ಚಿತ್ರೀಕರಣ ವೇಳೆ ಸಿಡಿಮದ್ದು ಸ್ಫೋಟ : ಗಾಯಗೊಂಡ ಸಂಜಯ್‌ ದತ್‌

Date:

ʼಕೇಡಿʼ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್‌ಗಾಗಿ ಬಳಸುವ ಸಿಡಿಮದ್ದು ಸ್ಫೋಟಗೊಂಡ ಪರಿಣಾಮ ಬಾಲಿವುಡ್‌ನ ಸ್ಟಾರ್‌ ನಟ ಸಂಜಯ್‌ ದತ್‌ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜೋಗಿ ಪ್ರೇಮ್‌ ಮತ್ತು ಧ್ರುವ ಸರ್ಜಾ ಕಾಂಬಿನೇಶನ್‌ನಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ʼಕೇಡಿʼ ಚಿತ್ರದಲ್ಲಿ ಸಂಜಯ್‌ ದತ್‌ ಖಳನ ಪಾತ್ರದಲ್ಲಿ ನಟಿಸುತ್ತಿದ್ದಾರೆ.‌ ಬೆಂಗಳೂರಿನ ಮಾಗಡಿ ರಸ್ತೆಯ ಬಳಿ ಹಾಕಲಾಗಿರುವ ಬೃಹತ್‌ ಸೆಟ್‌ನಲ್ಲಿ ಕಳೆದ ಕೆಲ ದಿನಗಳಿಂದ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಸಾಹಸ ನಿರ್ದೇಶಕ ರವಿವರ್ಮ ನೇತೃತ್ವದಲ್ಲಿ ಬುಧವಾರ ಚಿತ್ರದ ಆ್ಯಕ್ಷನ್ ದೃಶ್ಯಗಳು ಮತ್ತು ಬಾಂಬ್‌ ಸ್ಫೋಟದ ಸನ್ನಿವೇಶಗಳನ್ನು ಸೆರೆ ಹಿಡಿಯುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಸಂಜಯ್ ದತ್‌ ಅವರ ಮುಖ ಮತ್ತು ಮೊಣಕ್ಕೈ ಭಾಗಕ್ಕೆ ಪೆಟ್ಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಟೈಟಲ್‌ ಟೀಸರ್‌ ಮೂಲಕ ಸಿನಿ ರಸಿಕರಲ್ಲಿ ಕುತೂಹಲ ಹೆಚ್ಚಿಸಿದ್ದ ʼಕೇಡಿʼ ಸಿನಿಮಾ ರೌಡಿಸಂ ಕಥಾಹಂದರವನ್ನು ಹೊಂದಿದ್ದು, 70ರ ದಶಕದ ನೈಜ ಘಟನೆಗಳನ್ನು ಆಧರಿಸಿದೆ. ಚಿತ್ರದಲ್ಲಿ ಧ್ರುವ ಸರ್ಜಾ ಕೂಡ ಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸಂಜಯ್‌ ದತ್‌ ಸೇರಿದಂತೆ ಬಾಲಿವುಡ್‌ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ, ಹಿರಿಯ ನಟ ರವಿಚಂದ್ರನ್‌ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ

ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಸಿದ್ಧಗೊಳ್ಳುತ್ತಿರುವ ಈ ಚಿತ್ರಕ್ಕೆ ʼಕೆವಿಎನ್‌ ಪ್ರೊಡಕ್ಷನ್ಸ್‌ʼ ಬಂಡವಾಳ ಹೂಡಿದೆ. ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಸಂಗೀತ ನಿರ್ದೇಶನದ ಹೊಣೆ ಹೊತ್ತುಕೊಂಡಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...