ಬಾಲಿವುಡ್‌ನ ಹಿರಿಯ ನಟ ಗೋವರ್ಧನ ಅಸ್ರಾನಿ ನಿಧನ

Date:

ತನ್ನ ಅಪ್ರತಿಮ ಹಾಸ್ಯ ಪಾತ್ರಗಳಿಂದಾಗಿ ಹೆಸರಾಗಿದ್ದ ಹಿರಿಯ ಬಾಲಿವುಡ್ ನಟ ಗೋವರ್ಧನ ಅಸ್ರಾನಿ(84) ಅವರು ಮುಂಬೈನಲ್ಲಿ ಸೋಮವಾರ ನಿಧನರಾಗಿದ್ದಾರೆ.

ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಲ್ಲಿ ರಾಜಸ್ಥಾನದ ಜೈಪುರದಲ್ಲಿ ಜನಿಸಿದ್ದ ಅಸ್ರಾನಿ ತನ್ನ ಐದು ದಶಕಗಳಿಗೂ ಹೆಚ್ಚಿನ ವೃತ್ತಿ ಜೀವನದಲ್ಲಿ 350ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದರು.

1970ರ ದಶಕದ ‘ಮೇರೆ ಅಪ್ನೆ’ ಚಿತ್ರದೊಂದಿಗೆ ಖ್ಯಾತಿಯನ್ನು ಗಳಿಸಿದ್ದ ಅಸ್ರಾನಿ ವಯೋ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದರು. ಸಾವಿಗೆ ಕೆಲವೇ ಗಂಟೆಗಳ ಮುನ್ನ ಅವರು ಸಾಮಾಜಿಕ ಮಾಧ್ಯಮದಲ್ಲಿ ತನ್ನ ಅಭಿಮಾನಿಗಳೊಂದಿಗೆ ದೀಪಾವಳಿ ಶುಭಾಶಯಗಳನ್ನು ಹಂಚಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಫೋಟೋ ದುರ್ಬಳಕೆ: ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಿದ ನಟ ಸುನೀಲ್ ಶೆಟ್ಟಿ

ಇಲ್ಲಿಯ ಸಾಂತಾಕ್ರೂಝ್ ಚಿತಾಗಾರದಲ್ಲಿ ಕುಟುಂಬ ಸದಸ್ಯರ ಉಪಸ್ಥಿತಿಯಲ್ಲಿ ಅವರ ಅಂತ್ಯಸಂಸ್ಕಾರವು ನೆರವೇರಿತು.

ಈ ವರ್ಷ 50 ವರ್ಷಗಳನ್ನು ಪೂರೈಸಿದ 1975ರ ಶ್ರೇಷ್ಠ ಚಿತ್ರ ‘ಶೋಲೆ’ಯಲ್ಲಿನ ವಿಲಕ್ಷಣ ಜೈಲರ್ ಪಾತ್ರದ ಮೂಲಕ ಅಸ್ರಾನಿ ಭಾರತೀಯ ಪ್ರೇಕ್ಷಕರ ಹೃದಯಗಳಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದರು. ಚಿತ್ರದಲ್ಲಿ ಅವರು ಪರದೆಯ ಮೇಲೆ ಅಲ್ಪಾವಧಿಗೆ ಕಾಣಿಸಿಕೊಂಡಿದ್ದರಾದರೂ ಅವರ ಅಭಿನಯ, ವಿಶೇಷವಾಗಿ ‘ಹಮ್ ಅಂಗ್ರೇಜೋಂ ಕೆ ಜಮಾನೆ ಕೆ ಜೈಲರ್ ಹೈ’ ಎಂಬ ಅವರ ಮಾತು ಜನರನ್ನು ಗೆದ್ದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...