ʼಪಠಾಣ್‌ʼ ಚಿತ್ರಕ್ಕಾಗಿ ₹200 ಕೋಟಿ ಸಂಭಾವನೆ ಪಡೆದ ಶಾರುಖ್‌ ಖಾನ್‌

Date:

ಗಲ್ಲಾ ಪೆಟ್ಟಿಗೆಯಲ್ಲಿ 1,057 ಕೋಟಿ ರೂಪಾಯಿ ಕಲೆ ಹಾಕಿರುವ ʼಪಠಾಣ್‌ʼ

ಅಂದಾಜು 270 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಚಿತ್ರ

ಬಾಲಿವುಡ್‌ನ ಸ್ಟಾರ್‌ ನಟ ಶಾರುಖ್‌ ಖಾನ್‌ ಅಭಿನಯದ ʼಪಠಾಣ್‌ʼ ಸಿನಿಮಾ ಚಿತ್ರಮಂದಿರಗಳಲ್ಲಿ ಭರ್ಜರಿ ಯಶಸ್ಸು ಗಳಿಸಿದೆ. ಇತ್ತೀಚೆಗೆ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ನೆಟ್ಟಿಗರ ಮೆಚ್ಚುಗೆಗೂ ಪಾತ್ರವಾಗಿತ್ತು. ಗಲ್ಲಾ ಪೆಟ್ಟಿಗೆಯಲ್ಲಿ ದಾಖಲೆಯ ಗಳಿಕೆ ಮಾಡಿರುವ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸಲು ಶಾರುಖ್‌ ಖಾನ್‌ ಬರೋಬ್ಬರಿ 200 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ಯಾನ್‌ ಇಂಡಿಯಾ ಮಾದರಿಯಲ್ಲಿ ತೆರೆಕಂಡಿದ್ದ ʼಪಠಾಣ್‌ʼ ಸಿನಿಮಾ ಭಾರತದಲ್ಲಿ 657 ಕೋಟಿ ರೂಪಾಯಿಗಳನ್ನು ಗಳಿಸಿದರೆ, ವಿದೇಶಗಳಲ್ಲಿ 392 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ಕಲೆ ಹಾಕಿತ್ತು. ಒಟ್ಟಾರೆಯಾಗಿ ಜಗತ್ತಿನಾದ್ಯಂತ ಚಿತ್ರ 1,050 ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಮಾಡಿತ್ತು.

ʼಪಠಾಣ್‌ʼ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಸಾವಿರ ಕೋಟಿಗೂ ಅಧಿಕ ಮೊತ್ತವನ್ನು ಕಲೆ ಹಾಕಿದೆಯಾದರೂ, ಚಿತ್ರಕ್ಕೆ ಬಂಡವಾಳ ಹೂಡಿದ್ದ ʼಯಶ್‌ ರಾಜ್‌ ಫಿಲಂಸ್‌ʼ ಸಂಸ್ಥೆಗೆ ಕೇವಲ 333 ಕೋಟಿ ರೂಪಾಯಿಗಳಷ್ಟು ಲಾಭವಾಗಿದೆ. ಸಾವಿರ ಕೋಟಿಯಲ್ಲಿ 400 ಕೋಟಿಗೂ ಹೆಚ್ಚು ಮೊತ್ತ ವಿತರಕರ ಪಾಲಾದರೆ, ನಿರ್ಮಾಣ ವೆಚ್ಚ ಅಂದಾಜು 270 ಕೋಟಿ ರೂಪಾಯಿ ಎನ್ನಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಸುದೀಪ್‌ ನಟನೆಯ ಜಾಹೀರಾತುಗಳಿಗೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ ಸುರ್ಜೇವಾಲ ಪತ್ರ

333 ಕೋಟಿ ರೂಪಾಯಿ ಲಾಭಾಂಶದಲ್ಲಿ ಶಾರುಖ್‌ ಖಾನ್‌ ಬರೋಬ್ಬರಿ 200 ಕೋಟಿ ರೂಪಾಯಿ ಮೊತ್ತವನ್ನು ಸಂಭಾವನೆ ರೂಪದಲ್ಲಿ ಪಡೆದಿದ್ದಾರೆ. ಶಾರುಖ್‌, ‘ಪಠಾಣ್‌’ ಚಿತ್ರದಲ್ಲಿ ನಟಿಸಲು ಒಪ್ಪಿದಾಗ ಲಾಭಾಂಶದಲ್ಲಿ ಶೇ.60 ರಷ್ಟು ಪಾಲನ್ನು ತಮಗೆ ನೀಡಬೇಕು ಎಂದು ʼಯಶ್‌ ರಾಜ್‌ ಫಿಲಂಸ್‌ʼ ಜೊತೆಗೆ ಕರಾರು ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಶಾರುಖ್‌ ಅವರ ಪಾಲನ್ನು ಹೊರತುಪಡಿಸಿ 133 ಕೋಟಿ ರೂಪಾಯಿ ನಿವ್ವಳ ಮೊತ್ತ ನಿರ್ಮಾಪಕರ ಕೈ ಸೇರಿದೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...