ತಮಿಳಿನ ಹಿರಿಯ ನಟ ಮನೋಬಾಲಾ ಇನ್ನಿಲ್ಲ

Date:

  • 700ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಮನೋಬಾಲಾ
  • ಲಿವರ್‌ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ನಟ

ತಮಿಳಿನ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ, ಚಿತ್ರಕಥೆಗಾರ ಮನೋಬಾಲಾ ಅವರು ಬುಧವಾರ ಬೆಳಗ್ಗೆ ಚೆನ್ನೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

69 ವರ್ಷದ ಮನೋಬಾಲಾ ಅವರು ಕಳೆದ ಕೆಲವು ವರ್ಷಗಳಿಂದ ಲಿವರ್‌ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗಷ್ಟೇ ಶಸ್ತ್ರ ಚಿಕಿತ್ಸೆಗೆ ಕೂಡ ಒಳಗಾಗಿದ್ದರು. ಇದಾದ ಬಳಿಕ ಅವರನ್ನು ಮನೆಯಲ್ಲಿಯೇ ಇರಿಸಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಮನೋಬಾಲಾ ಅವರ ಅಗಲಿಕೆಯ ಸುದ್ದಿ ತಿಳಿಯುತ್ತಿದ್ದಂತೆ ತಮಿಳಿನ ಖ್ಯಾತ ನಟ ರಜನಿಕಾಂತ್‌, ಕಮಲ್‌ ಹಾಸನ್‌, ಕಾರ್ತಿ, ಚಿಯಾನ್‌ ವಿಕ್ರಮ್‌, ಸೂರ್ಯ, ವಿಶಾಲ್‌, ದಳಪತಿ ವಿಜಯ್‌ ಮುಂತಾದ ತಾರೆಯರು ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮಿಳಿನ ಖ್ಯಾತ ನಿರ್ದೇಶಕ ಭಾರತಿರಾಜ ನಿರ್ದೇಶನದಲ್ಲಿ 1979ರಲ್ಲಿ ತೆರೆಕಂಡ ʼಪುದಿಯ ವಾರ್ಪುಗಲ್‌ʼ ಚಿತ್ರದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದಲ್ಲದೇ, ಪೋಷಕ ಪಾತ್ರವೊಂದರಲ್ಲಿ ನಟಿಸುವ ಮೂಲಕ ಬೆಳ್ಳಿತೆರೆ ಪ್ರವೇಶಿಸಿದ ಮನೋಬಾಲಾ 4 ದಶಕಗಳ ಕಾಲ 700ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ನಿರ್ದೇಶಕರಾಗಿಯೂ ಖ್ಯಾತಿ ಗಳಿಸಿದ್ದ ಅವರು 40 ಕ್ಕೂ ಹೆಚ್ಚು ಚಿತ್ರಗಳಿಗೆ ಆ್ಯಕ್ಷನ್ ಕಟ್‌ ಹೇಳಿದ್ದಾರೆ. ಚಿತ್ರಕಥೆಗಾರನಾಗಿ, ಯಶಸ್ವಿ ನಿರ್ಮಾಪಕನಾಗಿಯೂ ಮನೋಬಾಲಾ ಗುರುತಿಸಿಕೊಂಡಿದ್ದರು.

ʼತಾಜ್‌ ಮಹಲ್‌ʼ, ʼಸೇತುʼ, ʼಅಣ್ಣೈʼ, ʼವಿಲನ್‌ʼ, ʼಜಯಂʼ, ʼಪಿತಾಮಗನ್‌ʼ, ʼಪಯಣಂʼ, ʼಅಂಜಾನ್‌ʼ, ʼಕಾಂಚನಾ-2ʼ, ʼಮಹಾನಟಿʼ, ʼಬಿಗಿಲ್‌ʼ, ʼವಾಲ್ಟರ್‌ ವೀರಯ್ಯʼ ಸೇರಿದಂತೆ ತಮಿಳು ಮತ್ತು ತೆಲುಗಿನ ನೂರಾರು ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಮನೋಬಾಲಾ ನಟಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...