ನಿರೀಕ್ಷೆ ಹೆಚ್ಚಿಸಿದ ʼಮುಧೋಳ್‌ʼ ಟೈಟಲ್‌ ಟೀಸರ್‌

Date:

ಚೊಚ್ಚಲ ಚಿತ್ರದಲ್ಲಿ ಸೋಲನುಭವಿಸಿದ್ದ ವಿಕ್ರಮ್‌

ಗ್ಯಾಂಗ್‌ಸ್ಟರ್‌ ಪಾತ್ರದಲ್ಲಿ ಗಮನ ಸೆಳೆದ ಕ್ರೇಜಿಸ್ಟಾರ್‌ ಪುತ್ರ

ಸ್ಯಾಂಡಲ್‌ವುಡ್‌ನ ಹಿರಿಯ ನಟ ರವಿಚಂದ್ರನ್ ಅವರ ಕಿರಿಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಚಿತ್ರ ʼತ್ರಿವಿಕ್ರಮʼ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣಲಿಲ್ಲ. ಮೊದಲ ಚಿತ್ರದ ಸೋಲನ್ನು ಒಪ್ಪಿಕೊಂಡಿರುವ ವಿಕ್ರಮ್‌ ಇದೀಗ ಎರಡನೇ ಚಿತ್ರವನ್ನು ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಕ್ರಮ್‌ ನಟನೆಯ ಎರಡನೇ ಚಿತ್ರಕ್ಕೆ ʼಮುಧೋಳ್‌ʼ ಎಂದು ಹೆಸರಿಡಲಾಗಿದ್ದು, ಬುಧವಾರ ಬೆಂಗಳೂರಿನ ನವರಂಗ್‌ ಚಿತ್ರರಂಗದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಈ ನೂತನ ಚಿತ್ರದ ಟೈಟಲ್‌ ಟೀಸರ್‌ ಅನ್ನು ಬಿಡುಗಡೆ ಮಾಡಲಾಗಿದೆ.

ಅಂದಾಜು 3 ನಿಮಿಷಗಳ ಟೀಸರ್‌ನಲ್ಲಿ ವಿಕ್ರಮ್‌ ಜೈಲು ಶಿಕ್ಷೆ ಅನುಭವಿಸುತ್ತಿರುವ ಗ್ಯಾಂಗ್‌ಸ್ಟರ್‌ ಪಾತ್ರದಲ್ಲಿ ಮಿಂಚಿದ್ದು, ಆ್ಯಕ್ಷನ್ ದೃಶ್ಯಗಳು ಗಮನ ಸೆಳೆಯುವಂತಿವೆ. ಆದರೆ, ಟೈಟಲ್‌ ಟೀಸರ್‌ನಲ್ಲಿ ಬಳಕೆಯಾಗಿರುವ ಹಿನ್ನೆಲೆ ಸಂಗೀತ ತಮಿಳಿನ ಹಿರಿಯ ನಟ ಕಮಲ್‌ ಹಾಸನ್‌ ಅಭಿನಯದ ʼವಿಕ್ರಮ್‌ʼ ಸಿನಿಮಾದ ಸಂಗೀತವನ್ನು ಹೋಲುವಂತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಟೈಟಲ್‌ಗೆ ಸರಿ ಹೊಂದುವಂತೆ ಮುಧೋಳ ನಾಯಿಯನ್ನು ಕೂಡ ಚಿತ್ರದಲ್ಲಿ ಪ್ರಮುಖವಾಗಿ ಬಳಸಿಕೊಂಡಿರುವುದು ವಿಶೇಷ.

ತಮಿಳು, ತೆಲುಗು ಚಿತ್ರರಂಗಗಳಲ್ಲಿ ಸಹಾಯಕ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಕಾರ್ತಿಕ್ ರಾಜನ್ ʼಮುಧೋಳ್ʼ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಆ್ಯಕ್ಷನ್ ಪ್ಯಾಕ್‌ ಕಥಾಹಂದರವುಳ್ಳ ಈ ಚಿತ್ರವನ್ನು ನಿರ್ದೇಶಿಸುವ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕರ್ನಾಟಕ ಉತ್ತರ ಪ್ರದೇಶದಂತಾಗಬೇಕು ಎಂದ ಸುಮಲತಾ : ತರಾಟೆ ತೆಗೆದುಕೊಂಡ ಕನ್ನಡಿಗರು

ʼತಂಡವ್ ಸ್ಟುಡಿಯೋಸ್ʼ ಬ್ಯಾನರ್‌ನಡಿ ರಕ್ಷಾ ವಿಜಯಕುಮಾರ್ ಹಾಗೂ ಸಿಲ್ಜು ಕಣ್ಣನ್ ಬಂಡವಾಳ ಹೂಡಿರುವ ʼಮುಧೋಳ್‌ʼ ಚಿತ್ರಕ್ಕೆ ಯುವರಾಜ್ ಚಂದ್ರನ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಈಗಾಗಲೇ 30 ದಿನಗಳ ಕಾಲ ಚಿತ್ರೀಕರಣ ಪೂರ್ಣಗೊಂಡಿದೆ. ಅಭಿಲಾಶ್, ರಘು ಮ್ಯೂಟಂಟ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಉಳಿದ ಕಲಾವಿದರ ಬಗ್ಗೆ ಸದ್ಯದಲ್ಲೇ ಮಾಹಿತಿ ಹಂಚಿಕೊಳ್ಳುವುದಾಗಿ ಚಿತ್ರತಂಡ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...