ಲೈಂಗಿಕ ದೌರ್ಜನ್ಯ ಅಪರಾಧಿಗಳಿಗೆ 5 ವರ್ಷ ನಿಷೇಧ: ದಕ್ಷಿಣ ಭಾರತೀಯ ಕಲಾವಿದರ ಸಂಘದ ನಿರ್ಣಯ

Date:

ದಕ್ಷಿಣ ಭಾರತೀಯ ಕಲಾವಿದರ ಸಂಘ ಅಥವಾ ‘ನಾಡಿಗರ್ ಸಂಗಮ್’ ಲೈಂಗಿಕ ದೌರ್ಜನ್ಯಗಳಲ್ಲಿ ತಪ್ಪಿತಸ್ಥರೆಂದು ಕಂಡುಬಂದ ವ್ಯಕ್ತಿಗಳಿಗೆ ತಮಿಳು ಚಲನಚಿತ್ರೋದ್ಯಮದಿಂದ 5 ವರ್ಷಗಳ ನಿಷೇಧವನ್ನು ವಿಧಿಸುವ ಕುರಿತು ಮಹತ್ವದ ನಿರ್ಣಯವನ್ನು ಅಂಗೀಕರಿಸಿದೆ.

ನಡಿಗರ್ ಸಂಗಮ್’ ಅಥವಾ ಎಸ್ಐಎಎ ಚಲನಚಿತ್ರ, ದೂರದರ್ಶನ ಮತ್ತು ರಂಗ ಭೂಮಿಯ ಪ್ರತಿನಿಧಿಗಳ ವೇದಿಕೆಯಾಗಿದೆ. ಸೆ.4ರಂದು ಎಸ್ಐಎಎ ಲಿಂಗ ಸಂವೇದನೆ ಮತ್ತು ಆಂತರಿಕ ದೂರುಗಳ ಸಮಿತಿಯ  ಸಭೆಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ತಮಿಳು ಚಲನಚಿತ್ರೋದ್ಯಮದಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾದವರಿಗೆ ಜಿಎಸ್‌ಐಸಿಸಿ ಎಲ್ಲ ಕಾನೂನು ನೆರವು ನೀಡಲಿದೆ ಎಂದು ನಿರ್ಣಯವು ಹೇಳಿದೆ.

ನಿರ್ಣಯದ ಪ್ರಕಾರ, ಸಂತ್ರಸ್ತರು ತಮ್ಮ ದೂರುಗಳನ್ನು ಈಗಾಗಲೇ ಮೀಸಲಿರಿಸಿದ ಫೋನ್ ಸಂಖ್ಯೆ ಅಥವಾ ಈಮೇಲ್ ಮೂಲಕ ಕಲಾವಿದರ ಸಂಘಕ್ಕೆ ನೀಡಬಹುದು. ಇದಲ್ಲದೆ ಸಂತ್ರಸ್ತರು ತಮ್ಮ ದೂರುಗಳ ನೇರವಾಗಿ ಮಾಧ್ಯಮಗಳೊಂದಿಗೆ ಹಂಚಿಕೊಳ್ಳುವ ಮೊದಲು ಸಮಿತಿಯನ್ನು ಸಂಪರ್ಕಿಸುವಂತೆ ಸಮಿತಿಯು ಸಲಹೆಯನ್ನು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೌರಿ ಲಂಕೇಶ್: ಕೋಮುವಾದಿ ಕತ್ತಲಿಗೆ ಸವಾಲೆಸೆದ ಬೆಳ್ಳಂಬೆಳಕಿನ ದೀವಟಿಗೆ

ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರ ಮೇಲೆ ವ್ಯಾಪಕ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಮಾ ಸಮಿತಿಯ ವರದಿ ಬಹಿರಂಗಗೊಳಿಸಿದ ಬೆನ್ನಲ್ಲಿ ಮಲಯಾಳಂ ಸಿನಿಮಾ ರಂಗದ ಹಿರಿಯ ನಟ ಹಾಗೂ ಸಿಪಿಐ(ಎಂ) ಶಾಸಕ ಮುಖೇಶ್, ನಟರಾದ ಸಿದ್ದಿಕ್, ಜಯಸೂರ್ಯ, ಎಡವೇಲ ಬಾಬು, ಬಾಬುರಾಜ್ ಮತ್ತು ನಿರ್ದೇಶಕರಾದ ರಂಜಿತ್ ಮತ್ತು ವಿಕೆ ಪ್ರಕಾಶ್ ವಿರುದ್ಧ ಪ್ರಕರಣಗಳು ದಾಖಲಾಗಿದೆ.

ತಮಿಳು ಸಿನಿಮಾದಲ್ಲೂ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿ ಬಂದಿದ್ದವು. ಲೈಂಗಿಕ ದೌರ್ಜನ್ಯದ ಬಗ್ಗೆ ಕೆಲವು ತಮಿಳು ನಟಿಯರು ತಮ್ಮ ಸ್ವಂತ ಅನುಭವಗಳನ್ನು ಹಂಚಿಕೊಂಡಿದ್ದರು. ಇದರ ಬೆನ್ನಲ್ಲಿ ತಮಿಳು ನಟ ಮತ್ತು ನಾಡಿಗರ್ ಸಂಗಮ್‌ನ ಪ್ರಧಾನ ಕಾರ್ಯದರ್ಶಿ ವಿಶಾಲ್, ಹೇಮಾ ಸಮಿತಿಯಂತೆಯೇ ಸಮಿತಿಯನ್ನು ರಚಿಸುವುದಾಗಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...