ಹಿರಿಯ ರಂಗ ಕಲಾವಿದ, ಹಾಸ್ಯ ನಟ ರಾಜು ತಾಳಿಕೋಟೆ ನಿಧನ

Date:

ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಇಂದು ನಿಧನರಾಗಿದ್ದಾರೆ. ರಾಜು ಅವರು ಮಂಗಳೂರು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರಿನಲ್ಲಿ ನಡೆಯುತ್ತಿದ್ದ ಸಿನಿಮಾವೊಂದರ ಶೂಟಿಂಗ್ ಬಳಿಕ ತಾಳಿಕೋಟೆ ಅವರಿಗೆ ಹೃದಯಾಘಾತ ಸಂಭವಿಸಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸೋಮವಾರ ತಾಳಿಕೋಟೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸಂಜೆ ಆರು ಗಂಟೆಗೆ ಶೂಟಿಂಗ್ ಮುಗಿದಿದ್ದು, ತಡರಾತ್ರಿ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ವಾಸವಿದ್ದ ರಾಜು ತಾಳಿಕೋಟೆ ಅವರು ಉತ್ತರ ಕರ್ನಾಟಕ ಶೈಲಿಯ ಹಾಸ್ಯಗಳಿಗೆ ಜನಪ್ರಿಯರು. ಬಿಗ್‌ಬಾಸ್ ಸ್ಪರ್ಧಿಯೂ ಆಗಿದ್ದರು. ಸದ್ಯ ಶೈನ್ ಶೆಟ್ಟಿ ನಟನೆಯ ಹೊಸ ಸಿನಿಮಾದ ಶೂಟಿಂಗ್‌ನಲ್ಲಿದ್ದರು ಎಂದು ವರದಿಯಾಗಿದೆ.

ತಮ್ಮ ತಂದೆ ತಾಯಿ ಸ್ಥಾಪಿಸಿದ ಖಾಸ್ಗತೇಶ್ವರ ನಾಟ್ಯ ಸಂಘದಲ್ಲಿ ಪ್ರದರ್ಶನಕ್ಕೆ ಹೋಗುತ್ತಿದ್ದ ತಾಳಿಕೋಟೆ ಅವರು, ನಾಲ್ಕನೇ ತರಗತಿಯಲ್ಲೇ ಶಾಲೆ ತೊರೆದಿದ್ದರು. ತಂದೆಯ ನಂತರ ತಾಳಿಕೋಟೆ ಮತ್ತು ಅವರ ಅಣ್ಣ ಸೇರಿ ನಾಟಕ ಕಂಪನಿ ನಡೆಸುತ್ತಿದ್ದರು. ‘ಕಲಿಯುಗದ ಕುಡುಕ’ ತಾಳಿಕೋಟೆ ಅವರ ಪ್ರಸಿದ್ಧ ನಾಟಕ. ಇತ್ತೀಚೆಗೆ ತಾಳಿಕೋಟೆ ಅವರನ್ನು ರಂಗಾಯಣ ಧಾರವಾಡದ ನಿರ್ದೇಶಕರನ್ನಾಗಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...