ಪ್ರತಿಷ್ಠಿತ ಎಫ್‌ಟಿಐಐ ಅಧ್ಯಕ್ಷರಾಗಿ ತಮಿಳು ನಟ ಆರ್ ಮಾಧವನ್ ನೇಮಕ

Date:

ಪುಣೆಯಲ್ಲಿರುವ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯ ಅಧ್ಯಕ್ಷರಾಗಿ ಜನಪ್ರಿಯ ತಮಿಳು ನಟ ಆರ್ ಮಾಧವನ್ ನೇಮಕವಾಗಿದ್ದಾರೆ. ಈ ವಿಷಯವನ್ನು ಹಂಚಿಕೊಂಡಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, ಮಾಧವನ್ ಅವರಿಗೆ ಶುಭಾಶಯ ಕೋರಿದ್ದಾರೆ.

ಪುಣೆಯ ಫಿಲಂ ಮತ್ತು ಟೆಲಿವಿಷನ್ ಇನ್ಸ್‌ಟಿಟ್ಯೂಟ್ ಭಾರತದಲ್ಲಿ ಸಿನಿಮಾ ಮತ್ತು ಕಿರುತೆರೆ ಅಧ್ಯಯನಕ್ಕೆ ಮೀಸಲಾದ ಅತ್ಯಂತ ಪ್ರತಿಷ್ಠಿತ ಸಂಸ್ಥೆಯೆನಿಸಿದೆ. ಕನ್ನಡದ ಗಿರೀಶ್ ಕಾಸರವಳ್ಳಿ, ಮಲೆಯಾಳಂನ ಆಡೂರು ಗೋಪಾಲಕೃಷ್ಣನ್, ರಾಜ್‌ಕುಮಾರ್ ಹಿರಾನಿ ಸೇರಿದಂತೆ ಅನೇಕ ಪ್ರತಿಭಾವಂತ ನಿರ್ದೇಶಕರು, ನಾಸಿರುದ್ದೀನ್ ಶಾ, ಓಂಪುರಿ, ಶಬಾನಾ ಆಜ್ಮಿಯಂಥ ನಟ ನಟಿಯರನ್ನು ಕೊಟ್ಟ ಖ್ಯಾತಿಗೆ ಎಫ್‌ಟಿಐಐ ಒಳಗಾಗಿದೆ.

ಪ್ರಖ್ಯಾತ ನಿರ್ದೇಶಕ ಶೇಖರ್ ಕಪೂರ್ ಎಫ್‌ಟಿಐಐನ ಕೊನೆಯ ನಿರ್ದೇಶಕರಾಗಿದ್ದರು. ಮಾಧವನ್ ತಮಿಳು ನಟರಾದರೂ ಹಿಂದಿ ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ನಟಿಸಿ ದೇಶದ ಸಿನಿಪ್ರಿಯರಿಗೆ ಪರಿಚಿತರಾಗಿದ್ದಾರೆ. ಅವರ ನಟನೆಯ ವಿಜ್ಞಾನಿ ನಂಬಿನಾರಾಯಣನ್ ಜೀವನ ಆಧರಿಸಿದ ರಾಕೆಟ್ರಿ-ದಿ ನಂಬಿ ಎಫೆಕ್ಟ್ ಸಿನಿಮಾ 69ನೇ ರಾಷ್ಟ್ರೀಯ ಪ್ರಶಸ್ತಿಗಳ ಪೈಕಿ ಅತ್ಯುತ್ತಮ ಚಲನಚಿತ್ರ ಎನ್ನುವ ಪ್ರಶಸ್ತಿ ಪಡೆದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...