ನಟ ವಿಕ್ರಮ್‌ ಹುಟ್ಟುಹಬ್ಬ | ʼತಂಗಲಾನ್‌ʼ ಚಿತ್ರದ ಮೇಕಿಂಗ್‌ ವಿಡಿಯೋ ಬಿಡುಗಡೆ

Date:

57ನೇ ವಸಂತಕ್ಕೆ ಕಾಲಿಟ್ಟ ಸ್ಟಾರ್‌ ನಟ

ಭಿನ್ನ ಪಾತ್ರದಲ್ಲಿ ಮಿಂಚಿದ ಚಿಯಾನ್‌

ತಮಿಳಿನ ಖ್ಯಾತ ನಟ ಚಿಯಾನ್‌ ವಿಕ್ರಮ್‌ ಸೋಮವಾರ 57ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ನಟನಿಗೆ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಇದೇ ಸಂದರ್ಭದಲ್ಲಿ ವಿಕ್ರಮ್‌ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ʼತಂಗಲಾನ್‌ʼ ಚಿತ್ರದ ಮೇಕಿಂಗ್‌ ವಿಡಿಯೋ ಬಿಡುಗಡೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಲಾರದ ʼಕೆಜಿಎಫ್‌ʼ ಚಿನ್ನದ ಗಣಿಯ ಹಿಂದಿನ ಅಸಲಿ ಕಥೆಯನ್ನು ಆಧರಿಸಿ ಸಿದ್ಧಗೊಳ್ಳುತ್ತಿರುವ ಈ ಚಿತ್ರದಲ್ಲಿ ವಿಕ್ರಮ್‌ ಬುಡಕಟ್ಟು ಸಮುದಾಯದ ನಾಕಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಎರಡು ನಿಮಿಷಗಳ ಮೇಕಿಂಗ್‌ ವಿಡಿಯೋದಲ್ಲಿ ಚಿತ್ರೀಕರಣದ ಕೆಲ ದೃಶ್ಯಗಳನ್ನು ಹಂಚಿಕೊಳ್ಳಲಾಗಿದ್ದು, ಬುಡಕಟ್ಟು ಜನರು ತಮ್ಮ ಅಸ್ತಿತ್ವಕ್ಕಾಗಿ ಬ್ರಿಟಿಷರ ವಿರುದ್ಧ ಸೆಣೆಸಾಡುವ ದೃಶ್ಯಗಳು ಕೂಡ ಗಮನ ಸೆಳೆಯುವಂತಿವೆ. ವಿಕ್ರಮ್‌ ಅವರ ಪಾತ್ರ ಮತ್ತು ವೇಷ ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಪ್ರಶಾಂತ್‌ ನೀಲ್‌ ʼಕೆಜಿಎಫ್‌ʼ ಕುರಿತ ಕಾಲ್ಪನಿಕ ಕಥೆಯನ್ನು ತೆರೆಗೆ ಅಳವಡಿಸಿದ ಬೆನ್ನಲ್ಲೇ ʼತಂಗಲಾನ್‌ʼ ಚಿತ್ರವನ್ನು ಘೋಷಿಸಿದ್ದ ತಮಿಳಿನ ಖ್ಯಾತ ನಿರ್ದೇಶಕ ಪ. ರಂಜಿತ್‌, ʼಕೆಜಿಎಫ್‌ʼನ ಹಿನ್ನೆಲೆ ಮತ್ತು 1870 ರಿಂದ 1940ರ ನಡುವೆ ʼಕೆಜಿಎಫ್‌ʼ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ನಡೆದ ನೈಜ ಘಟನೆಗಳನ್ನು ಸಿನಿ ರಸಿಕರ ಮುಂದಿಡಲು ಸಜ್ಜಾಗಿದ್ದಾರೆ.

ಈಗಾಗಲೇ ಶೇ.80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಕೊನೆಯ ಹಂತದ ಶೂಟಿಂಗ್‌ ಸದ್ಯದಲ್ಲೇ ಪ್ರಾರಂಭವಾಗಲಿದೆ. ʼಪೊನ್ನಿಯನ್‌ ಸೆಲ್ವನ್‌-2ʼ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ವಿಕ್ರಮ್‌ ಶೀಘ್ರವೇ ‘ತಂಗಲಾನ್‌’ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

ವಿಕ್ರಮ್‌ ಮತ್ತು ಪ. ರಂಜಿತ್‌ ಕಾಂಬಿನೇಶನ್‌ನ ಈ ಚಿತ್ರದಲ್ಲಿ ಪಾರ್ವತಿ ಮೆನನ್‌, ಮಾಳವಿಕ ಮೋಹನನ್‌, ಪಸುಪತಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್‌ ಸಂಗೀತ ಸಂಯೋಜನೆಯ ಹೊಣೆ ಹೊತ್ತುಕೊಂಡಿದ್ದು, ಜ್ಞಾನವೇಲ್‌ ರಾಜ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...