ದಾಂಪತ್ಯದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಚಂದನ್​ ಶೆಟ್ಟಿ-ನಿವೇದಿತಾ ಗೌಡ ಜೋಡಿ

Date:

ಸ್ಯಾಂಡಲ್‌ವುಡ್ ಜೋಡಿಗಳಲ್ಲಿ ಒಂದಾದ ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಜೋಡಿಯ ದಾಂಪತ್ಯ ಜೀವನದಲ್ಲಿ ಬಿರುಕುಂಟಾಗಿದ್ದು, ವಿಚ್ಛೇದನ ಪಡೆದುಕೊಳ್ಳುವ ನಿಟ್ಟಿನಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ವಿಚ್ಛೇದನ ನೀಡುವಂತೆ ಈ ಜೋಡಿಯು ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

2017ರಲ್ಲಿ ಪ್ರಸಾರವಾದ ‘ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಮತ್ತು ಚಂದನ್​ ಶೆಟ್ಟಿ ಅವರು ಪರಸ್ಪರ ಪರಿಚಯ ಆಗಿದ್ದರು. ಅವರಿಬ್ಬರ ಸ್ನೇಹ ನಂತರ ಪ್ರೀತಿಯಾಗಿ ಬದಲಾಗಿತ್ತು. ಮೈಸೂರಿನ ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಚಂದನ್​ ಶೆಟ್ಟಿ ಅವರು ಪ್ರಪೋಸ್​ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಬಳಿಕ ಈ ಜೋಡಿ ಅದ್ಧೂರಿಯಾಗಿ ಮದುವೆಯಾಗಿದ್ದರು. ಈ ಇಬ್ಬರೂ ಅನ್ಯೋನ್ಯ ಜೀವನ ನಡೆಸುತ್ತಿದ್ದರು ಎನ್ನುವುದಕ್ಕೆ ಅವರೇ ಮಾಡಿಕೊಂಡಿದ್ದ ಹಲವಾರು ರೀಲ್ಸ್ ಸಾಕ್ಷಿಯಾಗಿದ್ದವು. ಆದರೆ, ಏಕಾಏಕಿ ಇಬ್ಬರೂ ನಿನ್ನೆಯಷ್ಟೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಹಲವು ಮಂದಿ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿದೆ.

‘ಡಿವೋರ್ಸ್’ಗೆ ಇನ್ನೂ ಕಾರಣ ತಿಳಿದುಬಂದಿಲ್ಲ. ಆದರೆ, ವೃತ್ತಿ ಜೀವನದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬರೂ ಒಪ್ಪಿಗೆಯ ಮೇರೆಗೆ ಅರ್ಜಿ ಸಲ್ಲಿಸಿದ್ದು, ಇಂದು ಇಬ್ಬರೂ ಬೆಂಗಳೂರಿನ ಫ್ಯಾಮಿಲಿ ಕೋರ್ಟ್‌ಗೆ ಹಾಜರಾಗಿದ್ದು, ಕೋರ್ಟ್ ಮೂಲಕ ದಂಪತಿ ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ನಿವೃತ್ತ ಐಜಿಪಿ ಯು ನಿಸಾರ್ ಅಹ್ಮದ್

26 ಫೆಬ್ರವರಿ 2020ರಂದು ಪ್ರೀತಿಸಿ ಮದ್ವೆ ಆಗಿದ್ದ ಜೋಡಿ, ಸದ್ಯ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇವರಿಬ್ಬರೂ ಸೇರಿ ‘ಕ್ಯಾಂಡಿ ಕ್ರಶ್’ ಎಂಬ ಚಿತ್ರದಲ್ಲಿ ಸಿನಿಮಾವೊಂದರಲ್ಲಿ ನಟಿಸಿದ್ದು, ಇನ್ನೂ ಬಿಡುಗಡೆಯಾಗಬೇಕಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...