ಸ್ಪಷ್ಟನೆಯ ಬದಲು ಗೊಂದಲ ಸೃಷ್ಟಿಸಿದ ಪ್ರೇಮ್‌, ಸಂಜಯ್‌ ದತ್‌

Date:

ʼಕೇಡಿʼ ಚಿತ್ರದಲ್ಲಿ ಖಳನ ಪಾತ್ರದಲ್ಲಿ ನಟಿಸುತ್ತಿರುವ ಸಂಜಯ್‌ ದತ್‌

ಶೂಟಿಂಗ್‌ ವೇಳೆ ಸಿಡಿಮದ್ದು ಸ್ಫೋಟದಿಂದ ಗಾಯಗೊಂಡಿದ್ದ ನಟ

ʼಕೇಡಿʼ ಸಿನಿಮಾದ ಶೂಟಿಂಗ್‌ ವೇಳೆ ಸಿಡಿಮದ್ದು ಸ್ಫೋಟಗೊಂಡು ಬಾಲಿವುಡ್‌ನ ಖ್ಯಾತ ನಟ ಸಂಜಯ್‌ ದತ್‌ ಗಾಯಗೊಂಡಿದ್ದಾರೆ ಎಂಬ ಸುದ್ದಿ ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಬಗ್ಗೆ ಚಿತ್ರದ ನಿರ್ದೇಶಕ ಪ್ರೇಮ್‌ ಮತ್ತು ಸಂಜಯ್‌ ದತ್ ಸ್ಪಷ್ಟನೆ ನೀಡಿದ್ದಾರೆ. ಆದರೆ, ಇವರಿಬ್ಬರ ಸ್ಪಷ್ಟನೆ ಅಭಿಮಾನಿಗಳಲ್ಲಿ ಮತ್ತಷ್ಟು ಗೊಂದಲವನ್ನು ಸೃಷ್ಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಜಯ್‌ ದತ್‌ ಜೊತೆಗಿನ ಹಳೆಯ ಫೋಟೋವನ್ನು ಹಂಚಿಕೊಂಡು ಟ್ವೀಟ್‌ ಮಾಡಿರುವ ಪ್ರೇಮ್‌, “ಮಾಧ್ಯಮಗಳಲ್ಲಿ ವರದಿಯಾದಂತೆ ಚಿತ್ರೀಕರಣದ ಸ್ಥಳದಲ್ಲಿ ಸಿಡಿಮದ್ದು ಸ್ಫೋಟಗೊಂಡಿಲ್ಲ. ಆದರೆ, ಸಣ್ಣ ಅವಘಡ ಸಂಭವಿಸಿದ್ದು ಸತ್ಯ. ಸಂಜಯ್‌ ದತ್‌ ಅವರು ಆರೋಗ್ಯವಾಗಿದ್ದಾರೆ. ಶೂಟಿಂಗ್‌ ಮತ್ತೆ ಪ್ರಾರಂಭಗೊಂಡಿದೆ” ಎಂದಿದ್ದಾರೆ.

ಸಂಜಯ್‌ ದತ್‌ ಕೂಡ ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದು,”ಶೂಟಿಂಗ್‌ ಸಂದರ್ಭದಲ್ಲಿ ನಾನು ಗಾಯಗೊಂಡಿದ್ದೇನೆ ಎಂದು ವದಂತಿ ಹಬ್ಬಿದೆ. ದೇವರ ದಯೆಯಿಂದ ನಾನು ಆರೋಗ್ಯವಾಗಿದ್ದೇನೆ. ಸದ್ಯ ಕೇಡಿ ಸಿನಿಮಾ ಶೂಟಿಂಗ್‌ನಲ್ಲಿ ತೊಡಗಿಕೊಂಡಿದ್ದೇನೆ. ನನ್ನ ಪಾತ್ರದ ಚಿತ್ರೀಕರಣವನ್ನು ಚಿತ್ರತಂಡ ಬಹಳ ಜಾಗರೂಕತೆಯಿಂದ ಮಾಡುತ್ತಿದೆ. ಆತಂಕ ಪಡುವ ಅಗತ್ಯವಿಲ್ಲ” ಎಂದಿದ್ದಾರೆ.

ಪ್ರೇಮ್‌ ಅವಘಡ ಸಂಭವಿಸಿದ್ದು ಸತ್ಯ ಎಂದು ಟ್ವೀಟ್‌ ಮಾಡಿದ್ದರೆ, ಸಂಜಯ್‌ ದತ್‌, ಆ ರೀತಿಯ ಯಾವುದೇ ಘಟನೆಯೇ ನಡೆದಿಲ್ಲ ಎಂದಿದ್ದಾರೆ. ಸ್ಪಷ್ಟನೆ ನೀಡಲು ಪ್ರೇಮ್‌ ಬಳಸಿರುವ ಪೋಟೋ ಈಗಿನದ್ದಲ್ಲ, ಈ ಹಿಂದೆ ಸಂಜಯ್‌ ದತ್‌ ಅವರನ್ನು ಮುಂಬೈನಲ್ಲಿ ಭೇಟಿಯಾಗಿದ್ದ ಸಂದರ್ಭದ್ದಾಗಿದೆ. ಹೀಗಾಗಿ ಅವಘಡದ ಕುರಿತು ಚಿತ್ರತಂಡ ಸ್ಪಷ್ಟ ಮಾಹಿತಿ ನೀಡುತ್ತಿಲ್ಲ ಎಂದು ನೆಟ್ಟಿಗರು ಅಭಿಪ್ರಾಯ ಪಡುತ್ತಿದ್ದಾರೆ.

ಧ್ರುವ ಸರ್ಜಾ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಈ ಚಿತ್ರದ ಶೂಟಿಂಗ್‌ ಬೆಂಗಳೂರಿನ ಮಾಗಡಿ ರಸ್ತೆಯ ಬಳಿ ಹಾಕಲಾಗಿರುವ ಬೃಹತ್‌ ಸೆಟ್‌ನಲ್ಲಿ ನಡೆಯುತ್ತಿದೆ. ಇದೇ ಸೆಟ್‌ನಲ್ಲಿ ಆ್ಯಕ್ಷನ್ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದಾಗ ಸಿಡಿಮದ್ದು ಸ್ಫೋಟಗೊಂಡು ಸಂಜಯ್‌ ದತ್‌ ಮುಖ ಮತ್ತು ಮೊಣಕೈ ಭಾಗಕ್ಕೆ ಪೆಟ್ಟಾಗಿದೆ ಎನ್ನಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...