ಚೆಕ್​ ಬೌನ್ಸ್​ ಪ್ರಕರಣ | ನಟ ನೀನಾಸಂ ಅಶ್ವಥ್ ಬಂಧನ; ಜಾಮೀನಿನ ಮೇಲೆ ಬಿಡುಗಡೆ

Date:

ಚೆಕ್‌ಬೌನ್ಸ್‌ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೆಜಿಎಫ್‌, ಮುಂಗಾರು ಮಳೆ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ಸ್ಯಾಂಡಲ್‌ವುಡ್‌ ನಟ ನೀನಾಸಂ ಅಶ್ವಥ್ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.

ನ್ಯಾಯಾಧೀಶರ​ ಎದುರು ಅಶ್ವಥ್‌ ಅವರು ತಪ್ಪು ಒಪ್ಪಿಕೊಂಡು ಶೇ. 25ರಷ್ಟು ಹಣವನ್ನು ಪಾವತಿ ಮಾಡಿದ್ದಾರೆ. ಆದ ಕಾರಣ ನೀನಾಸಂ ಅಶ್ವತ್ಥ್​ ಅವರಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಇನ್ನುಳಿದ ಹಣವನ್ನು ಪಾವತಿಸಲು ಅವರು ಸಮಯಾವಕಾಶ ಕೋರಿದ್ದಾರೆ.

ಹಾಸನ ಮೂಲದ ರೋಹಿತ್ ಎಂಬುವರಿಂದ ಹಸುಗಳನ್ನು ಖರೀದಿ ಮಾಡಿ ಅವರಿಗೆ 1.50 ಲಕ್ಷ ರೂ.ಗಳ ಚೆಕ್‌ಅನ್ನು ನೀನಾಸಂ ಅಶ್ವಥ್ ನೀಡಿದ್ದರು. ನಂತರ ರೋಹಿತ್ ಆ ಚೆಕ್‌ ಅನ್ನು ಬ್ಯಾಂಕ್‌ಗೆ ವರ್ಗಾಯಿಸಿದಾಗ ಬೌನ್ಸ್ ಆಗಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ | ವಿದ್ಯುತ್‌ ವೈರಿಂಗ್‌ ಪರಿಶೀಲಿಸಿದ್ದಕ್ಕೆ ದಲಿತ ವ್ಯಕ್ತಿಗೆ ಚಪ್ಪಲಿ ನೆಕ್ಕಿಸಿದ ಲೈನ್‌ಮೆನ್

ಈ ಸಂಬಂಧ ಹಾಸನದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದ ರೋಹಿತ್ ಅವರು ನ್ಯಾಯಾಲಯದಿಂದ ನಾಲ್ಕು ಬಾರಿ ಬಂಧನ ವಾರೆಂಟ್ ಹೊರಡಿಸಿದ್ದರೂ ಕೋರ್ಟಿಗೆ ಅಶ್ವಥ್‌ ಹಾಜರಾಗಿರಲಿಲ್ಲ.

ಐದನೆ ಬಾರಿ ಬಂಧನ ವಾರೆಂಟ್ ಜಾರಿಗೊಳಿಸಿದ ಹಿನ್ನಲೆಯಲ್ಲಿ ಹಾಸನ ಬಡಾವಣೆ ಠಾಣೆ ಪೊಲೀಸರು ಅಶ್ವಥ್ ಅವರನ್ನು ಬಂಧಿಸಿ ಶನಿವಾರ ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಹಸುಗಳ ಖರೀದಿ ಬಗ್ಗೆ ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಕೊಂಡು ಶೇ.25ರಷ್ಟು ಹಣ ಪಾವತಿಸುವಂತೆ ನ್ಯಾಯಾಲಯ ಸೂಚನೆ ನೀಡಿತ್ತು. ಅದರಂತೆ ಅಶ್ವತ್ಥ್ ಅವರು ಸ್ಥಳದಲ್ಲಿಯೇ ಹಣ ಪಾವತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಶ್ವಥ್​ ಅವರಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಉಳಿದ ಹಣವನ್ನು ನೀಡಲು ಸಮಯಾವಕಾಶವನ್ನು ಪಡೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...