ಅನಾರೋಗ್ಯದಿಂದ ಹಿರಿಯ ನಟ ಉಮೇಶ್ ನಿಧನ

Date:

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ಅವರು ಭಾನುವಾರ ನಿಧನರಾಗಿದ್ದಾರೆ.  

ಕಳೆದ ಕೆಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಉಮೇಶ್ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತರಾಗಿದ್ದಾರೆ.

ಎಂ.ಎಸ್. ಉಮೇಶ್ ಅವರಿಗೆ 80 ವರ್ಷ ವಯಸ್ಸಾಗಿತ್ತು. ಉಮೇಶ್ ಅವರ ನಿಧನ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ನೋವುಂಟು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1960ರಿಂದಲೂ ಉಮೇಶ್ ಅವರು ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ತಮ್ಮ ಇಳಿವಯಸ್ಸಿನಲ್ಲಿಯೂ ಕೂಡ ಉಮೇಶ್ ಅವರು ನಟನೆ ಮಾಡಿದ್ದಾರೆ. ‘ಕಮಲ್ ಶ್ರೀದೇವಿ’, ‘ಐ ಆ್ಯಮ್ ಗಾಡ್’ ಸಿನಿಮಾಗಳು ಉಮೇಶ್ ಅವರು ಇತ್ತೀಚೆಗೆ ನಟಿಸಿದ ಚಿತ್ರಗಳಾಗಿವೆ.

ಪ್ರಮುಖವಾಗಿ ಉಮೇಶ್ ಅವರು ಪೋಷಕ ಪಾತ್ರಗಳು ಹಾಗೂ ಹಾಸ್ಯ ಪಾತ್ರಗಳ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ಪ್ರಮುಖವಾಗಿ, “ಅಯ್ಯಯ್ಯೋ ಇವ್ರೂ ನನ್ನ ಅಪಾರ್ಥ ಮಾಡ್ಕೊಂಬಿಟ್ರಲ್ಲ. ನಾನೇನೂ ಬೇಕೂ ಅಂತ ಹೀಗ್ ಮಾಡ್ಲಿಲ್ಲ….. ಹೇಳ್ಕೊಳ್ಳೋಣ ಅಂದ್ರೆ ನನ್ಹೆಂಡ್ತಿ ಕೂಡಾ ಊರಲ್ಲಿಲ್ವೆ..” ಎಂಬ ಈ ಡೈಲಾಗ್ ಹೆಚ್ಚು ಪ್ರಸಿದ್ಧಿ ಪಡೆದಿತ್ತು. ಹೀಗೆ, ಅವರ ಅಸಾಮಾನ್ಯ ರೀತಿಯ ಡೈಲಾಗ್, ಅಭಿನಯದ ಮೂಲಕ ಕನ್ನಡ ಚಿತ್ರರಸಿಕರ ಮನವನ್ನು ಉಮೇಶ್ ಅವರು ಗೆದ್ದಿದ್ದರು.

350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಉಮೇಶ್ 1945ರ ಏಪ್ರಿಲ್‌ 24ರಂದು ಮೈಸೂರಿನಲ್ಲಿ ಜನಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: ದಂಡ ಪಾವತಿಗೆ 50% ರಿಯಾಯತಿ; 7 ಕೋಟಿ ರೂ. ಸಂಗ್ರಹ

ರಂಗಭೂಮಿ ಮತ್ತು ಚಲನಚಿತ್ರ ನಟರಾಗಿ ಸಕ್ರಿಯರಾಗಿದ್ದ ಉಮೇಶ್ ಅವರು 1960ರಲ್ಲಿ ಬಿ ಆರ್‌ ಪಂಥುಲು ನಿರ್ದೇಶನದ ‘ಮಕ್ಕಳ ರಾಜ್ಯ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಮಾಡಿದರು. ಆ ಬಳಿಕ, ಸಿನಿಮಾ ಕ್ಷೇತ್ರದಲ್ಲಿ ಸಕ್ರಿಯವಾದ ಅವರು  ‘ನಾಗರ ಹೊಳೆ’, ‘ಗುರು ಶಿಷ್ಯರು’, ‘ಅನುಪಮಾ’, ‘ಕಾಮನ ಬಿಲ್ಲು’, ‘ಅಪೂರ್ವ ಸಂಗಮ’, ‘ಶ್ರುತಿ ಸೇರಿದಾಗ’, ‘ಹಾಲು ಸಕ್ಕರೆ’, ‘ಗೋಲ್​ಮಾಲ್ ರಾಧಾಕೃಷ್ಣ’, ‘ಮಲಯ ಮಾರುತು’, ‘ಗಜಪತಿ ಗರ್ಭಭಂಗ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.



eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...