ಗಲ್ಲಾ ಪೆಟ್ಟಿಗೆಯಲ್ಲಿ ಮುಗ್ಗರಿಸಿದ ʼಶಾಕುಂತಲಂʼ

Date:

ಸ್ಟಾರ್‌ ನಟಿ ಸಮಂತಾ ಮುಖ್ಯಭೂಮಿಕೆಯ ಚಿತ್ರ

ವಾರಾಂತ್ಯದಲ್ಲೂ ಒಂದಂಕಿ ದಾಟದ ಗಳಿಕೆ

ತೆಲುಗಿನ ಖ್ಯಾತ ನಟಿ ಸಮಂತಾ ಮುಖ್ಯಭೂಮಿಕೆಯಲ್ಲಿ ಕಳೆದ ಶುಕ್ರವಾರ ತೆರೆಕಂಡಿದ್ದ ʼಶಾಕುಂತಲಂʼ ಸಿನಿಮಾ ಪ್ರೇಕ್ಷಕರನ್ನು ಸೆಳೆಯುವಲ್ಲಿ ವಿಫಲವಾಗಿದೆ. ಪ್ಯಾನ್‌ ಇಂಡಿಯಾ ಮಾದರಿಯಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಗಳಿಕೆಯಲ್ಲೂ ಹಿನ್ನಡೆ ಅನುಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿತ್ರತಂಡ ಹೇಳಿಕೊಂಡಂತೆ ಅಂದಾಜು ₹50 ರಿಂದ ₹80 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ʼಶಾಕುಂತಲಂʼ ಸಿನಿಮಾ, ತೆರೆಕಂಡ ಮೂರು ದಿನಕ್ಕೆ ಜಗತ್ತಿನಾದ್ಯಂತ ಕೇವಲ ₹6.25 ಕೋಟಿಯನ್ನು ಕಲೆ ಹಾಕಿದೆ. ಬಿಡುಗಡೆಯಾದ ಮೊದಲ ದಿನ ₹2.7 ಕೋಟಿ, ಎರಡನೇ ದಿನ ₹1.55 ಕೋಟಿ, ಮೂರನೇ ದಿನ 2 ಕೋಟಿ ಗಳಿಸಿದೆ. ವಾರಾಂತ್ಯದಲ್ಲೂ ಚಿತ್ರದ ಗಳಿಕೆ ಒಂದಂಕಿಯನ್ನು ದಾಟಿಲ್ಲ. ಹೀಗಾಗಿ ʼಶಾಕುಂತಲಂʼ ಗಲ್ಲಾ ಪೆಟ್ಟಿಗೆಯಲ್ಲಿ ಹೀನಾಯ ಸೋಲು ಕಂಡಿದೆ. ಹಾಕಿದ ಬಂಡವಾಳ ಕೂಡ ಹಿಂದಿರುಗಿ ಬಂದಿಲ್ಲ ಎಂದು ಸಿನಿಮಾ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

ಕವಿರತ್ನ ಕಾಳಿದಾಸರ ʼಅಭಿಜ್ಞಾನ ಶಾಕುಂತಲಂʼ ನಾಟಕದ ಕಥೆಯನ್ನು ಆಧರಿಸಿ ತೆಲುಗಿನ ಖ್ಯಾತ ನಿರ್ದೇಶಕ ಗುಣಶೇಖರನ್‌ ʼಶಾಕುಂತಲಂʼ ಚಿತ್ರವನ್ನು ತೆರೆಗೆ ಅಳವಡಿಸಿದ್ದಾರೆ. ಟ್ರೈಲರ್‌ ಮತ್ತು ಹಾಡುಗಳ ಮೂಲಕ ಗಮನ ಸೆಳೆದಿದ್ದ ಈ ಚಿತ್ರ ಪ್ರೇಕ್ಷಕರನ್ನು ಹಿಡಿದಿಡುವಲ್ಲಿ ಯಶಸ್ವಿಯಾಗಿಲ್ಲ.

ಈ ಹಿಂದೆ ಸಮಂತಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ʼಯಶೋಧಾʼ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ₹20 ಕೋಟಿಗಳನ್ನು ಬಾಚಿಕೊಂಡಿತ್ತು. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ʼಶಾಕುಂತಲಂʼ, ʼಯಶೋಧಾʼ ಚಿತ್ರದ ಗಳಿಕೆಯನ್ನು ಕೂಡ ಹಿಂದಿಕ್ಕುವುದು ಅನುಮಾನ ಎನ್ನಲಾಗುತ್ತಿದೆ.

ʼಶಾಕುಂತಲಂʼ ಚಿತ್ರದ ಡಿಜಿಟಲ್‌ ಹಕ್ಕು ಅಂದಾಜು ₹17 ಕೋಟಿ ಮೊತ್ತಕ್ಕೆ ಈಗಾಗಲೇ ಮಾರಾಟವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಸ್ಯಾಟಲೈಟ್‌ ಹಕ್ಕು ಇನ್ನೂ ಮಾರಾಟವಾಗಿಲ್ಲ. ಚಿತ್ರಮಂದಿರಗಳಲ್ಲಿ ʼಶಾಕುಂತಲಂʼ ಪ್ರೇಕ್ಷಕರ ಕೊರತೆ ಎದುರಿಸುತ್ತಿರುವುದರಿಂದ ಸ್ಯಾಟಲೈಟ್‌ ಹಕ್ಕು ಕೂಡ ದೊಡ್ಡ ಮೊತ್ತಕ್ಕೆ ಮಾರಾಟವಾಗುವ ಸಾಧ್ಯತೆ ಇಲ್ಲ. ಹೀಗಾಗಿ ಚಿತ್ರದ ನಿರ್ಮಾಪಕರು ಮತ್ತು ವಿತರಕರು ನಷ್ಟ ಅನುಭವಿಸಲಿದ್ದಾರೆ ಎನ್ನಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...