ದಶಕದ ಬಳಿಕ ಸಿನಿಮಾ ನಿರ್ದೇಶನಕ್ಕೆ ಮುಂದಾದ ತಮಿಳು ನಟ ಸೂರ್ಯ

Date:

ಹತ್ತು ವರ್ಷಗಳ ಬಳಿಕ ತಮಿಳಿನ ಹೆಸರಾಂತ ನಿರ್ದೇಶಕ ಹಾಗೂ ನಟ ಎಸ್ ಜೆ ಸೂರ್ಯ ಮತ್ತೆ ಡೈರೆಕ್ಟರ್‌ ಟೋಪಿ ತೊಟ್ಟು ಹೊಸ ಸಿನಿಮಾದ ಮೂಲಕ ವಾಪಸ್ಸಾಗುತ್ತಿದ್ದಾರೆ. ಶ್ರೀ ಗೋಕುಲಂ ಮೂವೀಸ್ ಬ್ಯಾನರ್ ಅಡಿಯಲ್ಲಿ, ಗೋಕುಲಂ ಗೋಪಾಲನ್ ಮತ್ತು ಅಂಜೆಲ್ ಸ್ಟುಡಿಯೋಸ್ ಸಹಯೋಗದಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರಕ್ಕೆ ‘ಕಿಲ್ಲರ್’ ಎಂದು ಶೀರ್ಷಿಕೆ ಇಡಲಾಗಿದೆ.

“ವಾಲಿ”, “ಖುಷಿ” ಮತ್ತು “ನ್ಯೂ” ಎಂಬ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ ಸೂರ್ಯ ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುವ ಜೊತೆಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ವಿ ಸಿ ಪ್ರವೀಣ್ ಮತ್ತು ಬೈಜು ಗೋಪಾಲನ್ ಈ ಚಿತ್ರದ ಸಹ-ನಿರ್ಮಾಪಕರಾಗಿದ್ದು, ಕೃಷ್ಣಮೂರ್ತಿ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದಾರೆ.

‘ಕಿಲ್ಲರ್’ ಚಿತ್ರ ದೊಡ್ಡ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿದ್ದು, ತಮಿಳು, ತೆಲುಗು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ. ದೇಶದಾದ್ಯಂತ ಪ್ರೇಕ್ಷಕರನ್ನು ಆಕರ್ಷಿಸಲು ಸಿದ್ಧವಾಗಲಿರುವ ಈ ಚಿತ್ರದಲ್ಲಿ, ಭಾರತೀಯ ಚಿತ್ರರಂಗದ ಪ್ರತಿಭಾನ್ವಿತ ಕಲಾವಿದರು ಹಾಗೂ ತಾಂತ್ರಿಕ ತಂಡ ಇರಲಿದೆ. ಚಿತ್ರದ ಕುರಿತಾಗಿ ಹೆಚ್ಚಿನ ಮಾಹಿತಿ ಮುಂದಿನ ದಿನಗಳಲ್ಲಿ ಚಿತ್ರತಂಡ ನೀಡಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ‘ನಾತಿಚರಾಮಿ’ ಖ್ಯಾತಿಯ ಮಂಸೋರೆ ಹೊಸ ಪ್ರಯೋಗ ‘ದೂರ ತೀರ ಯಾನ’ ಜು.11ಕ್ಕೆ ತೆರೆಗೆ

ಇನ್ನು ಶ್ರೀ ಗೋಕುಲಂ ಮೂವೀಸ್ ಸಂಸ್ಥೆಯು ಮಲಯಾಳಂ ಚಿತ್ರರಂಗದಲ್ಲಿ ಹಲವು ಸಿನಿಮಾ ನಿರ್ಮಾಣ ಮಾಡುತ್ತಿದೆ. ಸುರೇಶ್ ಗೋಪಿ ಅಭಿನಯದ “ಒಟ್ಟಕೋಂಬನ್”, ಜಯಸೂರ್ಯ ಅಭಿನಯದ “ಕಥನಾರ್”, ದಿಲೀಪ್ ಅಭಿನಯದ “ಭಾ ಭಾ ಬಾ” ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...