ಪಶ್ಚಿಮ ಬಂಗಾಳದಲ್ಲಿ ʼದಿ ಕೇರಳ ಸ್ಟೋರಿʼ ಸಿನಿಮಾ ಪ್ರದರ್ಶನ ನಿಷೇಧ

Date:

ಬಿಜೆಪಿಯ ವಿರುದ್ಧ ಕಿಡಿ ಕಾರಿದ ಮಮತಾ ಬ್ಯಾನರ್ಜಿ

ಬಿಜೆಪಿಗರು ʼಬಂಗಾಳ ಫೈಲ್ಸ್‌ʼ ತಯಾರಿಯಲ್ಲಿದ್ದಾರೆಂದ ʼದೀದಿʼ

ವಿವಾದಾತ್ಮಕ ಕಥಾಹಂದರವುಳ್ಳ ʼದಿ ಕೇರಳ ಸ್ಟೋರಿʼ ಚಿತ್ರದ ಪ್ರದರ್ಶನಗಳು ತಮಿಳುನಾಡಿನಲ್ಲಿ ರದ್ದಗೊಂಡ ಬೆನ್ನಲ್ಲೇ ಪಶ್ಚಿಮ ಬಂಗಾಳ ಸರ್ಕಾರ ತನ್ನ ರಾಜ್ಯದಲ್ಲಿಯೂ ಚಿತ್ರದ ಪ್ರದರ್ಶನವನ್ನು ನಿಷೇಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼದಿ ಕೇರಳ ಸ್ಟೋರಿʼ ಚಿತ್ರವನ್ನು ನಿಷೇಧಿಸಿರುವ ಬಗ್ಗೆ ಮಾಹಿತಿ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ” ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ನಿಷೇಧಿಸಲು ಪಶ್ಚಿಮ ಬಂಗಾಳ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ದ್ವೇಷ ಹರಡುವುದನ್ನು ತಡೆಯಲು ಮತ್ತು ಹಿಂಸಾಚಾರದ ಘಟನೆಗಳನ್ನು ತಪ್ಪಿಸಿ, ಶಾಂತಿಯನ್ನು ಕಾಪಾಡಲು ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ” ಎಂದಿದ್ದಾರೆ.

ಈ ಹಿಂದೆ ತೆರೆಕಂಡು ವಿವಾದ ಸೃಷ್ಟಿಸಿದ್ದ ʼದಿ ಕಾಶ್ಮೀರ್‌ ಫೈಲ್ಸ್‌ʼ ಮತ್ತು ಸದ್ಯ ವಿವಾದಕ್ಕೆ ಕಾರಣವಾಗಿರುವ ʼದಿ ಕೇರಳ ಸ್ಟೋರಿʼ ಎರಡೂ ಚಿತ್ರಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಮತಾ ಬ್ಯಾನರ್ಜಿ, “ʼದಿ ಕಾಶ್ಮೀರ್‌ ಫೈಲ್ಸ್‌ʼ ಚಿತ್ರ ಒಂದು ವರ್ಗವನ್ನು ಅವಮಾನಿಸಿದರೆ, ತಿರುಚಿದ ಕಥೆಯನ್ನು ಹೊಂದಿರುವ ʼದಿ ಕೇರಳ ಸ್ಟೋರಿʼ ಚಿತ್ರದ ಮೂಲಕ ಕೇರಳದ ಘನತೆಗೆ ಮಸಿ ಬಳಿಯುವ ಕೆಲಸ ಮಾಡಲಾಗುತ್ತಿದೆ. ಅಷ್ಟೇ ಅಲ್ಲ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಇಂತಹ ಚಿತ್ರಗಳನ್ನು ತಯಾರಿಸುವ ಸಲುವಾಗಿ ಬಿಜೆಪಿ, ಕೆಲವು ಸ್ಟಾರ್‌ ಕಲಾವಿದರಿಗೆ ಹಣ ಸಂದಾಯ ಮಾಡಿದೆ. ಹಣ ಪಡೆದಿರುವ ಕಲಾವಿದರು ಈಗಾಗಲೇ ಪಶ್ಚಿಮ ಬಂಗಾಳಕ್ಕೂ ಬಂದು ಹೋಗಿದ್ದಾರೆ. ತಿರುಚಿದ ಕಥೆಯನ್ನಿಟ್ಟುಕೊಂಡು ʼಬಂಗಾಳ ಫೈಲ್ಸ್‌ʼ ಸಿನಿಮಾ ಮಾಡಲು ಹೊರಟಿದ್ದಾರೆ” ಈ ಬಗ್ಗೆ ನಾನು ಮಾಹಿತಿ ಪಡೆದುಕೊಂಡಿದ್ದೇನೆ” ಎಂದು ಬಿಜೆಪಿ ಮತ್ತು ʼದಿ ಕೇರಳ ಸ್ಟೋರಿʼ ಚಿತ್ರತಂಡದ ವಿರುದ್ಧ ಕಿಡಿ ಕಾರಿದ್ದಾರೆ.

ಕೇರಳದ ಯುವತಿಯರನ್ನು ಬಲವಂತವಾಗಿ ಮತಾಂತರಿಸಿ ಭಯೋತ್ಪಾದಕ ಸಂಘಟನೆ ʼಐಸಿಸ್‌ʼಗೆ ಸೇರ್ಪಡೆ ಮಾಡಲಾಗಿದೆ ಎಂಬ ಎಳೆಯ ಸುತ್ತ ʼದಿ ಕೇರಳ ಸ್ಟೋರಿʼ ಚಿತ್ರದ ಕಥೆ ಮೂಡಿಬಂದಿದೆ. ಆದರೆ, 32 ಸಾವಿರ ಯುವತಿಯರು ಮತಾಂತರಕ್ಕೊಳಗಾಗಿ ಭಯೋತ್ಪಾದನೆಗೆ ಬಲವಂತವಾಗಿ ತಳ್ಳಲ್ಪಟ್ಟಿದ್ದಾರೆ ಎಂದು ತಿರುಚಿದ ಕಥೆಯನ್ನು ಟೀಸರ್‌ನಲ್ಲಿ ತೋರಿಸಲಾಗಿತ್ತು. ಟೀಸರ್‌ ವಿವಾದಕ್ಕೆ ಸಿಲುಕಿಕೊಂಡು, ಸಿನಿಮಾ ನಿಷೇಧಿಸುವಂತೆ ಜನ ಕೋರ್ಟ್‌ ಮೆಟ್ಟಿಲೇರುತ್ತಲೇ ವರಸೆ ಬದಲಿಸಿದ್ದ ಚಿತ್ರತಂಡ, ಮತಾಂತರಕ್ಕೊಳಗಾಗಿದ್ದ ಮೂರು ಜನ ಮಹಿಳೆಯರʼ ಕಥೆ ಇದು ಎಂದು ಹೇಳಿಕೊಂಡಿತ್ತು.

ಈ ಸುದ್ದಿ ಓದಿದ್ದೀರಾ? ತಮಿಳುನಾಡು | ಚಿತ್ರಮಂದಿರಗಳಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನ ರದ್ದು

ವಿವಾದದ ನಡುವೆಯೂ ತೆರೆಕಂಡಿರುವ ಈ ಚಿತ್ರಕ್ಕೆ ದೇಶದ ವಿವಿದೆಡೆಗಳಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ತಮಿಳುನಾಡಿನ ಸ್ಥಳೀಯ ಚಿತ್ರಮಂದರಿಗಳು ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಸ್ವಯಂ ಪ್ರೇರಿತವಾಗಿ ಚಿತ್ರದ ಪ್ರದರ್ಶನವನ್ನು ರದ್ದು ಪಡಿಸಲಾಗಿದೆ. ಕೇರಳದಲ್ಲೂ ಚಿತ್ರಕ್ಕೆ ಭಾರೀ ವಿರೋಧ ವ್ಯಕ್ಯವಾಗುತ್ತಿದ್ದು, ತಿರುಚಿದ ಕಥೆಯನ್ನು ಹೊಂದಿರುವ ಚಿತ್ರದ ಮೂಲಕ ಸಾಮಾಜದಲ್ಲಿ ದ್ವೇಷ ಹರಡಲಾಗುತ್ತಿದೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...