ಆದಾಯ ತೆರಿಗೆ ಪ್ರಕರಣ; ಯಶ್‌ಗೆ ಹೈಕೋರ್ಟ್‌ನಿಂದ ರಿಲೀಫ್

Date:

ಆದಾಯ ತೆರಿಗೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶ ನಟ ಯಶ್ ಅವರಿಗೆ ರಿಲೀಫ್ ನೀಡಿದೆ.

ನಟ ಯಶ್ ಅವರ ಆದಾಯ ತೆರಿಗೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ ನೋಟಿಸ್ ಅನ್ನು ರದ್ದು ಮಾಡಿದೆ.

2013-14 ರಿಂದ 2018-19 ಅವಧಿಯ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಐಟಿ ಇಲಾಖೆ ನೀಡಿದ್ದ ನೋಟಿಸ್ ಅನ್ನು ಯಶ್ ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಈ ಅರ್ಜಿಯವನ್ನು ವಿಚಾರಣೆ ನಡೆಸಿರುವ ನ್ಯಾಯಾಲಯ, ನೋಟಿಸ್ ಅನ್ನು ರದ್ದುಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಂಬಾಳೆ ಕನ್ಸ್​​​ಟ್ರಕ್ಷನ್ಸ್​ಗೆ ಸಂಬಂಧಿಸಿ ಐಟಿ ಇಲಾಖೆ ತನಿಖೆ ನಡೆಸಿತ್ತು. ಈ ಪ್ರಕರಣದಲ್ಲಿ ನಟ ಯಶ್ ವಾಸಿಸಿದ್ದ ಹೊಸಕೆರೆಹಳ್ಳಿ ಮನೆ, ಅವರು ಬಾಡಿಗೆ ಪಡೆದು ಉಳಿದುಕೊಂಡಿದ್ದ ತಾಜ್ ವೆಸ್ಟ್ ಎಂಡ್​ ಕೊಠಡಿಯನ್ನು ಶೋಧಿಸಿತ್ತು.

2021ರಲ್ಲಿ ನಟ ಯಶ್​​ಗೆ ಆದಾಯ ತೆರಿಗೆ ಕಾಯ್ದೆ ಸೆ.153ಸಿ ಅಡಿ ನೋಟಿಸ್ ನೀಡಿತ್ತು. ಇದನ್ನು ಪ್ರಶ್ನಿಸಿ ನಟ ಯಶ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನು ಓದಿದ್ದೀರಾ? ಅನಾರೋಗ್ಯದಿಂದ ಹಿರಿಯ ನಟ ಉಮೇಶ್ ನಿಧನ

ಮನೆ ಶೋಧಿಸಿದ ಬಳಿಕವೂ ‘ಶೋಧನೆ ನಡೆಸದ ವ್ಯಕ್ತಿ’ ಎಂದು ಪರಿಗಣಿಸಿ ಐಟಿ ನೋಟಿಸ್ ನೀಡಿದ್ದು ಏಕೆ ಎಂದು ಪ್ರಶ್ನಿಸಿದ ನಟ ಯಶ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.

‘ತಮ್ಮ ನಿವಾಸ ಶೋಧಿಸಲಾಗಿದೆ. ಆದರೂ ಶೋಧ ನಡೆಸದೇ ಇರುವವರಿಗೆ ನೀಡುವ 153ಸಿ ನೋಟಿಸ್ ನೀಡಲಾಗಿದೆ. ಇದು ಕಾನೂನು ಬಾಹಿರವೆಂದು’ ಯಶ್ ಪರ ವಕೀಲರು ವಾದಿಸಿದ್ದಾರೆ.

ಈ ನಡುವ ಪ್ರತಿವಾದ ಮಂಡಿಸಿರುವ ತೆರಿಗೆ ಇಲಾಖೆ, ‘ಹೊಂಬಾಳೆ ಕನ್ಸ್​​​ಟ್ರಕ್ಷನ್​​​​ನ ವಿಜಯ್ ಕುಮಾರ್ ವಿರುದ್ಧ ಶೋಧನೆ ವಾರಂಟ್ ಪಡೆಯಲಾಗಿತ್ತು. ಹೊಂಬಾಳೆಗೆ ಸಂಬಂಧಪಟ್ಟಂತೆ ಮಾತ್ರ ಯಶ್ ನಿವಾಸದಲ್ಲಿ ಶೋಧಿಸಲಾಗಿದೆ. ಹೀಗಾಗಿ ಯಶ್ ಶೋಧನೆಗೊಳಗಾದ ವ್ಯಕ್ತಿಯಲ್ಲ’ ಎಂದು ಐಟಿ ವಾದ ಮಾಡಿದೆ. ವಾದ ಪ್ರತಿವಾದ ಗಮನಿಸಿದ ಕೋರ್ಟ್​ ಯಶ್​​ಗೆ ಐಟಿ ಇಲಾಖೆ ಜಾರಿಗೊಳಿಸಿದ್ದ ನೋಟಿಸ್​ ಅನ್ನು ರದ್ದು ಮಾಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...