ನಟ ಸುದೀಪ್‌ಗೆ ಅಪರಿಚಿತರಿಂದ ಬೆದರಿಕೆ

Date:

ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ

ಅಪರಿಚಿತರ ವಿರುದ್ಧ ಪ್ರಕರಣ ದಾಖಲು

ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಕಿಚ್ಚ ಸುದೀಪ್‌ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಹೊತ್ತಿನಲ್ಲೇ ನಟನ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಅಪರಿಚಿತರು ಬೆದರಿಕೆ ಪತ್ರ ಬರೆದಿದ್ದಾರೆ. ಪತ್ರ ಸ್ವೀಕರಿಸಿರುವ ಸುದೀಪ್‌ ಆಪ್ತ ಸಹಾಯಕ ಜ್ಯಾಕ್‌ ಮಂಜು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುದೀಪ್‌ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅಪರಿಚಿತರು ಎರಡು ಪತ್ರಗಳನ್ನು ಬರೆದಿದ್ದಾರೆ. ಈ ಎರಡೂ ಬೆದರಿಕೆ ಪತ್ರಗಳು ಅವರ ಆಪ್ತ ಸಹಾಯಕ ಜ್ಯಾಕ್‌ ಮಂಜು ಅವರಿಗೆ ಕೈಗೆ ಸಿಕ್ಕಿವೆ. ನಟನ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿಯೂ ಬೆದರಿಕೆ ಹಾಕಲಾಗಿದೆ.

ಈ ಹಿನ್ನೆಲೆ ಜ್ಯಾಕ್‌ ಮಂಜು ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬೆದರಿಕೆ ಪತ್ರದ ಮೂಲಕ ಸುದೀಪ್‌ ಅವರ ಘನತೆಗೆ ಧಕ್ಕೆಯುಂಟು ಮಾಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ. ದೂರಿನನ್ವಯ ಪೊಲೀಸರು ಸೆಕ್ಷನ್‌ 506 ಮತ್ತು 504ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ ಇಂದು ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸುದೀಪ್, ದರ್ಶನ್ ಇಂದು ಬಿಜೆಪಿ ಸೇರುವ ಸಾಧ್ಯತೆ

ಮಾರ್ಚ್‌ 29ರಂದು ಸುದೀಪ್‌ ಅವರ ಮನೆಗೆ ಬೆದರಿಕೆ ಪತ್ರಗಳು ಬಂದಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ನಟ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಚರ್ಚೆ ಶುರುವಾದ ಬೆನ್ನಲ್ಲೇ ಬೆದರಿಕೆ ಪತ್ರದ ಪ್ರಕರಣ ಬಹಿರಂಗಗೊಂಡಿದೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...