ʼದಿ ಡೈರಿ ಆಫ್‌ ವೆಸ್ಟ್‌ ಬೆಂಗಾಲ್‌ʼ ಚಿತ್ರದ ನಿರ್ದೇಶಕನಿಗೆ ಕೋಲ್ಕತ್ತಾ ಪೊಲೀಸರಿಂದ ನೋಟಿಸ್‌

Date:

ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗುರಿಯಾಗಿಸಿ ಸಿನಿಮಾ ಮಾಡಿದ ಸನೋಜ್‌

ಟ್ರೈಲರ್‌ ಬಿಡುಗಡೆಯಾದ ಬೆನ್ನಲ್ಲೇ ನಿರ್ದೇಶಕನ ವಿರುದ್ಧ ದೂರು ದಾಖಲು

ಟ್ರೈಲರ್‌ನಿಂದಲೇ ವಿವಾದ ಸೃಷ್ಟಿಸಿರುವ ʼದಿ ಡೈರಿ ಆಫ್‌ ವೆಸ್ಟ್‌ ಬೆಂಗಾಲ್‌ʼ ಚಿತ್ರದ ನಿರ್ದೇಶಕ ಸನೋಜ್‌ ಮಿಶ್ರಾ ಅವರಿಗೆ ಕೋಲ್ಕತ್ತಾ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಗುರಿಯಾಗಿಸಿ ಸನೋಜ್‌ ಮಿಶ್ರಾ, ʼದಿ ಡೈರಿ ಆಫ್‌ ವೆಸ್ಟ್‌ ಬೆಂಗಾಲ್‌ʼ ಚಿತ್ರದ ಕಥೆಯನ್ನು ಹೆಣೆದಿದ್ದಾರೆ. ಕಳೆದ ಏಪ್ರಿಲ್‌ನಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರದ ಟ್ರೈಲರ್‌ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಅಂದಾಜು ಎರಡು ನಿಮಿಷಗಳ ಟ್ರೈಲರ್‌ನಲ್ಲಿ, ʼಪಶ್ಚಿಮ ಬಂಗಾಳದ ಹಿಂದೂಗಳು ಆಪತ್ತಿನಲ್ಲಿದ್ದಾರೆ. ಮಮತಾ ಬ್ಯಾನರ್ಜಿ, ಅಕ್ರಮವಾಗಿ ಭಾರತದ ಗಡಿ ದಾಟಿ ಒಳನುಸುಳುತ್ತಿರುವ ರೋಹಿಂಗ್ಯಾ ಮುಸಲ್ಮಾನರು ಮತ್ತು ಬಾಂಗ್ಲಾದೇಶಿಗಳ ಪರವಾಗಿದ್ದಾರೆ. ಪಶ್ಚಿಮ ಬಂಗಾಳ ದಿನದಿಂದ ದಿನಕ್ಕೆ ಕಾಶ್ಮೀರದ ರೀತಿ ಬದಲಾಗುತ್ತಿದೆʼ ಎಂದು ಗಂಭೀರ ಆರೋಪಗಳನ್ನು ಮಾಡಲಾಗಿತ್ತು. ವಿವಾದಾತ್ಮಕ ಕಥಾಹಂದರವುಳ್ಳ ಈ ಚಿತ್ರಕ್ಕೆ ಜಿತೇಂದ್ರ ನಾರಾಯಣ್‌ ಸಿಂಗ್‌ ತ್ಯಾಗಿ ಎನ್ನುವವರು ಬಂಡವಾಳ ಹೂಡಿದ್ದಾರೆ.

ಈ ವಿವಾದಾತ್ಮಕ ಚಿತ್ರದ ಟ್ರೈಲರ್‌ಗೆ ಆಕ್ಷೇಪ ವ್ಯಕ್ತಪಡಿಸಿ ನಿರ್ದೇಶಕ ಸನೋಜ್‌ ಮಿಶ್ರಾ ಮೇ 11ರಂದು ಕೊಲ್ಕತ್ತಾದ ಅಮ್ಹೆರ್ಸ್ಟ್‌ ರಸ್ತೆಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜ್ಯದ ಘನತೆಗೆ ಧಕ್ಕೆಯುಂಟು ಮಾಡುವ ಉದ್ದೇಶದಿಂದಾಗಿಯೇ ಈ ರೀತಿಯ ಟ್ರೈಲರ್‌ ಬಿಡುಗಡೆ ಮಾಡಲಾಗಿದೆ ಎಂದು ದೂರುದಾರರು ಆರೋಪಿಸಿರುವುದಾಗಿ ಪೊಲೀಸರು ರಾಷ್ಟ್ರೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಈಗಾಗಲೇ ಪ್ರಕರಣದ ಪ್ರಾಥಮಿಕ ನಡೆಸಿದ್ದೇವೆ. ಮೇ 30ರಂದು ಮಧ್ಯಾಹ್ನ 12ಗಂಟೆಗೆ ಅಮ್ಹೆರ್ಸ್ಟ್‌ ರಸ್ತೆಯ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ನೋಟಿಸ್‌ ನೀಡಲಾಗಿದೆ” ಎಂದ ಕೊಲ್ಕತ್ತಾ ನಗರ ಪೊಲೀಸ್‌ ಆಯುಕ್ತರು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಭಿಮಾನಿಯ ಕೊನೆ ಆಸೆ ಈಡೇರಿಸಿದ ಹೃದಯವಂತ ಶಾರುಖ್‌ ಖಾನ್‌

ತಿರುಚಿದ ಕಥಾಹಂದರದ ಕಾರಣಕ್ಕೆ ಭಾರೀ ವಿವಾದ ಸೃಷ್ಟಿಸಿರುವ ʼದಿ ಕೇರಳ ಸ್ಟೋರಿʼ ಚಿತ್ರದ ಪ್ರದರ್ಶನವನ್ನು ಮಮತಾ ಬ್ಯಾನರ್ಜಿ ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ನಿಷೇಧಿಸಿದ್ದರು. ಇದೇ ವೇಳೆ “ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ದುರುದ್ದೇಶಪೂರಿತ ಚಿತ್ರಗಳನ್ನು ತಯಾರಿಸುವ ಸಲುವಾಗಿ ಬಿಜೆಪಿ, ಕೆಲವು ಸ್ಟಾರ್‌ ಕಲಾವಿದರಿಗೆ ಹಣ ಸಂದಾಯ ಮಾಡಿದೆ. ಹಣ ಪಡೆದಿರುವ ಕಲಾವಿದರು ಈಗಾಗಲೇ ಪಶ್ಚಿಮ ಬಂಗಾಳಕ್ಕೂ ಬಂದು ಹೋಗಿದ್ದಾರೆ. ತಿರುಚಿದ ಕಥೆಯನ್ನಿಟ್ಟುಕೊಂಡು ʼಬಂಗಾಳ ಫೈಲ್ಸ್‌ʼ ಸಿನಿಮಾ ಮಾಡಲು ಹೊರಟಿದ್ದಾರೆ” ಈ ಬಗ್ಗೆ ನಾನು ಮಾಹಿತಿ ಪಡೆದುಕೊಂಡಿದ್ದೇನೆ” ಎಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...