ಚಿತ್ರೀಕರಣ ಸಮಯದಲ್ಲಿ ಶಾರುಖ್‌ ಖಾನ್‌ ಮೂಗಿಗೆ ಗಾಯ

Date:

  • ಲಾಸ್‌ ಏಂಜಲೀಸ್‌ನಲ್ಲಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ಶಾರುಖ್‌ ಖಾನ್
  • ಡಾರ್ಲಿಂಗ್ಸ್‌ ಚಿತ್ರ ನಿರ್ಮಾಣದ ಜತೆಗೆ ನಾಯಕನಾಗಿ ಕಾಣಿಸಿಕೊಂಡಿದ್ದ ನಟ

ಬಾಲಿವುಡ್‌ನ ಜನಪ್ರಿಯ ನಟ ಶಾರುಖ್‌ ಖಾನ್‌ ಅಮೆರಿಕದ ಲಾಸ್‌ ಏಂಜಲೀಸ್‌ ನಗರದಲ್ಲಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ವೇಳೆ ಮೂಗಿಗೆ ಗಾಯವಾಗಿದ್ದು ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದಾರೆ ಎಂದು ಇ ಟೈಮ್ಸ್‌ ಪತ್ರಿಕೆ ಮಂಗಳವಾರ (ಜುಲೈ 4) ವರದಿ ಮಾಡಿದೆ.

ಶಸ್ತ್ರಚಿಕಿತ್ಸೆಯ ನಂತರ ನಟ ಭಾರತಕ್ಕೆ ಹಿಂತಿರುಗಿ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

“ಶಾರುಖ್‌ ಖಾನ್‌ ಅವರು ಲಾಸ್‌ ಏಂಜಲೀಸ್‌ನಲ್ಲಿ ಚಲನಚಿತ್ರವೊಂದರ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ವೇಳೆ ಅವರ ಮೂಗಿನ ಭಾಗಕ್ಕೆ ಪೆಟ್ಟಾಗಿದೆ. ಪರಿಣಾಮ ಮೂಗಿನಿಂದ ರಕ್ತ ಸುರಿಯಲಾರಂಭಿಸಿತು. ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತು. ಯಾವುದೇ ಭೀತಿ ಪಡುವ ಅಗತ್ಯವಿಲ್ಲ. ರಕ್ತ ಸೋರಿಕೆಯನ್ನು ತಡೆಯಲು ಶಾರುಖ್ ಅವರ ಮೂಗಿಗೆ ಸಣ್ಣ ಪ್ರಮಾಣದ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು ಬ್ಯಾಂಡೇಜ್ ಹಾಕಲಾಗಿದೆ ಎಂದು ವೈದ್ಯರು ಚಿತ್ರತಂಡಕ್ಕೆ ತಿಳಿಸಿದ್ದಾರೆ” ಎಂದು ವರದಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರ್ಷದ ಆರಂಭದಲ್ಲಿ ಬಿಡುಗಡೆಯಾದ ಶಾರುಖ್‌ ಅವರ ಪಠಾಣ್‌ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಸದ್ದು ಮಾಡಿದೆ. ಶಾರುಖ್ ಅವರು ಅಟ್ಲೀ ಅವರ ಮುಂದಿನ ಚಿತ್ರ ‘ಜವಾನ್’ನಲ್ಲಿ ಅಭಿನಯಿಸುತ್ತಿದ್ದಾರೆ. ನಯನತಾರಾ ಮತ್ತು ವಿಜಯ್‌ ಸೇತುಪತಿ ತೆರೆ ಹಂಚಿಕೊಳ್ಳಲಿದ್ದಾರೆ.

ಈ ಸುದ್ದಿ ಓದಿದ್ದೀರಾ? 2 ಲೋಕಸಭೆ ಸೀಟಿನ ಮಣಿಪುರದಲ್ಲಿ ನೂರು ಓಟು ಸತ್ತು ಹೋಯ್ತು: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ಶಾರುಖ್‌ ಅವರು ರಾಜ್‌ಕುಮಾರ್‌ ಹಿರಾನಿ ಅವರ ದುನ್ಕಿ ಚಿತ್ರದಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ. ಇವರ ಜೋಡಿಯಾಗಿ ತಾಪ್ಸೀ ಪನ್ನು ಅಭಿನಯಿಸಲಿದ್ದಾರೆ. ಈ ಚಿತ್ರ ಈ ವರ್ಷ ಬಿಡುಗಡೆಯಾಗುವ ಸಾಧ್ಯತೆ ಇದೆ.

ಶಾರುಖ್‌ ಖಾನ್‌ ಅವರು ಚಲನಚಿತ್ರ ನಿರ್ಮಾಣದಲ್ಲಿಯೂ ತೊಡಗಿಕೊಂಡಿದ್ದಾರೆ. 2022ರಲ್ಲಿ ಆಲಿಯಾ ಭಟ್ ನಾಯಕಿ ಹಾಗೂ ನಿರ್ಮಾಣ ಹೊಣೆ ಹೊತ್ತ ಡಾರ್ಲಿಂಗ್ಸ್‌ ಚಿತ್ರಕ್ಕೆ ನಾಯಕ ನಟ ಹಾಗೂ ಸಹ ನಿರ್ಮಾಪಕನಾಗಿ ಶಾರುಖ್‌ ಕಾರ್ಯನಿರ್ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...