ಜೆಟ್ ಲ್ಯಾಗ್ ಪಬ್ ಪಾರ್ಟಿ ಪ್ರಕರಣ | ನಟ ದರ್ಶನ್, ಡಾಲಿ, ನಿರ್ಮಾಪಕ ರಾಕ್‌ಲೈನ್ ಸೇರಿ ಹಲವರಿಗೆ ಪೊಲೀಸರ ನೋಟಿಸ್

Date:

ಡಿ.29ರಂದು ಕನ್ನಡದಲ್ಲಿ ತೆರೆಕಂಡಿದ್ದ ನಟ ದರ್ಶನ್ ಅಭಿನಯದ ‘ಕಾಟೇರ’ ಸಿನಿಮಾ ಸದ್ಯ ಬಾಕ್ಸಾಫೀಸ್‌ನಲ್ಲಿ ಉತ್ತಮ ಕಲೆಕ್ಷನ್ ಮಾಡುವ ಮೂಲಕ ಸುದ್ದಿಯಾಗಿದೆ. ಈ ಯಶಸ್ಸಿನ ಬೆನ್ನಲ್ಲೇ ‘ಲೇಟ್ ನೈಟ್ ಪಾರ್ಟಿ’ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಟ ದರ್ಶನ್, ಅಭಿಷೇಕ್ ಅಂಬರೀಷ್, ಧನಂಜಯ್ ಸೇರಿ ಅನೇಕರಿಗೆ ನೋಟಿಸ್ ಕಳುಹಿಸಿದ್ದಾರೆ.

‘ಕಾಟೇರ’ ಸಿನಿಮಾದ ಯಶಸ್ಸನ್ನು ಸಂಭ್ರಮಿಸಲು ಬೆಂಗಳೂರಿನ ಒರಾಯನ್‌ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ನಲ್ಲಿ ಚಿತ್ರ ತಂಡ ಪಾರ್ಟಿ ಆಯೋಜಿಸಿದ್ದರು. ಪೊಲೀಸ್ ಇಲಾಖೆಯ ನಿಯಮದ ಪ್ರಕಾರ ತಡರಾತ್ರಿ 1 ಗಂಟೆವರೆಗೆ ಮಾತ್ರ ಪಬ್ ಓಪನ್ ಇಡಲು ಅವಕಾಶ ಇದೆ. ಆದರೆ, ಇಲ್ಲಿ ನಿಯಮವನ್ನು ಮೀರಿ ಮುಂಜಾನೆವರೆಗೆ ಪಾರ್ಟಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪಬ್ ಮಾಲೀಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಈ ಪ್ರಕರಣ ಸಾಕಷ್ಟು ಸುದ್ದಿ ಆಗಿತ್ತು.

jet lag bangalore

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪಾರ್ಟಿಯಲ್ಲಿ ಭಾಗಿಯಾಗಿದ್ದ ನಟ ದರ್ಶನ್, ಅಭಿಷೇಕ್, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್​ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸುಬ್ರಹ್ಮಣ್ಯನಗರ ಇನ್ಸ್​ಪೆಕ್ಟರ್​ ಸುರೇಶ್ ಅವ​ರು ಮೂವರಿಗೂ ನೋಟಿಸ್ ಜಾರಿ ಮಾಡಿರುವುದಾಗಿ ವರದಿಯಾಗಿದೆ. ನಟರಾದ ಡಾಲಿ ಧನಂಜಯ್, ಚಿಕ್ಕಣ್ಣ, ನಿನಾಸಂ ಸತೀಶ್ ಹಾಗೂ ನಿರ್ದೇಶಕ ತರುಣ್ ಸುಧೀರ್​ಗೂ ಕೂಡ ನೋಟಿಸ್​ ನೀಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

‘ಕಾಟೇರ’ ಚಿತ್ರತಂಡ ಜೆಟ್ ಲ್ಯಾಗ್ ಪಬ್​​ನಲ್ಲಿ ಪಾರ್ಟಿ ನಡೆಸುತ್ತಿದ್ದ ವಿಚಾರ ತಿಳಿದು ನೂರಾರು ಮಂದಿ ಅಭಿಮಾನಿಗಳು ಸ್ಟಾರ್ ನಟನನ್ನು ನೋಡಲು ಮುಂಜಾನೆ ಕೂಡ ಆಗಮಿಸಿದ್ದರು. ಅಲ್ಲದೇ, ಪಾರ್ಟಿ ನಡೆಸುತ್ತಿದ್ದವರು ರಸ್ತೆಯಲ್ಲಿಯೇ ‌ಕಾರು ನಿಲ್ಲಿಸಿ ಸಂಚಾರಕ್ಕೆ ಅಡಚಣೆ ಮಾಡಿದ್ದರು ಎಂಬ ಆರೋಪ ಕೂಡ ಕೇಳಿಬಂದಿತ್ತು.

ಸದ್ಯ ‘ಕಾಟೇರ’ ಚಿತ್ರತಂಡ ದುಬೈ ಪ್ರವಾಸದಲ್ಲಿದ್ದು, ಬಂದ ಬಳಿಕ ಏನೆಲ್ಲ ಬೆಳವಣಿಗೆಗಳು ನಡೆಯಲಿದೆ ಎಂದು ಕಾದುನೋಡಬೇಕಿದೆ.

ನೋಟಿಸ್ ಕಳುಹಿಸಿದ್ದ ಪೊಲೀಸ್ ಕಮಿಷನರ್

ಸಮಯ ಮೀರಿ ಪಬ್ ತೆರೆದಿಟ್ಟಿದ್ದರೂ ಕೂಡ ಯಾವುದೇ ಕ್ರಮ ಕೈಗೊಳ್ಳದ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆ ಪೊಲೀಸರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ನೋಟಿಸ್ ಜಾರಿ ಮಾಡಿದ್ದರು.

ಜನವರಿ 3ರಂದು ಮಧ್ಯರಾತ್ರಿ ಕಳೆದು ಮರುದಿನ ಬೆಳಗಿನ ಜಾವದವರೆಗೆ ಪಾರ್ಟಿ ಯಾವ ರೀತಿ ನಡೆದಿತ್ತು? ಯಾರೆಲ್ಲಾ ಬಂದಿದ್ದರು? ಅವಧಿ ಮೀರಿ ರೆಸ್ಟೋಬಾರ್ ತೆರೆದಿಡಲು ಮುಕ್ತ ಅವಕಾಶ ನೀಡಿದ್ದೇಕೆ? ಘಟನೆ ಬೆಳಕಿಗೆ ಬಂದರೂ ಕ್ರಮ ಏಕೆ ಕೈಗೊಂಡಿಲ್ಲ ಎಂದು ವಿವರಣೆ ಕೇಳಿ ಅಂದು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರಿಗೆ ನಗರ ಪೊಲೀಸ್ ಆಯುಕ್ತರು ನೊಟೀಸ್ ಜಾರಿ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...