ಬಿಗ್‌ಬಾಸ್ ಮನೆಯಿಂದಲೇ ವರ್ತೂರು ಸಂತೋಷ್ ಬಂಧನ; ಕಾರಣವೇನು?

Date:

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಬಿಗ್‌ಬಾಸ್’ ರಿಯಾಲಿಟಿ ಶೋ ಸೀಸನ್ 10ರ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಗ್‌ಬಾಸ್ ಮನೆಯಿಂದಲೇ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಕಲರ್ಸ್ ಕನ್ನಡ ವಾಹಿನಿ ಈ ಬಗ್ಗೆ ಇನ್ನೂ ಮಾಹಿತಿ ಪ್ರಕಟಿಸಿಲ್ಲ.

ರಾಮೋಹಳ್ಳಿ ಅರಣ್ಯಾಧಿಕಾರಿಗಳು ಬಿಡದಿಯ ಇನೋವೇಟಿವ್ ಫಿಲ್ಮ್‌ ಸಿಟಿಯಲ್ಲಿರುವ ಬಿಗ್‌ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಸಂತೋಷ್ ಧರಿಸಿದ್ದ ಚೈನ್‌ನಲ್ಲಿ ಹುಲಿ ಉಗುರು ಕಾಣಿಸಿಕೊಂಡಿದ್ದು, ಆ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

ವರ್ತೂರು ಸಂತೋಷ್ ಅವರು ಬಿಗ್‌ಬಾಸ್​ಗೆ ಬರುವ ಸಮಯದಲ್ಲಿ ಕುತ್ತಿಗೆಗೆ ಚಿನ್ನದ ಚೈನ್ ಧರಿಸಿದ್ದರು. ಅದರಲ್ಲಿದ್ದ ಪೆಂಡೆಂಟ್‌ನಲ್ಲಿ ಹುಲಿ ಉಗುರು ಕಾಣಿಸಿತ್ತು. ಹೀಗಾಗಿ, ವನ್ಯಜೀವಿ ಕಾಯಿದೆ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...