ದೂರದೂರಿನಲ್ಲೂ ಮೇಳೈಸುತ್ತಿದೆ ʼದೂರ ತೀರ ಯಾನʼದ ಶೀರ್ಷಿಕೆ ಗೀತೆ

Date:

ʼಡಿ ಕ್ರಿಯೇಷನ್ಸ್ʼ ಮೂಲಕ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದೇವರಾಜ್ ಆರ್ ನಿರ್ಮಾಣದ ಹಾಗೂ ʼಹರಿವುʼ, ʼನಾತಿಚರಾಮಿʼ, ʼಆಕ್ಟ್ 1978ʼ, ʼ19.20.21ʼ ನಂತಹ ಜನಮೆಚ್ಚುಗೆ ಪಡೆದ ಚಿತ್ರಗಳ ನಿರ್ದೇಶಕ ಮಂಸೋರೆ ನಿರ್ದೇಶಿಸಿರುವ ಹಾಗೂ ವಿಜಯ್ ಕೃಷ್ಣ-ಪ್ರಿಯಾಂಕ ಕುಮಾರ್ ನಾಯಕ-ನಾಯಕಿಯಾಗಿ ನಟಿಸಿರುವ ʼದೂರ ತೀರ ಯಾನʼ ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಯಿತು.

ಕಿರಣ್ ಕಾವೇರಪ್ಪ ಬರೆದು ಬಕ್ಕೇಶ್ ಹಾಗೂ ಕಾರ್ತಿಕ್ ಸಂಗೀತ ನೀಡಿರುವ ಹಾಗೂ ಬಕ್ಕೇಶ್-ಇಶಾ ಸುಚಿ ಅವರು ಹಾಡಿರುವ ಈ ಶೀರ್ಷಿಕೆ ಗೀತೆಯನ್ನು ನಿರ್ಮಾಪಕ ದೇವರಾಜ್ ಅವರ ಪುತ್ರ ಜಯರಾಮ್ ಬಿಡುಗಡೆ ಮಾಡಿದರು. ಹೆಸರಾಂತ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಹಾಗೂ‌ ಖ್ಯಾತ ನಟ ನವೀನ್ ಶಂಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಎಂ.ಆರ್.ಟಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಹಾಡಿಗೆ ಪ್ರೇಕ್ಷಕರು ಫಿದಾ ಆಗಿದ್ದು, ಇಲ್ಲಿ ಮಾತ್ರವಲ್ಲದೆ ವಿದೇಶಗಳಿಂದಲೂ ಈ ಹಾಡಿಗೆ ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ. ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. “ದೂರ ತೀರ ಯಾನದಲ್ಲಿ ಆರು ಹಾಡುಗಳು ಹಾಗೂ ಎರಡು ಮ್ಯೂಸಿಕಲ್ ಬೀಟ್ಸ್ ಇದೆ. ಇಂದು ಶೀರ್ಷಿಕೆ ಗೀತೆ ಬಿಡುಗಡೆಯಾಗಿದೆ. ಈ ಹಾಡಿಗೆ ಕಿರಣ್ ಕಾವೇರಪ್ಪ ಸಾಹಿತ್ಯ ಬರೆದಿದ್ದು, ನಾನು ಹಾಗೂ ಕಾರ್ತಿಕ್ ಸಂಗೀತ ನೀಡಿದ್ದೇವೆ. ನಾನು ಹಾಗೂ ಇಶಾ ಸುಚಿ ಹಾಡಿದ್ದೇವೆ. ಹೆಸರಾಂತ ಮ್ಯುಸಿಷಿಯನ್ಸ್ ನನ್ನೊಂದಿಗೆ ಕಾರ್ಯ ನಿರ್ವಹಿಸಿದ್ದಾರೆ” ಎಂದು ಸಂಗೀತ ನಿರ್ದೇಶಕ ಹಾಗೂ ಗಾಯಕ ರೋಣದ ಬಕ್ಕೇಶ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಸಿನೆಮಾದ ಹಾಡುಗಳಲ್ಲಿ ಒಂದೇ ಒಂದು ಇಂಗ್ಲಿಷ್ ಪದ ಕೂಡ ಬಳಸದೇ ನಮ್ಮ ಸಂಗೀತ ನಿರ್ದೇಶಕರು ಹಾಗೂ ಗೀತ ಸಾಹಿತಿಗಳ ನೆರವಿನಿಂದ ಹಾಡುಗಳನ್ನು ಸಂಯೋಜಿಸಿದ್ದೇವೆ. ಇವೆಲ್ಲಾ ನಮ್ಮ ಕನ್ನಡ ಭಾಷೆಯ ಹಿರಿಮೆ” ಎಂದು ಮಾತನಾಡಿದ ನಿರ್ದೇಶಕ ಮಂಸೋರೆ ಅವರು, “ಬಕ್ಕೇಶ್ ಸಂಗೀತ ನೀಡಿ ಹಾಡಿರುವ ಈ ಶೀರ್ಷಿಕೆ ಗೀತೆ ನನ್ನ ಮೆಚ್ಚಿನ ಗೀತೆಯೂ ಹೌದು. ಲಾಂಗ್ ಡ್ರೈವ್ ಮಾಡುವ ಪಯಣಿಗರಿಗೆ ಸಿಕ್ಕ ಸುಮಧುರ ಗೀತೆ ಕೂಡ. ನಮ್ಮ ಚಿತ್ರದಲ್ಲಿ ಆರು ಹಾಡುಗಳು ಹಾಗೂ ಎರಡು ಬಿಟ್ಸ್ ಇದ್ದು, ಎಂ.ಆರ್.ಟಿ ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಚಿತ್ರ ಉತ್ತಮವಾಗಿ ಮೂಡಿಬರಲು ನಿರ್ಮಾಪಕ ದೇವರಾಜ್ ಅವರ ಸಹಕಾರ ಅಪಾರವಾಗಿದೆ. “ದೂರ ತೀರ ಯಾನ” ಬೆಂಗಳೂರಿನಿಂದ ಗೋವಾದವರೆಗೂ ನಡೆಯುವ ಪಯಣದ ಕಥೆ. ಇದು ಪ್ರೇಮ ಕಥೆಯಲ್ಲ. ಪ್ರೇಮದ ಕಥೆ. ಜುಲೈ 11 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಎಂದಿನಂತೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ” ಎಂದರು.

ಇದನ್ನೂ ಓದಿ: ಡಾರ್ಲಿಂಗ್ ಕೃಷ್ಣರ “ಫಾದರ್” ಸಿನಿಮಾ ಪೋಸ್ಟರ್ ‌ಬಿಡುಗಡೆ; ಶೀಘ್ರದಲ್ಲೇ ಚಿತ್ರ ಬೆಳ್ಳಿತೆರೆಗೆ

ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಸಿನಿಮಾ ನಿರ್ಮಾಣವಾಗಿದೆ. ಜುಲೈ 11ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ ಎಂದರು ನಿರ್ಮಾಪಕ ದೇವರಾಜ್.

“ಇಂದು ಬಿಡುಗಡೆಯಾಗಿರುವ ಟೈಟಲ್ ಸಾಂಗ್ ನಲ್ಲಿ ಸಖತ್ ಎನರ್ಜಿ ಇದೆ. ಅದೇ ಎನರ್ಜಿ ಯಲ್ಲಿ ನಮ್ಮ ಚಿತ್ರತಂಡ ಕೆಲಸ ಮಾಡಿದೆ‌. ಇಂದು ಹಾಡು ಬಿಡುಗಡೆ ಸಮಾರಂಭ. ಹಾಗಾಗಿ ಅದರ ಬಗ್ಗೆ ಹೇಳಿದ್ದೀನಿ. ನನ್ನ ಪಾತ್ರದ ಕುರಿತು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ” ಎಂದು ನಾಯಕ ವಿಜಯ್ ಕೃಷ್ಣ ಹೇಳಿದರು. ಇದು ನನ್ನ ಇಷ್ಟದ ಗೀತೆ ಕೂಡ ಎಂದು ನಾಯಕಿ ಪ್ರಿಯಾಂಕ ಕುಮಾರ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...