ಹಳದಿ ಜ್ವರ | ಲಸಿಕೆ ಹಾಕಿಸಿಕೊಳ್ಳದ 72 ಮಂದಿ ಕ್ವಾರಂಟೈನ್

Date:

  • ಸುಡಾನ್‌ನಿಂದ ಬಂದವರಲ್ಲಿ ಕೇರಳ ಮೂಲದವರು ಹೆಚ್ಚು
  • ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ 6 ದಿನ ಕ್ವಾರಂಟೈನ್‌

ರಾಜಧಾನಿ ಬೆಂಗಳೂರಿನಲ್ಲಿ ಹಳದಿ ಜ್ವರದ ಭೀತಿ ಹೆಚ್ಚಾಗಿದೆ. ಯುದ್ಧಪೀಡಿತ ಸುಡಾನ್​ನಿಂದ ಆಪರೇಷನ್ ಕಾವೇರಿ ಅಡಿಯಲ್ಲಿ ರಕ್ಷಣೆ ಮಾಡಿ ಭಾರತಕ್ಕೆ ಬಂದವರಲ್ಲಿ 78 ಮಂದಿ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿಲ್ಲದ ಕಾರಣ, ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ದೇಶದಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್‌ಗೆ ಒಳಗಾಗುತ್ತಿರುವವರ ಸಂಖ್ಯೆ ಕ್ಷೀಣಿಸಿದೆ. ಆದರೆ, ಹಳದಿ ಜ್ವರ ಮತ್ತು ಅಕಾಲಿಕ ಮಳೆಯ ಪರಿಣಾಮ ಬೆಂಗಳೂರಿನಲ್ಲಿ ಮಲೇರಿಯಾ ಮತ್ತು ಚಿಕನ್‌ ಗುನ್ಯಾಗೆ ಒಳಾಗುತ್ತಿರುವವರಲ್ಲಿ ಕ್ರಮೇಣ ಏರಿಕೆ ಕಂಡಿದೆ.

ಸುಡಾನ್‌ನಿಂದ ಬೆಂಗಳೂರಿಗೆ ಬಂದಿಳಿದವರಲ್ಲಿ, ಕೇರಳ ಮೂಲದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕರ್ನಾಟಕ, ತೆಲಂಗಾಣ, ತಮಿಳುನಾಡಿನವರು ನಂತರದ ಸ್ಥಾನದಲ್ಲಿದ್ದಾರೆ. ಹೀಗಾಗಿ, ಲಸಿಕೆ ಪಡೆಯದವರನ್ನು ಆರು ದಿನ ರಾಜೀವ್‌ ಗಾಂಧಿ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ ಮಾಡಲಾಗುತ್ತದೆ. ಕಣ್ಣು ಉರಿ, ಹಳದಿ ಕಣ್ಣು, ಜ್ವರ, ಶೀತ, ಸುಸ್ತು, ಮೈ ಕೈ ನೋವು ಇವುಗಳು ಹಳದಿ ಜ್ವರದ ಲಕ್ಷಣಗಳಾಗಿವೆ. ಕ್ವರಂಟೈನ್‌ನಲ್ಲಿರುವವರಿಗೆ ಈ ಲಕ್ಷಣಗಳು ಕಂಡುಬಂದಿಲ್ಲ. ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್‌ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ತಾಪಮಾನ ಹೆಚ್ಚಳ; ಮಧ್ಯಾಹ್ನದ ಕಾರ್ಯಕ್ರಮ ರದ್ದುಮಾಡಿ | 10 ಮುಖ್ಯ ಅಂಶ

ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದ 229 ಮಂದಿ ಭಾನುವಾರ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದರು. ಇವರಲ್ಲಿ 31 ಮಂದಿ ಲಸಿಕೆ ಹಾಕಿಸಿಕೊಳ್ಳದವರನ್ನು ಕ್ವಾರಂಟೈನ್‌ ಮಾಡಲಾಗಿದೆ. ಆಪರೇಷನ್‌ ಕಾವೇರಿ ಕಾರ್ಯಾಚರಣೆಯಡಿ ಒಟ್ಟು ದೇಶದ ವಿವಿಧ ರಾಜ್ಯಗಳ 582 ಮಂದಿ ಬೆಂಗಳೂರಿಗೆ ಬಂದಿಳಿದಿದ್ದಾರೆ.

ದಕ್ಷಿಣ ಆಫ್ರಿಕಾ, ದಕ್ಷಿಣ ಅಮೆರಿಕಾ, ಉಗಾಂಡ, ನೈಜೀರಿಯಾ, ಕೀನ್ಯಾ ಸೇರಿ ಕೆಲ ದೇಶಗಳಲ್ಲಿ ಹಳದಿ ಜ್ವರ ಹೆಚ್ಚಳವಾಗಿದೆ. ಹೀಗಾಗಿ ಹಳದಿಜ್ವರ ಕಾಣಿಸಿಕೊಂಡ ದೇಶಗಳಿಂದ ಬರುವವರು ಕಡ್ಡಾಯವಾಗಿ ಹಳದಿ ಜ್ವರದ ಲಸಿಕೆ ಪಡೆದು, ಅದಕ್ಕೆ ಸಂಬಂಧಿಸಿದ ದಾಖಲಾತಿ ತೋರಿಸಿದರಷ್ಟೆ ಅವರನ್ನು ಬಿಡಲಾಗುತ್ತದೆ. ಇಲ್ಲವಾದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ವಾರಂಟೈನ್‌ ಮಾಡಿ ರೋಗಗಳ ಗುಣ ಲಕ್ಷಣಗಳು ಕಾಣಿಸಿಕೊಳ್ಳದಿದ್ದರೆ ಆಸ್ಪತ್ರೆಯಿಂದ ತೆರಳುವಂತೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ರಾಜೀವ್ ಗಾಂಧಿ ವಸತಿ ಪ್ರೌಢಶಾಲೆ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ 15 ವರ್ಷದ...

ಅಮುಲ್ ಹಾಲಿನಲ್ಲಿ 98 ಪಟ್ಟು, ಮೊಸರಿನಲ್ಲಿ 2,100 ಪಟ್ಟು ಹೆಚ್ಚು ಬ್ಯಾಕ್ಟೀರಿಯಾಗಳಿವೆ: ವರದಿ

ಕನ್ನಡಿಗರ ಮೇಲೆ ಹೇರಲು ಉದ್ದೇಶಿಸಿದ್ದ ಗುಜರಾತ್‌ ಮೂಲದ 'ಅಮುಲ್‌' ಸಂಸ್ಥೆ ಉತ್ಪನ್ನಗಳ...

ದಾವಣಗೆರೆ | ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈಬಿಡಲು ಆರೋಗ್ಯ ಹಕ್ಕಿನ ಜಾಥಾ

ಸರ್ಕಾರಿ ಜಿಲ್ಲಾ ಆಸ್ಪತ್ರೆಗಳ ಖಾಸಗೀಕರಣ (PPP) ಸಂಪೂರ್ಣವಾಗಿ ಕೈಬಿಡಬೇಕು, ಎಲ್ಲಾ ಸರ್ಕಾರಿ...

ಥೈರಾಯ್ಡ್‌ ಅಂದ್ರೆ ಭಯವೇ? ವೈದ್ಯರು ಏನಂತಾರೆ ಗೊತ್ತಾ?

ದೇಹ ಎಷ್ಟು ಶಕ್ತಿ ಬಳಕೆ ಮಾಡಬೇಕು, ಹೃದಯ ಎಷ್ಟು ವೇಗವಾಗಿ ಬಡಿಯಬೇಕು,...