ರಾಜಕೀಯ ರಂಗ ಪ್ರವೇಶಿಸಲಿರುವ ತಮಿಳು ನಟ ದಳಪತಿ ವಿಜಯ್ | ರಾಜಕೀಯ ಮೆರವಣಿಗೆಗೆ ಸಜ್ಜು

Date:

  • ಬಿಡುಗಡೆಗೆ ಸಜ್ಜಾಗಿರುವ ದಳಪತಿ ಖ್ಯಾತಿಯ ವಿಜಯ್ ಅವರ ಲೋಕೇಶ್ ಕನಗರಾಜ್ ನಿರ್ದೇಶನದ ‘ಲಿಯೋ’ ಚಿತ್ರ
  • ವಿಜಯ್ ಮಕ್ಕಳ್ ಇಯಕ್ಕಮ್ ಸಂಸ್ಥೆ ಮೂಲಕ ಎಸ್ಎಸ್ಎಲ್‌ಸಿ, ಪಿಯುನಲ್ಲಿ ಹೆಚ್ಚು ಅಂಕ ಗಳಿಸಿದವರಿಗೆ ಬಹುಮಾನ

ತಮಿಳುನಾಡಿನಲ್ಲಿ ಈ ಬಾರಿ ರಾಜಕೀಯ ಚುನಾವಣೆಗಳು ತೀವ್ರ ಪೈಪೋಟಿಗೆ ವೇದಿಕೆಯಾಗಲಿದ್ದು ಇಲ್ಲಿನ ಖ್ಯಾತ ನಟ, ದಳಪತಿ ವಿಜಯ್ ರಾಜಕೀಯ ರಂಗ ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ, ಅಭಿಮಾನಿಗಳಲ್ಲಿ ಹರ್ಷ ಮೂಡಿಸಿದೆ.

ತಮಿಳುನಾಡು ರಾಜಕೀಯ ಚಿತ್ರರಂಗದೊಂದಿಗೆ ಬೆಸೆದುಕೊಂಡಿದೆ. ಖ್ಯಾತ ನಟ ಎನ್‌ಟಿಆರ್‌, ಜೆ.ಜಯಲಲಿತಾ ಮುಖ್ಯಮಂತ್ರಿಗಳಾಗಿ ಅನಭಿಷಕ್ತ ದೊರೆಗಳಾಗಿ ಮೆರೆದಿದ್ದಾರೆ. ಇನ್ನೂ ಅನೇಕ ನಟರು ರಾಜಕೀಯದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ.

ವಿಜಯ್ ಅವರು ಈಗ ರಾಜಕೀಯ ರಂಗ ಪ್ರವೇಶ ಮಾಡಲು ತೀರ್ಮಾನಿಸಿರುವುದು ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಟ ವಿಜಯ್ ಅವರು ಪೆಟ್ರೋಲ್ ಬೆಲೆ ಏರಿಕೆ ಸಂದರ್ಭದಲ್ಲಿ ಸೈಕಲ್ ಮೂಲಕ ತೆರಳಿ ಸುದ್ದಿಯಾಗಿದ್ದರು. ಈಗ ಸಕ್ರಿಯ ರಾಜಕೀಯಕ್ಕೆ ಕಾಲಿಡಲು ತೀರ್ಮಾನಿಸಿದ್ದಾರೆ. ಇತ್ತೀಚೆಗೆ ನಟ ವಿಜಯ್ ಸಾಮಾಜಿಕ ಜಾಲತಾಣಗಳಲ್ಲಿಯೂ ಸಕ್ರಿಯವಾಗಿದ್ದಾರೆ. ಅಭಿಮಾನಿಗಳ ಜತೆ ಮಾತುಕತೆ ನಡೆಸುತ್ತಿದ್ದಾರೆ.

ವಿಜಯ್ ಅವರ ಲೋಕೇಶ್ ಕನಗರಾಜ್ ನಿರ್ದೇಶನದ ‘ಲಿಯೋ’ ಚಿತ್ರ ಸದ್ಯ ಬಿಡುಗಡೆಗೆ ಸಜ್ಜಾಗಿದೆ. ಚಿತ್ರ ಬಿಡುಗಡೆಗೂ ಮುನ್ನ ರಾಜ್ಯಾದ್ಯಂತ ಪಾದಯಾತ್ರೆ ನಡೆಸಲು ನಟ ತೀರ್ಮಾನಿಸಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ವಂಚನೆ ಆರೋಪ | ನಿರ್ಮಾಪಕರ ವಿರುದ್ಧ ಕ್ರಮಕ್ಕೆ ಮುಂದಾದ ಸುದೀಪ್‌

ನಟ ವಿಜಯ್ ಅವರು ವಿಜಯ್ ಮಕ್ಕಳ್ ಇಯಕ್ಕಮ್ ಎಂಬ ಸಂಸ್ಥೆ ಸ್ಥಾಪಿಸಿದ್ದಾರೆ. ಸಂಸ್ಥೆಯ ಮೂಲಕ ರಾಜ್ಯದ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಸನ್ಮಾನಿಸಿದ್ದಾರೆ.

ದಳಪತಿ ವಿಜಯ್ ಅವರ ಪಕ್ಷ ರಾಜ್ಯದ 235 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎನ್ನಲಾಗಿದೆ. ಇದಕ್ಕೂ ಮುನ್ನ ವಿಜಯ್ ಅವರು ರಾಜಕೀಯ ಪ್ರವೇಶಿಸುತ್ತಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...