ಚೆನ್ನೈನಲ್ಲಿ ತಮಿಳು ನಟ ಅನುಮಾನಾಸ್ಪದ ಸಾವು

Date:

ತಮಿಳು ನಟ ಪ್ರದೀಪ್ ಕೆ ವಿಜಯನ್‌(39) ಅವರು ಚೆನ್ನೈನ ತಮ್ಮ ಮನೆಯಲ್ಲಿ ನಿನ್ನೆ ಜೂನ್‌ 13 ರಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ಆಯಾಮದಲ್ಲಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಚೆನ್ನೈನ ಪಲವಕ್ಕಂನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವಿಜಯನ್‌ ಅವರು ತಲೆ ಸುತ್ತು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಬುಧವಾರ ಬೆಳಗ್ಗೆ ವಿಜಯನ್‌ ಅವರ ಸ್ನೇಹಿತರು ಹಲವು ಬಾರಿ ಫೋನ್‌ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಮನೆಗೂ ಬಂದಾಗ ಬಾಗಿಲನ್ನು ತೆರೆಯಲಿಲ್ಲ. ಅನುಮಾನಗೊಂಡು ಬಾಗಿಲು ಮುರಿದು ಒಳ ಪ್ರವೇಶಿಸಿದಾಗ ಸ್ನಾನದ ಕೋಣೆಯಲ್ಲಿ ಮೃತಪಟ್ಟಿದ್ದರು. ಅವರ ತಲೆ ಹಾಗೂ ಮುಖದ ಮೇಲೆ ಗಾಯಗಳಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

ಪ್ರಾಥಮಿಕ ತನಿಖೆಗಳಂತೆ ಪೊಲೀಸರು ಅಸಹಜ ಸಾವು ಎಂದು ದೂರು ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ನೀಡಲಾಗಿದೆ.

ವಿಜಯನ್‌ ಅವರು ತೇಗಿಡಿ, ಮಾಯಾದ ಮಾನ್‌, ಟೆಡ್ಡಿ, ಇರುಂಬು ತಿರೈ, ರುದ್ರನ್‌ ಸೇರಿ ಹಲವು ತಮಿಳು ಚಿತ್ರಗಳಲ್ಲಿ ನಟಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...