400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಹಿರಿಯ ತಮಿಳು ನಟ ಡೆಲ್ಲಿ ಗಣೇಶ್ ನಿಧನ

Date:

ಸುಮಾರು ಮೂರು ದಶಕಗಳ ಕಾಲ ತಮಿಳು ಚಿತ್ರರಂಗದ ಎಲ್ಲಾ ಸ್ಟಾರ್‌ಗಳ ಜೊತೆ ನಟಿಸಿರುವ ಹಿರಿಯ ನಟ ಡೆಲ್ಲಿ ಗಣೇಶ್ ಶನಿವಾರ ರಾತ್ರಿ ನಿಧನರಾಗಿದ್ದಾರೆ. ಈ ಬಗ್ಗೆ ಅವರ ಪುತ್ರ ಮಹದೇವನ್ ಇನ್‌ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ಖಚಿತಪಡಿಸಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ತನ್ನ 80ನೇ ವಯಸ್ಸಿನಲ್ಲಿ ಡೆಲ್ಲಿ ಗಣೇಶ್ ನಿಧನರಾಗಿದ್ದಾರೆ ಎಂದು ತಿಳಿಸಿದ್ದಾರೆ.

“ನಮ್ಮ ತಂದೆ ಡೆಲ್ಲಿ ಗಣೇಶ್ ಅವರು ನವೆಂಬರ್ 9ರಂದು ರಾತ್ರಿ 11 ಗಂಟೆಯ ಸುಮಾರಿಗೆ ನಿಧನರಾದರು ಎಂದು ತಿಳಿಸಲು ನಾವು ತೀವ್ರವಾಗಿ ವಿಷಾದಿಸುತ್ತೇವೆ” ಎಂದು ಪುತ್ರ ಮಹದೇವನ್ ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ, ಡಿಸಿಎಂ ಡಿ ಕೆ ಶಿವಕುಮಾರ್‌ ಸೇರಿ ಗಣ್ಯರ ಸಂತಾಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಖ್ಯಾತ ನಿರ್ದೇಶಕ ಕೆ ಬಾಲಚಂದರ್ ಅವರ ಪತ್ತಿನ ಪ್ರವೇಶಂ (1976) ಸಿನಿಮಾದ ಮೂಲಕ ದೆಲ್ಲಿ ಗಣೇಶ್ ತಮಿಳು ಸಿನಿಮಾದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಹೆಸರೇ ಸೂಚಿಸುವಂತೆ ದೆಹಲಿಯವರಾದ ಅವರು ದೆಹಲಿಯಲ್ಲಿ ನಾಟಕ ತಂಡವಾದ ದಕ್ಷಿಣ ಭಾರತ ನಾಟಕ ಸಭಾದ ಸಕ್ರಿಯ ಸದಸ್ಯರಾಗಿದ್ದರು.

ತನ್ನ ವೃತ್ತಿಜೀವನದಲ್ಲಿ ಡೆಲ್ಲಿ ಗಣೇಶ್ ಸುಮಾರು 400ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಕೊನೆಯದಾಗಿ ಕಮಲ್ ಹಾಸನ್ ಅವರ ಇಂಡಿಯನ್ 2 ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಕಮಲ್ ಹಾಸನ್ ಅವರ ಬಹುತೇಕ ಚಲನಚಿತ್ರಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸಿಂಧು ಭೈರವಿ (1985), ನಾಯಕನ್ (1987), ಅಪೂರ್ವ ಸಾಗೋಧರರ್‌ಗಳು (1989), ಮೈಕೆಲ್ ಮದನ ಕಾಮ ರಾಜನ್ (1990), ತೆನಾಲಿ (2000) ಹೀಗೆ ಮಲಯಾಳಂ, ತೆಲುಗು ಮತ್ತು ಹಿಂದಿಯಂತಹ ಇತರ ಭಾಷೆಗಳ ಚಿತ್ರಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.

ಪಾಸಿ ಚಿತ್ರದಲ್ಲಿನ ಅವರ ಅಭಿನಯಕ್ಕಾಗಿ 1979ರಲ್ಲಿ ತಮಿಳುನಾಡು ರಾಜ್ಯ ಚಲನಚಿತ್ರ ವಿಶೇಷ ಪ್ರಶಸ್ತಿ ಲಭಿಸಿದೆ. 1994ರಲ್ಲಿ ತಮಿಳುನಾಡು ಸರ್ಕಾರವು ಕಲೈಮಾಮಣಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...