ಮುಂಗಡ ಟಿಕೆಟ್‌ ಬುಕ್ಕಿಂಗ್‌ನಲ್ಲೇ ಮುಗ್ಗರಿಸಿದ ಸಲ್ಮಾನ್‌ ಖಾನ್‌ ಸಿನಿಮಾ

Date:

ಜಗತ್ತಿನಾದ್ಯಂತ 5,700 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿರುವ ಚಿತ್ರ

ಮೂರು ದಿನ ಕಳೆದರೂ 50 ಸಾವಿರದ ಗಡಿ ದಾಟದ ಮುಂಗಡ ಟಿಕೆಟ್‌ ಬುಕ್ಕಿಂಗ್‌

ಬಾಲಿವುಡ್‌ನ ಸ್ಟಾರ್‌ ನಟ ಸಲ್ಮಾನ್‌ ಖಾನ್‌ ಅಭಿನಯದ ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಟ್ರೈಲರ್‌ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರ ಜಗತ್ತಿನಾದ್ಯಂತ 5,700ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣಲಿದೆ ಎಂದು ಖ್ಯಾತ ಸಿನಿಮಾ ವಿಶ್ಲೇಷಕ ತರಣ್‌ ಆದರ್ಶ್‌ ಮಾಹಿತಿ ಹಂಚಿಕೊಂಡಿದ್ದಾರೆ. ಆದರೆ, ನಿರೀಕ್ಷಿತ ಮಟ್ಟಕ್ಕೆ ಚಿತ್ರದ ಮುಂಗಡ ಟಿಕೆಟ್‌ಗಳು ಮಾರಾಟವಾಗಿಲ್ಲ ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಟ್ವಿಟರ್‌ನಲ್ಲಿ ವಿಶೇಷ ಪೋಸ್ಟರ್‌ ಹಂಚಿಕೊಂಡು ಮಾಹಿತಿ ನೀಡಿರುವ ತರಣ್‌ ಆದರ್ಶ್‌,” ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಸಿನಿಮಾ, ಈದ್‌ ಮಿಲಾದ್‌ ಏಪ್ರಿಲ್‌ 21ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ದೇಶಾದ್ಯಂತ 4,500 ಚಿತ್ರಮಂದಿರಗಳನ್ನು ಕಾಯ್ದಿರಿಸಲಾಗಿದ್ದು, 16 ಸಾವಿರ ಪರದೆಗಳಲ್ಲಿ ಚಿತ್ರ ಪ್ರದರ್ಶನ ಕಾಣಲಿದೆ. ಆಸ್ಟ್ರೇಲಿಯಾ, ಅಮೆರಿಕಾ, ಲಂಡನ್‌ ಸೇರಿದಂತೆ 100ಕ್ಕೂ ಹೆಚ್ಚು ದೇಶಗಳ 1,200ಕ್ಕೂ ಅಧಿಕ ಚಿತ್ರಮಂದಿಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

ಏಪ್ರಿಲ್‌ 18ರಂದೇ ಚಿತ್ರದ ಮುಂಗಡ ಟಿಕೆಟ್‌ ಬುಕ್ಕಿಂಗ್‌ ಪ್ರಕ್ರಿಯೆ ಆರಂಭಗೊಂಡಿದ್ದು, ಈವರೆಗೆ ದೇಶಾದ್ಯಂತ 50 ಸಾವಿರ ಟಿಕೆಟ್‌ಗಳು ಮಾತ್ರ ಬಿಕರಿಯಾಗಿವೆ ಎಂದು ವರದಿಯಾಗಿದೆ. ಇತ್ತೀಚೆಗೆ ತೆರೆಕಂಡಿದ್ದ ಶಾರುಖ್‌ ಖಾನ್‌ ಅಭಿನಯದ ʼಪಠಾಣ್‌ʼ ಸಿನಿಮಾ ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಬರೆದಿತ್ತು. ಚಿತ್ರ ಬಿಡುಗಡೆಯಾಗುವ ಮೊದಲೇ 5 ಲಕ್ಷ 56 ಸಾವಿರ ಟಿಕೆಟ್‌ಗಳು ಮಾರಾಟವಾಗಿದ್ದವು. ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಚಿತ್ರ ಕೂಡ ಮುಂಗಡ ಬುಕ್ಕಿಂಗ್‌ನಲ್ಲಿ ಇದೇ ಮಾದರಿಯ ದಾಖಲೆ ನಿರ್ಮಿಸಲಿದೆ ಎಂದು ನಿರೀಕ್ಷಿಸಲಾಗಿತ್ತು.

ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಚಿತ್ರ ಪ್ರೇಮ ಕಥೆ ಮತ್ತು ಕೌಟುಂಬಿಕ ಕಥಾಹಂದರದ ಸುತ್ತ ಮೂಡಿ ಬಂದಿದೆ. ವೈರಿಗಳಿಂದ ನಾಯಕಿಯ ಕುಟುಂಬವನ್ನು ರಕ್ಷಿಸಲು ಹೋರಾಡುವ ಆ್ಯಕ್ಷನ್ ಹೀರೋ ಪಾತ್ರದಲ್ಲಿ ಸಲ್ಮಾನ್‌ ಖಾನ್‌ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿನ ಬಹುತೇಕ ಕಲಾವಿದರು ದಕ್ಷಿಣ ಸಿನಿರಂಗದವರು ಎಂಬುದು ಗಮನಾರ್ಹ. ಕನ್ನಡತಿ ಪೂಜಾ ಹೆಗ್ಡೆ ನಾಯಕಿಯ ಪಾತ್ರದಲ್ಲಿ ಮಿಂಚಿದ್ದು, ವಿಕ್ಟರಿ ವೆಂಕಟೇಶ್‌, ಜಗಪತಿ ಬಾಬು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಫರ್ಹಾದ್‌ ಸಮ್ಜಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಸಲ್ಮಾನ್‌ ಖಾನ್‌ ಅವರ ತಾಯಿ ಸಲ್ಮಾ ಖಾನ್‌ ಬಂಡವಾಳ ಹೂಡಿದ್ದಾರೆ. ಕನ್ನಡಿಗ, ‘ಕೆಜಿಎಫ್‌’ ಖ್ಯಾತಿಯ ರವಿ ಬಸ್ರೂರ್‌ ಅವರ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...