ಪಶ್ಚಿಮ ಬಂಗಾಳದಲ್ಲಿ ʼದಿ ಕೇರಳ ಸ್ಟೋರಿʼ ಚಿತ್ರದ ನಿಷೇಧಕ್ಕೆ ಸುಪ್ರೀಂ ತಡೆ

Date:

ʼದಿ ಕೇರಳ ಸ್ಟೋರಿʼ ಚಿತ್ರ ನಿಷೇಧಿಸಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಚಿತ್ರದ ಪ್ರದರ್ಶನ ರದ್ದುಗೊಳಿಸಿದ್ದ ತಮಿಳನಾಡಿನ ಥಿಯೇಟರ್‌ ಮಾಲೀಕರು

ʼದಿ ಕೇರಳ ಸ್ಟೋರಿʼ ಚಿತ್ರದ ಪ್ರದರ್ಶನವನ್ನು ನಿಷೇಧಿಸಿ ಪಶ್ಚಿಮ ಬಂಗಾಳ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ವಿವಾದಕ್ಕೆ ಕಾರಣವಾಗಿರುವ ಮತಾಂತರದ ಅಂಶ ಆಧಾರಹಿತ ಎಂಬ ಸೂಚನೆಯನ್ನು ಚಿತ್ರದ ಜೊತೆಗೆ ಪ್ರದರ್ಶಿಸುವಂತೆ ನಿರ್ಮಾಪಕರಿಗೂ ತಾಕೀತು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರ ಮೂರನೇ ಬಾರಿಗೆ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌, “ಕಥಾಹಂದರದ ಕಾರಣಕ್ಕೆ ಚಿತ್ರವನ್ನು ನಿಷೇಧಿಸಿಲಾಗಿದೆ ಎಂಬ ಪಶ್ಚಿಮ ಬಂಗಾಳ ಸರ್ಕಾರದ ಸಮರ್ಥನೆ ಸರಿಯಲ್ಲ. ಹೀಗಾಗಿ ಚಿತ್ರದ ಮೇಲಿನ ನಿರ್ಬಂಧಕ್ಕೆ ತಡೆ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ಇದೇ ವೇಳೆ ತಮಿಳುನಾಡು ಸರ್ಕಾರಕ್ಕೂ ಸೂಚನೆ ಹೊರಡಿಸಿರುವ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು, “ರಾಜ್ಯದಲ್ಲಿ ʼದಿ ಕೇರಳ ಸ್ಟೋರಿʼ ಪ್ರದರ್ಶನ ಕಾಣುತ್ತಿರುವ ಚಿತ್ರಮಂದಿರಗಳಿಗೆ ಭದ್ರತೆ ಒದಗಿಸುವಂತೆ” ಆದೇಶಿಸಿದ್ದಾರೆ. ಜೊತೆಗೆ ವಿವಾದಕ್ಕೆ ಕಾರಣವಾಗಿರುವ 32 ಸಾವಿರ ಮಹಿಳೆಯರ ಮತಾಂತರದ ಅಂಶ ಆಧಾರ ರಹಿತ ಎಂಬ ಸೂಚನೆಯನ್ನು ಚಿತ್ರದ ಜೊತೆಗೆ ಪ್ರದರ್ಶಿಸುವಂತೆ ನಿರ್ಮಾಪಕರಿಗೆ ತಾಕೀತು ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ʼದಹಾಡ್‌ʼ ವೆಬ್‌ ಸರಣಿಗೆ ಹಂತಕ ಸೈನೇಡ್ ಮೋಹನ್‌ ಕಥೆ ಸ್ಫೂರ್ತಿಯೇ?

ಕೇರಳದ ಯುವತಿಯರನ್ನು ಬಲವಂತವಾಗಿ ಮತಾಂತರಿಸಿ ಭಯೋತ್ಪಾದಕ ಸಂಘಟನೆಗೆ ಸೇರ್ಪಡೆ ಮಾಡಲಾಗಿದೆ ಎಂಬ ಎಳೆಯ ಸುತ್ತ ಮೂಡಿಬಂದಿರುವ ʼದಿ ಕೇರಳ ಸ್ಟೋರಿʼ ಚಿತ್ರವನ್ನು ಮೇ 8ರಂದು ಪಶ್ಚಿಮ ಬಂಗಾಳ ಸರ್ಕಾರ ನಿಷೇಧಿಸಿತ್ತು. ತಮ್ಮ ರಾಜ್ಯದಲ್ಲಿ ದ್ವೇಷ ಹರಡುವುದನ್ನು ತಡೆಯಲು ಮತ್ತು ಹಿಂಸಾಚಾರದ ಘಟನೆಗಳನ್ನು ತಪ್ಪಿಸಿ, ಶಾಂತಿಯನ್ನು ಕಾಪಾಡಲು ಈ ಕ್ರಮ ಕೈಗೊಂಡಿರುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದರು. ಬಿಡುಗಡೆಗೂ ಮೊದಲೇ ವಿವಾದ ಸೃಷ್ಟಿಸಿದ್ದ ʼದಿ ಕೇರಳ ಸ್ಟೋರಿʼ ಚಿತ್ರದ ಪ್ರದರ್ಶನಗಳನ್ನು ತಮಿಳುನಾಡಿನ ಮಲ್ಟಿಪ್ಲೆಕ್ಸ್‌ ಮಾಲೀಕರ ಸಂಘ ಕೂಡ ರದ್ದುಗೊಳಿಸಿತ್ತು.

ಈ ಹಿನ್ನೆಲೆ “ʼನಮ್ಮ ಚಿತ್ರವನ್ನು ಪ್ರದರ್ಶಿಸದಂತೆ ಪಶ್ಚಿಮ ಬಂಗಾಳ ಸರ್ಕಾರ ನಿಷೇಧ ಹೇರಿದೆ. ತಮಿಳುನಾಡಿನಲ್ಲೂ ಅನಧಿಕೃತವಾಗಿ ಚಿತ್ರದ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ ಎಂದು ಆರೋಪಿಸಿ ಚಿತ್ರದ ನಿರ್ಮಾಪಕರು ರಾಜ್ಯ ಸರ್ಕಾರಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...