ಕಮಲ್ ಹಾಸನ್ ಹೇಳಿಕೆ ಸಮರ್ಥಿಸುವುದಿಲ್ಲ: ಮೌನ ಮುರಿದ ನಟ ಶಿವಣ್ಣ

Date:

ಕನ್ನಡ ಭಾಷೆ ಬಗ್ಗೆ ನಟ ಕಮಲ್ ಹಾಸನ್ ನೀಡಿದ ಹೇಳಿಕೆ ವಿವಾದದ ಬಗ್ಗೆ ಕೊನೆಗೂ ನಟ ಶಿವರಾಜ್‌ಕುಮಾರ್ ಮೌನ ಮುರಿದಿದ್ದಾರೆ.

ವಿವಾದ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಶಿವಣ್ಣ ಅವರು, ಕಮಲ್ ಹಾಸನ್ ಹೇಳಿದ ಮಾತುಗಳನ್ನು ನಾನೇನು ಸಮರ್ಥನೆ ಮಾಡಿಕೊಳ್ಳಲ್ಲ. ಭಾಷೆ ಬಗ್ಗೆ ಮಾತಾಡಿದ್ದಾರೆ ಅಂದಾಗ ನಾನು ಕೈ ತಟ್ಟಿದ್ದು ನಿಜ. ಆ ಸಂದರ್ಭದಲ್ಲಿ ಏನು ಮಾತಾಡುತ್ತಿದ್ದಾರೆ ಅಂತಾ ಗೊತ್ತಾಗಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕನ್ನಡ ಅಭಿಮಾನದ ಬಗ್ಗೆ ಎಲ್ಲರೂ ಮಾತಾಡುತ್ತಿದ್ದಾರೆ. ಕನ್ನಡ ಅಭಿಮಾನ ಏನು ಅನ್ನೋದು ನಮಗೂ ಗೊತ್ತಿದೆ. ನಾನು ಕೂಡ ಕನ್ನಡ ಅಭಿಮಾನಿ. ಅಣ್ಣಾವ್ರ ಕನ್ನಡ ಅಭಿಮಾನ ನಿಮಗೆಲ್ಲರಿಗೂ ಗೊತ್ತೇ ಇದೆ ಎಂದು ನಟ ಶಿವಣ್ಣ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಕನ್ನಡವೇ ನನ್ನ ಮೊದಲ ಆದ್ಯತೆ, ಇದು ಮೊದಲ ಬಾರಿಯಲ್ಲ, ಪ್ರತಿಬಾರಿಯೂ ಕನ್ನಡದ ವಿಷಯ ಬಂದಾಗೆಲ್ಲ ನಾನು ನಿಂತಿದ್ದೇನೆ. ಕನ್ನಡಕ್ಕಾಗಿ ನಾನು ಏನು ಮಾಡಿದ್ದೇನೆ ಎಂಬುದು ಕರ್ನಾಟಕದ ಜನರಿಗೆ ಗೊತ್ತಿದೆ, ಅದನ್ನು ಯಾರಿಂದಲೂ ಅಲ್ಲಗಳೆಯಲು ಸಾಧ್ಯವಿಲ್ಲ. ನಾನು ಅಂದಿನ ಕಾರ್ಯಕ್ರಮಕ್ಕೆ ಹೋಗಿದ್ದೆ ಅಷ್ಟೆ’ ಎಂದು ಶಿವಣ್ಣ ಹೇಳಿದರು.

ನಿಮ್ಮ ಹೆಸರನ್ನು ಕೆಲವರು ವಿವಾದಕ್ಕೆ ಎಳೆಯುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ, ‘ಇರಲಿ ತೊಂದರೆ ಇಲ್ಲ, ನಾನು ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ, ನನ್ನ ಆತ್ಮಸಾಕ್ಷಿಗೆ ನಾನು ಸರಿಯಾಗಿದ್ದೇನೆ. ನಾನು ಕಲೆಗಾಗಿ ಬದುಕುತ್ತಿರುವವನು, ಕಲೆಯಿಂದಲೇ ನಾವು, ಎಲ್ಲ ಭಾಷೆಗಳ ಬಗ್ಗೆಯೂ ಗೌರವ ಇದೆ, ಆದರೆ ಕನ್ನಡ ಭಾಷೆಯ ವಿಷಯ ಬಂದಾಗೆಲ್ಲ ಚಿತ್ರರಂಗದ ಪರವಾಗಿ ಬರುವವರಲ್ಲಿ ಮೊದಲಿಗೆ ನಾನಾಗಿರುತ್ತೇನೆ’ ಎಂದರು.

ವೇದಿಕೆಯಲ್ಲಿ ನೀವು ಯಾಕೆ ಪ್ರಶ್ನೆ ಮಾಡಲಿಲ್ಲವಲ್ಲ ಎಂಬ ಪ್ರಶ್ನೆಗೆ, ಅವರು ಮಾತನಾಡಿದ್ದು ನನಗೆ ಸ್ಪಷ್ಟವಾಗಿ ಕೇಳಲಿಲ್ಲ. ನೀವು ಆ ಬಗ್ಗೆ ಅವರನ್ನೇ ಪ್ರಶ್ನೆ ಮಾಡಬೇಕು. ನಾನು ಎರಡನೇ ಬಾರಿ ಕ್ಲಿಪ್ಪಿಂಗ್ ಕೇಳಿದಾಗಲೇ ಆ ವಿಷಯ ಗೊತ್ತಾಗಿದ್ದು ಎಂದಿದ್ದಾರೆ.

ಇದನ್ನು ಓದಿದ್ದೀರಾ? ಕನ್ನಡ ತಮಿಳಿನಿಂದ ಹುಟ್ಟಿದೆ: ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ

‘ಕಮಲ್ ಹಾಸನ್ ಅವರ ಅಭಿಮಾನಿ ನಾನು, ಆದರೆ ವೇದಿಕೆ ಮೇಲೆ ಏನು ಮಾತನಾಡಬೇಕು, ಬಿಡಬೇಕು ಎಂಬುದು ಅವರ ಆಯ್ಕೆ. ಆದರೆ ಅವರಿಂದ ಈಗ ಏನು ಬಯಸುತ್ತಿದ್ದಾರೋ ಅದು ಮಾಧ್ಯಮಗಳ ಬಯಕೆ. ಅಂದು ಕಮಲ್ ಮಾತಿಗೆ ನಾನು ಚಪ್ಪಾಳೆ ಹೊಡೆಯುತ್ತಿರುವಂತೆ ದೃಶ್ಯಗಳನ್ನು ಜೋಡಿಸಿ ಕೆಲವರು ತೋರಿಸುತ್ತಿದ್ದಾರೆ. ದಯವಿಟ್ಟು ಅದನ್ನು ಮಾಡಬೇಡಿ, ನಾನು ಕಲಾವಿದ, ಈ ಎಡಿಟಿಂಗ್​ಗಳು ಹೇಗೆ ಆಗುತ್ತವೆ ಎಂಬುದು ನನಗೆ ಗೊತ್ತಿದೆ’ ಎಂದು ಶಿವಣ್ಣ ಹೇಳಿದರು.

ಕಮಲ್ ಹಾಸನ್ ಅವರು ಅಂದು ಆ ಮಾತು ಆಡಿದಾಗ ಅಲ್ಲಿ ಎಲ್ಲರೂ ಇದ್ದರು, ಮಾಧ್ಯಮಗಳ ಮುಂದೆಯೇ ಅವರು ಆ ಮಾತನ್ನಾಡಿದ್ದರು. ಆದರೆ ಅಂದೇ ಆ ವಿಷಯದ ಬಗ್ಗೆ ಪ್ರಸ್ತಾಪ ಮಾಡಿದ್ದರೆ ವಿಷಯ ಇಷ್ಟು ದೊಡ್ಡದಾಗಿ ಆಗುತ್ತಲೇ ಇರಲಿಲ್ಲ. ನನ್ನ ಆತ್ಮಸಾಕ್ಷಿಗೆ ಗೊತ್ತು ನಾನು ಏನು ಎಂದು, ನನ್ನ ತಂದೆಗೂ ಗೊತ್ತು’ ಎಂದು ಶಿವರಾಜ್ ಕುಮಾರ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...