ಕನ್ನಡ ಸಿನಿಮಾಗಳಿಗಾಗಿಯೇ ಪ್ರತ್ಯೇಕ ಒಟಿಟಿ; ಬಜೆಟ್‌ನಲ್ಲಿ ಸಿಎಂ ಘೋಷಣೆ

Date:

ಕನ್ನಡ ಚಲನಚಿತ್ರಗಳನ್ನು ದೇಶೀಯ ಹಾಗೂ ಅಂತಾರಾಷ್ಟ್ರೀಯ ಒಟಿಟಿ ವೇದಿಕೆಗಳು ಸ್ವೀಕರಿಸುವುದಿಲ್ಲ ಹಾಗೂ ಒಟಿಟಿಯಲ್ಲಿ ಕನ್ನಡ ಕಂಟೆಂಟ್‌ಗಳಿಗೆ ಮಾರುಕಟ್ಟೆ ಇಲ್ಲ ಎಂಬ ಮಾತು ಕೇಳಿಬರುತ್ತಲೇ ಇತ್ತು. ಇದೇ ಕಾರಣಕ್ಕೆ ಗಲ್ಲಾ ಪೆಟ್ಟಿಗೆಯಲ್ಲಿ ಸೋತ ಸುಮಾರು ಕನ್ನಡ ಸಿನಿಮಾಗಳು ಮಾರಾಟವಾಗದೇ ಉಳಿದಿದ್ದವು. ಇನ್ನೂ ಕೆಲವು ಸಿನಿಮಾಗಳು ಚಿತ್ರಮಂದಿರದಲ್ಲಿ ಬಿಡುಗಡೆಯಾದರೂ ಒಟಿಟಿಗಳಲ್ಲಿ ಪ್ರಸಾರವಾಗದೇ ಮೂಲೆಗುಂಪಾಗಿದ್ದವು. ಇದಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮುಂದಡಿ ಇಟ್ಟಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ದಾಖಲೆಯ 16ನೇ ಬಜೆಟ್‌ನಲ್ಲಿ ಕನ್ನಡ ಚಲನ ಚಿತ್ರಗಳ ಪ್ರೋತ್ಸಾಹಕ್ಕೆ ಹೊಸ ಒಟಿಟಿ ವೇದಿಕೆ ಸೃಷ್ಟಿಸುವುದಾಗಿ ಘೋಷಣೆ ಮಾಡಿದ್ದಾರೆ.

ಕೆಲವೊಂದು ಸಿನಿಮಾಗಳು ಉತ್ತಮ ಕಂಟೆಂಟ್‌ ಹೊಂದಿದ್ದರೂ ಅವುಗಳಿಗೆ ಒಟಿಟಿ ವೇದಿಕೆಗಳಲ್ಲಿ ಬೆಲೆ ಸಿಗುತ್ತಿಲ್ಲ. ಇದೇ ಕಾರಣಕ್ಕೆ ಕೇರಳ ಚಿತ್ರರಂಗ ಮಲಯಾಳಂ ಸಿನಿಮಾಗಳಿಗಾಗಿ ಪ್ರತ್ಯೇಕ ಒಟಿಟಿ ವೇದಿಕೆ ಸೃಷ್ಟಿಸಿದೆ. ಅಲ್ಲದೇ ಪ್ರಸಾರ ಭಾರತಿ ಸಹ WAVES ಎಂಬ ಒಟಿಟಿ ವೇದಿಕೆ ಮಾಡಿಕೊಂಡಿದೆ. ಇದೀಗ ಕನ್ನಡ ಸಿನಿಮಾಗಳನ್ನ ಮತ್ತಷ್ಟು ಬೆಳೆಸಲು ಸರ್ಕಾರ ಒಟಿಟಿ ವೇದಿಕೆ ಸೃಷ್ಟಿಸುವ ನಿರ್ಧಾರಕ್ಕೆ ಮುಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕದಲ್ಲಿ ಸಿನಿಮಾ ವೀಕ್ಷಕರ ಹಾಗೂ ಒಟಿಟಿಯಲ್ಲಿ ವೀಕ್ಷಿಸುವರ ಸಂಖ್ಯೆ ಕಡಿಮೆಯೇನಿಲ್ಲ. ಇತ್ತೀಚೆಗಷ್ಟೇ ತೆರೆ ಕಂಡಿದ್ದ ನಟ ಶ್ರೀಮುರಳಿ ಅಭಿನಯದ ʻಬಘೀರʼ ಚಿತ್ರ ನೆಟ್‌ಫ್ಲಿಕ್ಸ್‌ನಲ್ಲಿ ಭರ್ಜರಿ ಕಮಾಲ್‌ ಮಾಡಿತ್ತು. ಈ ಬೆನ್ನಲ್ಲೇ ಬಜೆಟ್‌ನಲ್ಲಿ ಒಟಿಟಿ ವೇದಿಕೆ ಸೃಷ್ಟಿಸುವ ನಿರ್ಧಾರವನ್ನು ಸಿಎಂ ಘೋಷಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿನ್ನ ಕಳ್ಳಸಾಗಣೆ ಆರೋಪ: ಕನ್ನಡ ಸಿನಿಮಾ ನಟಿ ರನ್ಯಾ ಬಂಧನ

ಮೈಸೂರಿನಲ್ಲಿ ವಿಶ್ವದರ್ಜೆಯ ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅಂದಾಜು 500 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು 150 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಚಿತ್ರನಗರಿಯನ್ನು ಸ್ಥಾಪಿಸಲು ಸರ್ಕಾರ ಬದ್ಧವಾಗಿದೆ. ಜೊತೆಗೆ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಚಲನಚಿತ್ರ ಅಕಾಡೆಮಿಯು ಹೊಂದಿರುವ 2.5 ಎಕರೆ ನಿವೇಶನದಲ್ಲಿ ಬಹುಪರದೆಗಳಿರುವ ಚಿತ್ರಮಂದಿರ ಸಮುಚ್ಛಯವನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ವಿವರಿಸಿದರು.

ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯ, ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಒದಗಿಸಲಾಗುವ ಸೌಲಭ್ಯಗಳನ್ನು ಸಿನಿಮಾ ಕ್ಷೇತ್ರಕ್ಕೆ ಸರ್ಕಾರ ಒದಗಿಸಲಿದೆ. ಸಾಮಾಜಿಕ, ಚಾರಿತ್ರಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬಿಂಬಿಸುವ ಕನ್ನಡ ಚಲನಚಿತ್ರಗಳನ್ನು ಡಿಜಿಟಲ್ ಹಾಗೂ ನಾನ್-ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸಲು 3 ಕೋಟಿ ರೂ. ವೆಚ್ಚದಲ್ಲಿ ಚಲನಚಿತ್ರ ಭಂಡಾರವನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...