು, ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ನಟನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪತ್ನಿ ಕರೀನಾ ಕಪೂರ್‌ ಮತ್ತು ಇಬ್ಬರೂ ಮಕ್ಕಳು ಸುರಕ್ಷಿತವಾಗಿದ್ದಾರೆ.

ಸೈಫ್‌ ಅಲಿ ಖಾನ್‌ ನಿವಾಸಕ್ಕೆ ಮುಂಬೈ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಿಡಿಗೇಡಿಗಳಿಗಾಗಿ ಬಲೆ ಬೀಸಿದ್ದಾರೆ.
ಸೈಫ್ ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಕುಟುಂಬದವರ ಜೊತೆ ಮಲಗಿದ್ದರು. ಇಂದು (ಜನವರಿ 16) ಮುಂಜಾನೆ 2.30ರ ವೇಳೆಗೆ ಕಳ್ಳರು ಮನೆ ಒಳಗೆ ನುಗ್ಗಿದ್ದಾರೆ. ಈ ವೇಳೆ ಎಲ್ಲರಿಗೂ ಎಚ್ಚರ ಆಗಿದೆ. ಆಗ ಸೈಫ್ ಅವರು ಕಳ್ಳರನ್ನು ತಡೆಯಲು ಹೋಗಿದ್ದು, ಈ ವೇಳೆ ಕಳ್ಳರು ಹಲ್ಲೆ ಮಾಡಿದ್ದಾರೆ. ತಕ್ಷಣ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗಾಜಾ ಕದನ ವಿರಾಮಕ್ಕೆ ಇಸ್ರೇಲ್ – ಹಮಾಸ್ ಒಪ್ಪಿಗೆ

ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದ್ದು, ವಿಶೇಷ ಪೊಲೀಸರ ತಂಡ ರಚನೆ ಆಗಿದೆ. ಮನೆ ಹಾಗೂ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಮಾಡಲಾಗುತ್ತಿದೆ. ಸದ್ಯ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

‘ಕಳ್ಳರು 2-3 ಬಾರಿ ಹಲ್ಲೆ ಮಾಡಿದ್ದಾರೆ. ನಾವು ಇದನ್ನು ತನಿಖೆ ನಡೆಸುತ್ತಿದ್ದೇವೆ. ಮುಂಬೈ ಕ್ರೈಮ್ ಬ್ರ್ಯಾಂಚ್ ಕೂಡ ತನಿಖೆ ನಡೆಸುತ್ತಿದೆ. ಮುಂಜಾನೆ 3 ಗಂಟೆಗೆ ಸೈಫ್ ಅವರನ್ನು ಲೀವಾತಿ ಆಸ್ಪತ್ರೆಗೆ ಕರೆತರಲಾಗಿದೆ. ಅವರಿಗೆ ಆರು ಗಾಯಗಳಾಗಿದ್ದು, ಎರಡು ಕಡೆ ಗಂಭೀರ ಗಾಯವಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆನ್ನಿನ ಭಾಗದಲ್ಲಿ ಕಳ್ಳರು ಇರಿದ ಚಾಕು ದೊಡ್ಡ ಗಾಯವನ್ನೇ ಮಾಡಿದೆ ಎನ್ನಲಾಗಿದೆ. ಬೆನ್ನಿನ ಮೂಳೆಗೆ ತೊಂದರೆ ಆಗಿದೆಯೇ ಎನ್ನುವ ಬಗ್ಗೆ ಪರೀಕ್ಷೆ ನಡೆಯುತ್ತಿದೆ. ಸದ್ಯ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯ ಇದೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...