ದ್ವಾರಕೀಶ್ ಇನ್ನಿಲ್ಲ | ವದಂತಿ ಹಬ್ಬಿಸಬೇಡಿ ಎಂದು ಸ್ಪಷ್ಟನೆ ನೀಡಿದ ‘ಪ್ರಚಂಡ ಕುಳ್ಳ’

Date:

ಚಂದನವನದ ಪ್ರಚಂಡ ಕುಳ್ಳ ದ್ವಾರಕೀಶ್ ನಿಧನ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರಿಗೆ ಸ್ವತಃ ತಾವೇ ಸ್ಪಷ್ಟನೇ ನೀಡಿದ್ದಾರೆ. “ನಿಮ್ಮೆಲ್ಲರ ಆಶೀರ್ವಾದ ಇರೋವರೆಗೂ ನನಗೆ ಏನು ಆಗಲ್ಲ” ಎಂದು ಹೇಳಿದ್ದಾರೆ.

ದ್ವಾರಕೀಶ್‌ ಅವರು ನಟ, ನಿರ್ದೇಶಕ, ನಿರ್ಮಾಪಕನಾಗಿ ಸಿನಿಮಾರಂಗದಲ್ಲಿ ಗಟ್ಟಿ ನೆಲೆ ಗಿಟ್ಟಿಸಿಕೊಂಡವರು. ಕೆಲ ತಿಂಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಅದಕ್ಕೆ ಸೂಕ್ತ ಚಿಕಿತ್ಸೆ ಕೂಡ ಪಡೆದುಕೊಂಡಿದ್ದರು. ಇದೀಗ ಅವರು ಆರಾಮಾಗಿದ್ದಾರೆ. ದ್ವಾರಕೀಶ್ ಆರೋಗ್ಯದ ಬಗ್ಗೆ ಭಾನುವಾರ (ಏ.30) ಬೆಳಿಗ್ಗೆಯಿಂದ ಇಲ್ಲಸಲ್ಲದ ಊಹಾಪೋಹಗಳು ಹಬ್ಬಿತ್ತು. ಈಗ ಅವರೇ ಸ್ವತಃ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಖುದ್ದಾಗಿ ಮಾಧ್ಯಮಗಳ ಮುಂದೆ ಬಂದು ಮಾತನಾಡಿರುವ ದ್ವಾರಕೀಶ್‌, “ನೀವು ಸಾಕಿದ ದ್ವಾರಕೀಶ್, ಚೆನ್ನಾಗಿದ್ದೀನಿ. ಗಟ್ಟಿಮುಟ್ಟಾಗಿದ್ದೀನಿ. ಯಾವುದೇ ಚಿಂತೆ ಇಲ್ಲ. ನಿಮ್ಮೆಲ್ಲರ ಆಶೀರ್ವಾದ ಇರೋವರೆಗೂ ನನಗೆ ಏನು ಆಗಲ್ಲ” ಎಂದು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2019ರಲ್ಲಿ ಕೂಡ ದ್ವಾರಕೀಶ್ ಅವರು ಆರೋಗ್ಯವಾಗಿಲ್ಲ ಎಂದು ವದಂತಿ ಹಬ್ಬಿತ್ತು. ಆಗಲೂ ಅವರು ವಿಡಿಯೋ ಹಂಚಿಕೊಂಡು ಸ್ಪಷ್ಟನೆ ನೀಡಿದ್ದರು.

ದ್ವಾರಕೀಶ್

ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್​ ಅವರು ನೀಡಿದ ಕೊಡುಗೆ ಅಪಾರ. ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಅವರು ತಮ್ಮ ಛಾಪು ಮೂಡಿಸಿದ್ದಾರೆ. 1966ರಿಂದ ಈ ತನಕ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ‘ದ್ವಾರಕೀಶ್​ ಚಿತ್ರ’ ನಿರ್ಮಾಣ ಸಂಸ್ಥೆ ಮೂಲಕ ಅವರು ಹಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕಟ್ಟುಪಾಡು ದಾಟಿ ಹೃದಯ ಸ್ಪರ್ಶಿಸುವ ಬ್ರಹ್ಮಚರ್ಯದ ಗೋಳಿನ ಕತೆ ‘ರಾಘವೇಂದ್ರ ಸ್ಟೋರ್ಸ್‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...