ನನ್ನ ಸಾವಿಗೆ ರಾಜಮೌಳಿ, ಆತನ ಪತ್ನಿ ಕಾರಣ: ಡೆತ್‌ನೋಟ್‌ ಬರೆದಿಟ್ಟು ನಿರ್ಮಾಪಕನ ಆತ್ಮಹತ್ಯೆ

Date:

ನನ್ನ ಆತ್ಮಹತ್ಯೆಗೆ ನಿರ್ದೇಶಕ ಎಸ್ ಎಸ್ ರಾಜಮೌಳಿ ಹಾಗೂ ಆತನ ಪತ್ನಿ ಕಾರಣವೆಂದು ತೆಲುಗು ಚಿತ್ರರಂಗದ ನಿರ್ಮಾಪಕರು ಡೆತ್‌ನೋಟ್‌ನಲ್ಲಿ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿರ್ಮಾಪಕ ಶ್ರೀನಿವಾಸ್ ರಾವ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರು ರಾಜಮೌಳಿ ನಿರ್ದೇಶನ ಹಾಗೂ ಜ್ಯೂನಿಯರ್ ಎನ್‌ಟಿಆರ್ ನಟನೆಯ ಯಮದೊಂಗ ಸಿನಿಮಾದ ಕಾರ್ಯಕಾರಿ ನಿರ್ಮಾಪಕರಾಗಿದ್ದರು.

ಎಸ್ ಎಸ್ ರಾಜಮೌಳಿಯ ಆತ್ಮಿಯ ಸ್ನೇಹಿತನೂ ಆಗಿದ್ದ ಶ್ರೀನಿವಾಸ್ ರಾವ್‍ ಡೆತ್ ನೋಟ್ ಮತ್ತು ಸಾಯುವ ಮುನ್ನ ವಿಡಿಯೋವೊಂದನ್ನು ಮಾಡಿ, ತನ್ನ ಸಾವಿಗೆ ರಾಜಮೌಳಿ ಮತ್ತು ಅವರ ಪತ್ನಿ ರಮಾ ಕಾರಣ ಅಂತ ಹೇಳಿಕೊಂಡಿದ್ದಾರೆ. ಜೊತೆಗೆ ರಾಜಮೌಳಿ ಮತ್ತು ತನ್ನ ನಡುವಿನ ಪ್ರೇಮ ಪ್ರಸಂಗವನ್ನು ಶ್ರೀನಿವಾಸ್ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಫಿಲ್ಮ್‌ ಫೆಸ್ಟಿವಲ್‌ | ಚಾಮಯ್ಯ ಮೇಷ್ಟ್ರೇ… ನಿಮ್ಮನ್ನು ಮರೆಯುವುದುಂಟೆ!

ರಾಜಮೌಳಿ ಮತ್ತು ನಾನು ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದೆವು. ಆ ಹುಡುಗಿಯನ್ನು ರಾಜಮೌಳಿ ತ್ಯಾಗ ಮಾಡುವಂತೆ ನನಗೆ ಹೇಳಿದ. ಹಾಗಾಗಿ ನಾನು ಆ ಹುಡುಗಿಯನ್ನು ರಾಜಮೌಳಿಗೆ ಬಿಟ್ಟು ಕೊಟ್ಟೆ. ಅಲ್ಲಿಂದ ನಾನು ಮದುವೆ ಆಗಿಲ್ಲ. ರಾಜಮೌಳಿಗೂ ನನಗೂ 34 ವರ್ಷದ ಸ್ನೇಹ. ಇತ್ತೀಚೆಗೆ ಸಣ್ಣ ಮನಸ್ತಾಪ ಆಯಿತು. ನಾನು ನಮ್ಮ ಲವ್ ಸ್ಟೋರಿಯನ್ನು ಸಿನಿಮಾ ಮಾಡೋದಾಗಿ ಹೇಳಿದೆ. ಅಲ್ಲಿಂದ ರಾಜಮೌಳಿ ನಿರಂತರವಾಗಿ ನನಗೆ ಟಾರ್ಚರ್ ಮಾಡಲು ಶುರು ಮಾಡಿದ ಅಂತ ಡೆತ್ ನೋಟ್ ನಲ್ಲಿ ಶ್ರೀನಿವಾಸ್ ರಾವ್ ಬರೆದಿದ್ದಾರೆ.

ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ರಾಜಮೌಳಿ ವಿರುದ್ಧ ಕ್ರಮ ತಗೆದುಕೊಳ್ಳುವಂತೆ ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಸುಳ್ಳುಪತ್ತೆ ಪರೀಕ್ಷೆ ನಡೆಸಿದರೆ ಸತ್ಯಾಂಶ ಹೊರಬೀಳುತ್ತದೆ ಎಂದು ತಿಳಿಸಿದ್ದಾರೆ. ಈವರೆಗೂ ಶ್ರೀನಿವಾಸ್ ರಾವ್ ಅವರ ಮೃತದೇಹ ಸಿಕ್ಕಿಲ್ಲ ಎನ್ನುವ ಮಾಹಿತಿಯೂ ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...