ಬಾಲಯ್ಯ ಜತೆ ತೆರೆ ಹಂಚಿಕೊಳ್ಳಲು ಸಜ್ಜಾದ ಶಿವಣ್ಣ

Date:

ಈ ಹಿಂದೆ ಬಾಲಯ್ಯ ನಟನೆಯ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಮಿಂಚಿದ್ದ ಶಿವಣ್ಣ

ಸದ್ಯದಲ್ಲೇ ಹೊಸ ಸಿನಿಮಾದ ಮಾಹಿತಿ ಹಂಚಿಕೊಳ್ಳಲಿರುವ ಸ್ಟಾರ್‌ ನಟರು

ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಶಿವರಾಜ್‌ ಕುಮಾರ್‌ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೆ ತಮಿಳಿನ ಚಿತ್ರಗಳಲ್ಲೂ ನಟಿಸುತ್ತಿದ್ದಾರೆ. ಈ ನಡುವೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿರುವ ಶಿವಣ್ಣ, ತೆಲುಗಿನ ಹಿರಿಯ ನಟ ನಂದಮುರಿ ಬಾಲಕೃಷ್ಣ ಅವರ ಜೊತೆಗೆ ತೆರೆ ಹಂಚಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನುವಾರ ಹೈದರಾಬಾದ್‌ನಲ್ಲಿ ನಡೆದ ತೆಲುಗಿನ ದಿಗ್ಗಜ ನಟ ಎನ್‌ಟಿಆರ್‌ ಅವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಶಿವಣ್ಣ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ತಮ್ಮ ಮತ್ತು ಎನ್‌ಟಿಆರ್‌ ಕುಟುಂಬದ ಒಡನಾಟವನ್ನು ಮೆಲುಕು ಹಾಕಿರುವ ಶಿವಣ್ಣ, ಬಾಲಯ್ಯ ಅವರ ಕುರಿತು ಮೆಚುಗೆಯ ಮಾತುಗಳನ್ನಾಡಿದ್ದಾರೆ. ಇದೇ ವೇಳೆ “ನಾನು ಮತ್ತು ಬಾಲಯ್ಯನವರು ಜೊತೆಯಾಗಿ ಸಿನಿಮಾ ಮಾಡುತ್ತಿದ್ದೇವೆ. ಅವರ ಜೊತೆಗೆ ತೆರೆ ಹಂಚಿಕೊಳ್ಳುತ್ತಿರುವುದು ನನ್ನ ಪಾಲಿಗೆ ದೊಡ್ಡ ಗೌರವ” ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಶಿವಣ್ಣನ ಜೊತೆಗೆ ಸಿನಿಮಾ ಮಾಡುತ್ತಿರುವದನ್ನು ಬಾಲಯ್ಯ ಕೂಡ ಖಚಿತ ಪಡಿಸಿದ್ದಾರೆ.

ಶಿವಣ್ಣ ಮತ್ತು ಬಾಲಯ್ಯ ಜೋಡಿ ಈ ಹಿಂದೆ ಕೂಡ ಮೋಡಿ ಮಾಡಿತ್ತು. 2017ರಲ್ಲಿ ಬಿಡುಗಡೆಯಾಗಿದ್ದ ಬಾಲಯ್ಯ ಅವರ ನೂರನೇ ಚಿತ್ರ ʼಗೌತಮಿಪುತ್ರ ಶಾತಕರ್ಣಿʼಯ ಪ್ರಮುಖ ಹಾಡಿನಲ್ಲಿ ಶಿವಣ್ಣ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಈ ಇಬ್ಬರು ನಟರು ಜೊತೆಯಾಗಿ ಪೂರ್ಣ ಪ್ರಮಾಣದಲ್ಲಿ ಚಿತ್ರದಲ್ಲಿ ಹಂಚಿಕೊಳ್ಳಲಿರುವ ಸುದ್ದಿಯನ್ನು ಕೇಳಿ ಅಭಿಮಾನಿಗಳು ಕೂಡ ಸಂಭ್ರಮಿಸುತ್ತಿದ್ದಾರೆ.

‘ವೇದ’ ಸಿನಿಮಾದ ಯಶಸ್ಸಿನ ಬಳಿಕ ಶಿವಣ್ಣ ʼಘೋಸ್ಟ್‌ʼ ಚಿತ್ರದ ಶೂಟಿಂಗ್‌ನಲ್ಲಿ ತೊಡಗಿಕೊಂಡಿದ್ದಾರೆ. ಅರ್ಜುನ್‌ ಜನ್ಯ ನಿರ್ದೇಶನದ ʼ45ʼ, ಯೋಗರಾಜ್‌ ಭಟ್‌ ನಿರ್ದೇಶನದ ʼಕರಟಕ ದಮನಕʼ, ನರ್ತನ್‌ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ʼಭೈರತಿ ರಣಗಲ್‌ʼ ಸೇರಿದಂತೆ ಕನ್ನಡದ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ತಮಿಳಿನ ಸೂಪರ್‌ ಸ್ಟಾರ್‌ ರಜನಿಕಾಂತ್‌ ನಟನೆಯ ʼಜೈಲರ್‌ʼ ಮತ್ತು ಧನುಷ್‌ ಅಭಿನಯದ ʼಕ್ಯಾಪ್ಟನ್‌ ಮಿಲ್ಲರ್‌ʼ ಚಿತ್ರಗಳಲ್ಲೂ ಪ್ರಮುಖ ಪಾತ್ರಗಳಲ್ಲಿ ಮಿಂಚಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...