ಸದಭಿರುಚಿಯ “X&Y” ಚಿತ್ರ ಈ ವಾರ ತೆರೆಗೆ

Date:

ಕನ್ನಡದ ʼರಾಮಾ ರಾಮಾ ರೇʼ ಸಿನಿಮಾ ಖ್ಯಾತಿಯ ಡಿ ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖ ಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ “X&Y” ಚಿತ್ರ ಜೂನ್ 26(ಗುರುವಾರ) ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಕಾಣುತ್ತಿದೆ.

ʼರಾಮಾ ರಾಮಾ ರೇʼ, ʼಒಂದಲ್ಲಾ ಎರಡಲ್ಲಾʼ ಮತ್ತು ʼಮ್ಯಾನ್ ಆಫ್ ದಿ ಮ್ಯಾಚ್ʼನಂತಹ ವಿಭಿನ್ನ ಚಿತ್ರಗಳನ್ನು ನಿರ್ದೇಶಿಸಿ ಜನಮನ್ನಣೆ ಗಳಿಸಿರುವ ಸತ್ಯಪ್ರಕಾಶ್‌ಗೆ “X&Y” ನಾಲ್ಕನೇ ಚಿತ್ರ. ಈಗಾಗಲೇ ಪೋಸ್ಟರ್, ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನರನ್ನು ತಲುಪಿರುವ “X&Y” ಚಿತ್ರ ಈ ವಾರ ತೆರೆಗೆ ಬರುತ್ತಿದ್ದು, ಈ ಚಿತ್ರ ಕೂಡ ಪ್ರೇಕ್ಷಕರ ಮನ ಗೆಲ್ಲಲ್ಲಿದೆ ಎಂಬ ಅಭಿಪ್ರಾಯ ಚಿತ್ರತಂಡದ್ದು.

ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಬಿ ಎಸ್ ಕೆಂಪರಾಜು, ಕೌಶಿಕ್ ಹರ್ಷರ ಸಂಗೀತ ನಿರ್ದೇಶನವಿದ್ದು, ವರದರಾಜ್ ಕಾಮತ್ ಅವರ ಕಲಾ ನಿರ್ದೇಶನವಿದೆ. ಸತ್ಯ ಪಿಕ್ಚರ್ಸ್ ನಿರ್ಮಾಣದ “X&Y” ನಲ್ಲಿ ಬೃಂದಾ ಆಚಾರ್ಯ, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ, ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರ್, ತೇನಪ್ಪನ್ ಸೇರಿದಂತೆ ಪ್ರತಿಭಾವಂತ ಹಾಗೂ ಹಿರಿಯ ಕಲಾವಿದರು ತಾರಾಗಣದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಾದಕ ವಸ್ತು ಸೇವನೆ ಆರೋಪ: ತಮಿಳು ನಟ ಬಂಧನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...