ಕನ್ನಡದ ಕ್ಲಾಸಿಕ್ ಸಿನಿಮಾ ಪ್ರತಿಗಳ ಸಂರಕ್ಷಣೆಗೆ ಚಲನಚಿತ್ರ ಅಕಾಡೆಮಿ ಗಮನ ಹರಿಸಬೇಕು: ಅಪರ್ಣಾ ಸುಬ್ರಮಣಿಯನ್

Date:

‘ಕನ್ನಡದ ಹಳೆಯ ಸಿನಿಮಾಗಳ ಸಂರಕ್ಷಣೆ ಮತ್ತು ಪುನಶ್ಚೇತನದ ಕಡೆಗೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಗಮನಹರಿಸಬೇಕು’ ಎಂದು ಸಿನಿಮಾ ಸಂರಕ್ಷಣೆ ಮತ್ತು ಪುನಶ್ಚೇತನಾ ಕಾರ್ಯದಲ್ಲಿ ತೊಡಗಿಕೊಂಡಿರುವ ಅಪರ್ಣಾ ಸುಬ್ರಮಣಿಯನ್ ಹೇಳಿದರು.

ಬೆಂಗಳೂರು ಚಿತ್ರೋತ್ಸವದಲ್ಲಿ ನಡೆದ ‘ಸಿನಿಮಾಗಳ ಸಂಗ್ರಹಣೆ, ಸಂರಕ್ಷಣೆ ಮತ್ತು ಪುನಶ್ಚೇತನ’ ಗೋಷ್ಠಿಯಲ್ಲಿ ಅವರು ಕ್ಲಾಸಿಕ್ ಸಿನಿಮಾಗಳ ಸಂಗ್ರಹಣೆ, ಸಂರಕ್ಷಣೆ ಮತ್ತು ಅವುಗಳನ್ನು ಪುನಶ್ಚೇತನಗೊಳಿಸುವ ಮಹತ್ವದ ಕುರಿತು ಮಾತನಾಡಿದರು.

‘ಚಿತ್ರೋತ್ಸವದಲ್ಲಿ ಪ್ರದರ್ಶನವಾದ ಹಳೆಯ ಕ್ಲಾಸಿಕ್ ಸಿನಿಮಾಗಳನ್ನು ವೀಕ್ಷಿಸಿದ ಬಳಿಕ ಅದರ ಗುಣಮಟ್ಟ ಸಮರ್ಪಕವಾಗಿಲ್ಲದೇ ಇರುವುದು ಅರಿವಿಗೆ ಬಂತು. ಈ ನಿಟ್ಟಿನಲ್ಲಿ ಹಳೆಯ ಸಿನಿಮಾಗಳನ್ನು ಸಂಗ್ರಹಿಸಿ ಉಳಿಸುವುದು ಅಗತ್ಯವಾಗಿದೆ. ಸಾಮಾನ್ಯವಾಗಿ ನಿರ್ಮಾಪಕರಿಗೆ ಲಾಭ ಗಳಿಸುವ ಕಡೆಗೆ ಗಮನ ಇರುತ್ತದೆಯೇ ಹೊರತು ಆ ಸಿನಿಮಾದ ಸಂರಕ್ಷಣೆ ಕಡೆಗೆ ಎಚ್ಚರ ಇರುವುದಿಲ್ಲ. ಹಾಗಾಗಿ, ಎಷ್ಟೋ ಸಿನಿಮಾಗಳ ನೆಗೆಟಿವ್ ಪ್ರಿಂಟ್ ಗಳು ಸಂರಕ್ಷಣೆ ಮಾಡದಷ್ಟು ಹಾಳಾಗಿವೆ. ಹಾಗಾಗಬಾರದು ಎಂದಾದರೆ ಸಿನಿಮಾ ಸಂರಕ್ಷಣೆ ದೊಡ್ಡ ಮಟ್ಟದಲ್ಲಿ ನಡೆಯಬೇಕು’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿನಿಮಾ ಸಂರಕ್ಷಣೆಯ ಸವಾಲಿನ ಕುರಿತು ಮಾತನಾಡಿದ ಅವರು, ‘ಒಂದು ಸಿನಿಮಾ ಸಂರಕ್ಷಣೆ ಮತ್ತು ಪುನಶ್ಚೇತನಕ್ಕೆ ಕಡಿಮೆ ಎಂದರೂ 20 ಲಕ್ಷ ಬೇಕಾಗುತ್ತದೆ. ಹಾಗಾಗಿ ಈ ಕಾರ್ಯ ಬಹಳ ದುಡ್ಡು ಬೇಡುವ ಕೆಲಸ. ಸರ್ಕಾರಿ ಸಂಸ್ಥೆಗಳೇ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಿರುತ್ತದೆ. ವಿದೇಶಗಳಲ್ಲಿ ಈ ಕಾರ್ಯಕ್ಕಾಗಿ 350 ಮಿಲಿಯನ್ ಡಾಲರ್ ನಷ್ಟು ಅನುದಾನ ದೊರೆಯುತ್ತದೆ. ಆದರೆ, ಅಷ್ಟಿದ್ದರೂ ಸಾಕಾಗುವುದಿಲ್ಲ ಎಂದು ಅವರು ಬೇಸರಿಸುತ್ತಾರೆ. ಇನ್ನು ನಮಗೆ ಒಂದು ಕೋಟಿ ಅನುದಾನ ಕೊಟ್ಟರೂ ಅದು ಯಾವುದಕ್ಕೂ ಸಾಲುವುದಿ’ ಎಂದು ಅಭಿಪ್ರಾಯಪಟ್ಟರು.

‘ನ್ಯಾಷನಲ್ ಫಿಲ್ಮ್ ಆರ್ಕೈವ್ ಆಫ್ ಇಂಡಿಯಾ ಇದುವರೆಗೆ 5000 ಸಿನಿಮಾಗಳ ಸಂರಕ್ಷಣೆ ಮಾಡಿದೆ. ಇನ್ನೂ 2500 ಸಿನಿಮಾಗಳ ಸಂರಕ್ಷಣಾ ಕಾರ್ಯ ನಡೆಯುತ್ತಿದೆ. ಎಂ.ಆರ್‌. ರಾಧಾ ಅಭಿನಯದ ತಮಿಳಿನ ‘ರಕ್ತ ಕಣ್ಣೀರ್’ ಸಿನಿಮಾವನ್ನು ನಾನೇ ಸಂಗ್ರಹಣೆ ಮಾಡಿ ನ್ಯಾಷನಲ್ ಫಿಲ್ಮ್ ಆರ್ಕೈವ್ ಆಫ್ ಇಂಡಿಯಾಗೆ ನೀಡಿದ್ದೇನೆ’ ಎಂದು ಹೇಳಿದರು.

ಸಿನಿಮಾ ಸಂರಕ್ಷಣಾ ಕಾರ್ಯದ ಕುರಿತು ಗೋಷ್ಠಿಯನ್ನು ಆಯೋಜಿಸಿದ ಚಲನಚಿತ್ರ ಅಕಾಡೆಮಿಗೆ ಧನ್ಯವಾದ ಸಲ್ಲಿಸಿದ ಅವರು, ‘ಸಾಮಾನ್ಯವಾಗಿ ಚಿತ್ರೋತ್ಸವಗಳಲ್ಲಿ ಸಿನಿಮಾ ಪ್ರದರ್ಶನಗಳ ಕಡೆಗೆ ಗಮನ ಹರಿಸಲಾಗುತ್ತದೆ. ಆದರೆ, ಇಲ್ಲಿ ಸಿನಿಮಾ ಸಂರಕ್ಷಣೆ ಕುರಿತು ಮಾತನಾಡಲು ಅವಕಾಶ ನೀಡಿದ್ದಕ್ಕೆ ನಾನು ಆಭಾರಿಯಾಗಿದ್ದೇನೆʼ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...

ಕನ್ನಡಿಗರು ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ಹೀಗಂದಿದ್ಯಾಕೆ ಸಿಎಂ?

ಮೈಸೂರು, ಬೆಂಗಳೂರು ಹಾಗೂ ಹುಬ್ಬಳಿಯಲ್ಲಿ ನಡೆಯಬೇಕಿದ್ದ ರೈಲ್ವೆ ಇಲಾಖೆ ಮುಂಬಡ್ತಿ ಪರೀಕ್ಷೆಗಳನ್ನು...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...