ʼಬ್ಲಡಿ ಡ್ಯಾಡಿʼ ಟೀಸರ್‌ | ಆ್ಯಕ್ಷನ್ ಲುಕ್‌ನಲ್ಲಿ ಮಿಂಚಿದ ಶಾಹಿದ್‌ ಕಪೂರ್‌

Date:

ಜೂನ್‌ 9ಕ್ಕೆ ತೆರೆಗೆ ಬರಲಿದೆ ʼಬ್ಲಡಿ ಡ್ಯಾಡಿʼ ಸಿನಿಮಾ

ನಿರೀಕ್ಷೆ ಹೆಚ್ಚಿಸಿದ ಆ್ಯಕ್ಷನ್ ಪ್ಯಾಕ್‌ ಟೀಸರ್‌

ಬಾಲಿವುಡ್‌ನ ಖ್ಯಾತ ನಟ ಶಾಹಿದ್‌ ಕಪೂರ್‌ ಅಭಿನಯದ ʼಬ್ಲಡಿ ಡ್ಯಾಡಿʼ ಸಿನಿಮಾದ ಬಹುನಿರೀಕ್ಷಿತ ಟೀಸರ್‌ ಬಿಡುಗಡೆಯಾಗಿದೆ. ಇತ್ತೀಚೆಗೆ ʼಫರ್ಜಿʼ ವೆಬ್‌ ಸರಣಿಯಲ್ಲಿ ನಕಲಿ ನೋಟು ಚಾಪಿಸುವ ವ್ಯಕ್ತಿಯ ಪಾತ್ರದಲ್ಲಿ ಗಮನ ಸೆಳೆದಿದ್ದ ಶಾಹಿದ್‌ ಕಪೂರ್‌, ʼಬ್ಲಡಿ ಡ್ಯಾಡಿʼ ಚಿತ್ರದಲ್ಲಿ ʼಆ್ಯಕ್ಷನ್ ಲುಕ್‌ʼನಲ್ಲಿ ಮಿಂಚಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಡ್ರಗ್‌ ಮಾಫಿಯಾʼದ ಎಳೆಯನ್ನು ಹೊಂದಿರುವ ʼಬ್ಲಡಿ ಡ್ಯಾಡಿʼ ಚಿತ್ರದಲ್ಲಿ ಶಾಹಿದ್‌ ಕಪೂರ್‌ ಡಾನ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಒಂದು ನಿಮಿಷ 15 ಸೆಕೆಂಡುಗಳ ಟೀಸರ್‌ನಲ್ಲಿ ಆ್ಯಕ್ಷನ್ ದೃಶ್ಯಗಳನ್ನೇ ಹೆಚ್ಚಾಗಿ ತೋರಿಸಲಾಗಿದೆ. ತನ್ನ ಮಗನನ್ನು ಅಪಹರಿಸುವ ಶತ್ರುಗಳ ವಿರುದ್ಧ ಸೆಣೆಸಾಡುವ ತಂದೆಯ ಪಾತ್ರದಲ್ಲಿ ಶಾಹಿದ್‌ ಗಮನ ಸೆಳೆಯುತ್ತಾರೆ.

ʼಸುಲ್ತಾನ್‌ʼ, ʼಟೈಗರ್‌ ಜಿಂದಾ ಹೈʼ, ʼಭಾರತ್‌ʼ, ʼಜೋಗಿʼ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ಅಲಿ ಅಬ್ಬಾಸ್‌ ಜಾಫರ್‌ ʼಬ್ಲಡಿ ಡ್ಯಾಡಿʼ ಚಿತ್ರಕ್ಕೆ ಆ್ಯಕ್ಷನ್ ಕಟ್‌ ಹೇಳಿದ್ದಾರೆ. ಟೀಸರ್‌ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕವನ್ನು ಕೂಡ ಘೋಷಿಸಲಾಗಿದ್ದು, ಜೂನ್‌ 9ರಂದು ʼಬ್ಲಡಿ ಡ್ಯಾಡಿʼ ತೆರೆಗೆ ಬರಲಿದೆ.

ಶಾಹಿದ್‌ ಕಪೂರ್‌ ಮುಖ್ಯಭೂಮಿಕೆಯ ಈ ಚಿತ್ರದಲ್ಲಿ ಡಯಾನ ಪೆಂಟಿ, ಸಂಜಯ್‌ ಕಪೂರ್‌, ರೋನಿತ್‌ ರಾಯ್‌, ರಾಜೀವ್‌ ಖಂಡೇಲ್‌ವಾರ್‌, ವಿವಾನ್‌ ಬಥೇನಾ, ಅಂಕುರ್‌ ಭಾಟಿಯಾ, ಮುಕೇಶ್‌ ಭಟ್‌, ಸರ್ತಾಜ್‌ ಕಕ್ಕರ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜಿಯೋ ಸ್ಟುಡಿಯೋಸ್‌ ಬ್ಯಾನರ್‌ನಡಿಯಲ್ಲಿ ಚಿತ್ರ ನಿರ್ಮಾಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...