ʼಟೈಗರ್ ನಾಗೇಶ್ವರ್ ರಾವ್ʼ ಬೆಂಬಲಕ್ಕೆ ನಿಂತ ಶಿವಣ್ಣ

Date:

ಕುಖ್ಯಾತ ಕಳ್ಳನ ಪಾತ್ರದಲ್ಲಿ ಮಿಂಚಲಿರುವ ರವಿತೇಜ

ಮೇ 24ಕ್ಕೆ ಬಿಡುಗಡೆಯಾಗಲಿದೆ ಚಿತ್ರದ ಫಸ್ಟ್‌ ಲುಕ್‌

ಟಾಲಿವುಡ್‌ನ ಖ್ಯಾತ ನಟ ರವಿತೇಜ ಅಭಿನಯದ ʼಟೈಗರ್ ನಾಗೇಶ್ವರ್ ರಾವ್ʼ ಚಿತ್ರದ ಫಸ್ಟ್ ಲುಕ್ ಮೇ 24ರಂದು ಬಿಡುಗಡೆಯಾಗಲಿದೆ. ಪ್ಯಾನ್‌ ಇಂಡಿಯಾ ಮಾದರಿಯಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಕನ್ನಡ ಅವತರಣಿಕೆಯ ಫಸ್ಟ್ ಲುಕ್ ಝಲಕ್‌ಗೆ ಕನ್ನಡದ ಹಿರಿಯ ನಟ ಶಿವರಾಜ್ ಕುಮಾರ್ ಧ್ವನಿಯಾಗಿರುವುದು ವಿಶೇಷ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

70ರ ದಶಕದ ಕಥಾಹಂದರವನ್ನು ಹೊಂದಿರುವ ʼಟೈಗರ್ ನಾಗೇಶ್ವರ್ ರಾವ್ʼ ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ದೇಶಕ ವಂಸಿ ಆ್ಯಕ್ಷನ್ ಕಟ್‌ ಹೇಳಿದ್ದಾರೆ. ಸದ್ಯ ಚಿತ್ರದ ಫಸ್ಟ್‌ ಲುಕ್‌ ಬಿಡುಗಡೆಯ ತಯಾರಿಯಲ್ಲಿರುವ ಚಿತ್ರತಂಡ ಕನ್ನಡ ಅವತರಣಿಕೆಗೆ ಧ್ವನಿಯಾಗುವಂತೆ ಶಿವರಾಜ್‌ ಕುಮಾರ್‌ ಅವರ ನಿವಾಸಕ್ಕೆ ಭೇಟಿ ನೀಡಿ ಮನವಿ ಮಾಡಿಕೊಂಡಿದೆ. ಮನವಿಗೆ ಸ್ಪಂದಿಸಿ ಫಸ್ಟ್‌ ಲುಕ್‌ ವಿಡಿಯೋಗೆ ಧ್ವನಿಯಾಗಿರುವ ಶಿವಣ್ಣ, ಕನ್ನಡಿಗರಿಗೆ ʼಟೈಗರ್‌ ನಾಗೇಶ್ವರ್‌ ರಾವ್‌ʼ ಕಥೆಯನ್ನು ಪರಿಚಯಿಸಲು ಮುಂದಾಗಿದ್ದಾರೆ.

ಹೈದರಾಬಾದ್‌ನ ಸ್ಟುವರ್ಟ್‌ಪುರಂನಲ್ಲಿ 70ರ ದಶಕದಲ್ಲಿದ್ದ ಕುಖ್ಯಾತ ಕಳ್ಳನ ಬದುಕಿನ ಕಥೆಯನ್ನು ಆಧರಿಸಿ ʼಟೈಗರ್ ನಾಗೇಶ್ವರ್ ರಾವ್ʼ ಚಿತ್ರ ಮೂಡಿಬಂದಿದೆ. ಈಗಾಗಲೇ ಫಸ್ಟ್‌ಲುಕ್‌ ನೋಡಿ ಮೆಚ್ಚಿಕೊಂಡಿರುವ ಶಿವಣ್ಣ, ರವಿತೇಜ ಅವರ ಪಾತ್ರವನ್ನು ಮೆಚ್ಚಿಕೊಂಡಿದ್ದು, ಚಿತ್ರ ದೊಡ್ಡ ಮಟ್ಟಿಗೆ ಸದ್ದು ಮಾಡಲಿದೆ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.

ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಸಿದ್ಧಗೊಳ್ಳುತ್ತಿರುವ ಈ ಚಿತ್ರದಲ್ಲಿ ರವಿತೇಜಗೆ ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ವಿ ಪ್ರಕಾಶ್ ಕುಮಾರ್ ಸಂಗೀತ ಸಂಯೋಜನೆಯ ಹೊಣೆ ಹೊತ್ತುಕೊಂಡಿದ್ದು, ಅಭಿಷೇಕ್‌ ಅಗರ್‌ವಾಲ್‌ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮುಂಬರುವ ಅಕ್ಟೋಬರ್‌ನಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...